ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಅದರ ಅನುಸಾರವಾಗಿ ವಿಜಯಪುರ ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿರುವ 93 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಇನ್ನೆರಡು ದಿನ ಮಾತ್ರ ಬಾಕಿ ಇದ್ದು, ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 93 ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಮಹಾನಗರ ಪಾಲಿಕೆಯಲ್ಲಿ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದೇ ಕೆಲಸ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತೆ: ಈ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಬರಬೇಕು. ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸಬೇಕು.
ವೇತನ: 17,000-28,950 ರೂ. ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿ 55 ವರ್ಷ ವಯೋಮಿತಿಯನ್ನು ಮೀರಿರಬಾರದು.
ಆಯ್ಕೆ: ಈಗಾಗಲೇ ಹಾಲಿ, ದಿನಗೂಲಿ, ಸಮಾನ ಕೆಲಸಕ್ಕೆ ಸಮಾನ ವೇತನದಡಿ ಕಾರ್ಯ ನಿರ್ವಹಿಸುವವರಿಗೆ ಮೊದಲ ಅದ್ಯತೆ
ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ವಿಜಯಪುರ ಮಹಾನಗರ ಪಾಲಿಕೆ ವೆಬ್ಸೈಟ್ನಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ಅರ್ಜಿ ನಮೂನೆ ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ವಿಜಯಪುರ ಮಹಾನಗರ ಪಾಲಿಕೆ, ಬಾಗಲಕೋಟೆ ರಸ್ತೆ, ಜಲನಗರ - 586109
ಈ ಹುದ್ದೆಗೆ ಫೆಬ್ರವರಿ 5 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್ 5 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು vijayapuracity.mrc.gov.inಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಬೀದರ್ನಲ್ಲಿದೆ ಉದ್ಯೋಗಾವಕಾಶ;ಬೀದರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲಾ ಯೋಜನಾ ಸಂಯೋಜಕರು, ಆರ್ಥಿಕ ಜ್ಞಾನ ಮತ್ತು ಅಕೌಂಟೆಟ್ ಸ್ಪೆಷಲಿಸ್ಟ್ ತಲಾ ಎರಡು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ: ಬೀದರ್ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ