ಕರ್ನಾಟಕ

karnataka

ETV Bharat / education-and-career

ವಿಜಯಪುರದಲ್ಲಿ ಪೌರ ಕಾರ್ಮಿಕ ಹುದ್ದೆ ನೇಮಕಾತಿ: 93 ಹುದ್ದೆಗೆ ಅರ್ಜಿ ಆಹ್ವಾನ - ವಿಜಯಪುರದಲ್ಲಿ ಪೌರ ಕಾರ್ಮಿಕ ಹುದ್ದೆ

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಅರ್ಜಿ ಆಹ್ವಾನಿಸಲಾಗಿರುವ ಹುದ್ದೆಗಳ ಮಾಹಿತಿ ಇಲ್ಲಿದೆ.

Pourakarmika job notification from Vijayapura City Corporation
Pourakarmika job notification from Vijayapura City Corporation

By ETV Bharat Karnataka Team

Published : Feb 5, 2024, 1:27 PM IST

ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಕ್ರಮ ನಡೆಸಲಾಗಿದೆ. ಅದರ ಅನುಸಾರವಾಗಿ ವಿಜಯಪುರ ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿರುವ 93 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾನಗರ ಪಾಲಿಕೆಯಲ್ಲಿ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದೇ ಕೆಲಸ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ

ಹುದ್ದೆ ವಿವರ: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 93 ಪೌರ ಕಾರ್ಮಿಕ ಹುದ್ದೆಗೆ ಭರ್ತಿಗೆ ಕ್ರಮ.

ಅರ್ಹತೆ: ಈ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಬರಬೇಕು. ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸಬೇಕು.

ವೇತನ: 17,000-28,950 ರೂ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿ 55 ವರ್ಷ ವಯೋಮಿತಿಯನ್ನು ಮೀರಿರಬಾರದು.

ಆಯ್ಕೆ: ಮೆರಿಟ್​ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಈಗಾಗಲೇ ಹಾಲಿ, ದಿನಗೂಲಿ, ಸಮಾನ ಕೆಲಸಕ್ಕೆ ಸಮಾನ ವೇತನದಡಿ ಕಾರ್ಯ ನಿರ್ವಹಿಸುವವರಿಗೆ ಮೊದಲ ಅದ್ಯತೆ

ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ವಿಜಯಪುರ ಮಹಾನಗರ ಪಾಲಿಕೆ ವೆಬ್​ಸೈಟ್​​ನಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ಅರ್ಜಿ ನಮೂನೆ ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ವಿಜಯಪುರ ಮಹಾನಗರ ಪಾಲಿಕೆ, ಬಾಗಲಕೋಟೆ ರಸ್ತೆ, ಜಲನಗರ - 586109

ಈ ಹುದ್ದೆಗೆ ಫೆಬ್ರವರಿ 5 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್​ 5 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು vijayapuracity.mrc.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿದೆ ಉದ್ಯೋಗ:ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ತಾತ್ಕಾಲಿಕ ಗುತ್ತಿಗೆ ಆಧಾರದ ಒಟ್ಟು 6 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ರಾಜ್ಯ ಯೋಜನಾ ಸಂಯೋಜಕರು - ಸಮಾಜ ವಿಜ್ಞಾನ, ಜೀವ ವಿಜ್ಞಾನ, ಸೋಷಿಯಲ್​ ವರ್ಕ್​​, ರೂರಲ್​​​ ಮ್ಯಾನೇಜ್​ಮೆಂಟ್​ನಲ್ಲಿ ಸ್ನಾತಕೋತ್ತರ ಪದವಿ. ಮೂರು ವರ್ಷ ಸರ್ಕಾರ ಅಥವಾ ಸರ್ಕಾರೇತರ ಸಂಸ್ಥೆಯಲ್ಲಿ ನಿರ್ದಿಷ್ಟ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 24 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 8 ಕಡೇಯ ದಿನ. ಅಧಿಕೃತ ಅಧಿಸೂಚನೆ, ನಿಗದಿತ ಅರ್ಜಿ ಪಡೆಯಲು ಅಭ್ಯರ್ಥಿಗಳು dwcd.karnataka.gov.in ಭೇಟಿ ನೀಡಬಹುದು.

ಇದನ್ನೂ ಓದಿ: ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಅರ್ಜಿ ಆಹ್ವಾನ

ABOUT THE AUTHOR

...view details