ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮತ್ತೊಂದು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ವಿವರ: ಒಟ್ಟು 44 ಸಹಾಯ ಇಂಜಿನಿಯರ್ ಮತ್ತು ಜೂನಿಯರ್ ಪ್ರೋಗ್ರಾಂ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
- ಜೂನಿಯರ್ ಪ್ರೋಗ್ರಾಮರ್ (ಗ್ರೂಪ್ ಬಿ) - 5
- ಸಹಾಯಕ ಇಂಜಿನಿಯರ್ (ಸಿವಿಲ್ (ಗ್ರೂಪ್ ಬಿ) - 1
- ಸಹಾಯಕ ಗ್ರಂಥಾಲಯ ಪಾಲಕ (ಗ್ರೂಪ್-ಸಿ) - 1
- ಸಹಾಯಕರು (ಗ್ರೂಪ್ -ಸಿ) - 12
- ಜೂನಿಯರ್ ಸಹಾಯಕ (ಗ್ರೂಪ್- ಸಿ) - 25
ವಿದ್ಯಾರ್ಹತೆ: ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ನಲ್ಲಿ ಪದವಿ, ಸಿವಿಲ್ ಇಂಜಿನಿಯರಿಂಗ್ ಪದವಿ, ಲೈಬ್ರರಿ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ, ಪದವಿ, ಪಿಯುಸಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗೆ ಕನಿಷ್ಠ 18, ಗರಿಷ್ಠ 35 ವರ್ಷ. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ, ಪ.ಪಂ ಮತ್ತು ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.