ಕರ್ನಾಟಕ

karnataka

ETV Bharat / education-and-career

ಕೆಪಿಎಸ್​ಸಿ ನೇಮಕಾತಿ: 247 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ - Panchayat Development Officer

ಈ ಹುದ್ದೆಗೆ ಅಭ್ಯರ್ಥಿಗಳು ಏಪ್ರಿಲ್​ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

panchayat-development-officer-recruitment-notification-from-kpsc
panchayat-development-officer-recruitment-notification-from-kpsc

By ETV Bharat Karnataka Team

Published : Mar 16, 2024, 1:37 PM IST

ಬೆಂಗಳೂರು: ಬಹು ನಿರೀಕ್ಷಿತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ_ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) ಅಧಿಸೂಚನೆ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯುತ್​ ರಾಜ್​ ಇಲಾಖೆಯಲ್ಲಿನ ಗ್ರೂಪ್​ ಸಿ ಹುದ್ದೆಗಳು ಇದಾಗಿದ್ದು, ಈ ಹುದ್ದೆಗಳಿಗೆ ಏಪ್ರಿಲ್​ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಅಧಿಸೂಚನೆ

ಹುದ್ದೆ ವಿವರ: ಒಟ್ಟು 247 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಹೈದರಾಬಾದ್​ ಕರ್ನಾಟಕಕ್ಕೆ 97 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ವಯೋಮಿತಿ:ಅಭ್ಯರ್ಥಿಯ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ 35 ವರ್ಷ. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಕಲಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ. ಪ.ಜಾ, ಪ.ಪಂ, ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ನಿವೃತ್ತ ಸೇವಾ ನೌಕರರಿಗೆ 50 ರೂ. ಅರ್ಜಿ ಶುಲ್ಕ ವಿಧಿಸಿದರೆ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:ಸ್ಪರ್ಧಾತ್ಮಕ ಪರೀಕ್ಷೆ ಇರಲಿದ್ದು, ಈ ಹುದ್ದೆಗೆ ಏಪ್ರಿಲ್​ 15ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಮೇ 15 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳುkpsc.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಭೂ ಮಾಪಕರ ಹುದ್ದೆಗೆ ಅರ್ಜಿ ಸಲ್ಲಿಕೆ:364 ಭೂ ಮಾಪಕರ ಹುದ್ದೆಗಳ ಭರ್ತಿಗೆ ಕೆಪಿಎಸ್​ಸಿ ಅಧಿಸೂಚನೆ ಹೊರಡಿಸಿದೆ. ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಬಿಇ ಅಥವಾ ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದೊಂದಿಗೆ ಪಿಯುಸಿ ವಿದ್ಯಾರ್ಹತೆ ಅಥವಾ ಲ್ಯಾಂಡ್​ ಅಂಡ್​ ಸಿಟಿ ಸರ್ವೆ ಪದವಿ ಪೂರ್ವ ಡಿಪ್ಲೊಮಾ ಅಥವಾ ಐಟಿಐ ಇನ್​ ಸರ್ವೆ ಟ್ರೇಡ್​ನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಗರಿಷ್ಠ ವಯೋಮಿತಿ 35 ವರ್ಷ ಆಗಿದ್ದು, ಪ. ಜಾ ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಕಲ ಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಮಾರ್ಚ್​​ 11ರಿಂದ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಕಡೆಯ ದಿನ ಏಪ್ರಿಲ್​ 10 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆkpsc.kar.nic.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್ ನೇಮಕಾತಿ: 93 ಬ್ಯಾಂಕ್​ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ABOUT THE AUTHOR

...view details