ಕರ್ನಾಟಕ

karnataka

ETV Bharat / education-and-career

ಶಿವಮೊಗ್ಗದ ಕೃಷಿ ಇಲಾಖೆಯಲ್ಲಿ ಪದವಿ ಆದವರಿಗೆ ಇದೆ ಉದ್ಯೋಗಾವಕಾಶ: ನೀವೂ ಟ್ರೈ ಮಾಡಿ

ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಅಹರ್ತೆ ಇದ್ದವರು ಅರ್ಜಿ ಸಲ್ಲಿಕೆ ಮಾಡಬಹುದು.

shivamogga-district-agriculture-department-recruitment-for-contract-job
ಉದ್ಯೋಗ ಮಾಹಿತಿ (ಈಟಿವಿ ಭಾರತ್​​)

By ETV Bharat Karnataka Team

Published : 5 hours ago

ಶಿವಮೊಗ್ಗ: ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ.

ಹುದ್ದೆ ವಿವರ:ಜಿಲ್ಲಾ ಸಲಹೆಗಾರರು 01 ಹುದ್ದೆ

ವಿದ್ಯಾರ್ಹತೆ: ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 02 ಹುದ್ದೆ ವಿದ್ಯಾರ್ಹತೆ ಬಿಎಸ್​ಸಿ(ಕೃಷಿ) ಪದವಿ, ಉತ್ತಮ ಕಂಪ್ಯೂಟರ್ ಪರಿಣಿತಿ, ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಉಳ್ಳವರಿಗೆ ಪ್ರಾಶಸ್ತ್ಯ ಕೊಡಲಾಗುವುದು.

ವಯೋಮಿತಿ: ಈ ಹುದ್ದೆಗೆ ಕನಿಷ್ಟ ವಯೋಮಿತಿ 18 ವರ್ಷಗಳು, ಗರಿಷ್ಟ ಸಾಮಾನ್ಯ 35, ಪ.ಜಾತಿ, ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ವಿಶೇಷ ಸೂಚನೆ: ಈ ಹುದ್ದೆಗೆ ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿಂದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ) ಈ ನೇಮಕಾತಿಗೆ ಅರ್ಹರಿರುವುದಿಲ್ಲ.

ಈ ಹುದ್ದೆಯನ್ನು ಆರು ತಿಂಗಳ ಅವಧಿಗೆ ಅಂದರೆ 31-03-2025 ರವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿದೆ.

ಈ ಹುದ್ದೆಗೆ ಅಭ್ಯರ್ಥಿಗಳು ಕೃಷಿ ಇಲಾಖೆಯಲ್ಲಿ ನಿಗದಿತ ಅರ್ಜಿ ಪಡೆದು ಭರ್ತಿ ಮಾಡಿ, ಅದರೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರ ಕಚೇರಿ ಓ. ಟಿ. ರಸ್ತೆ ಶಿವಮೊಗ್ಗ ಇಲ್ಲಿಗೆ ಅಂಚೆ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ನ. 5 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಕೃಷಿ ಇಲಾಖೆಯ ಕಚೇರಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿದೆ ಉದ್ಯೋಗಾವಕಾಶ; ಗುತ್ತಿಗೆ ಆಧಾರದ ಮೇಲೆ ನೇಮಕಾತಿ

ABOUT THE AUTHOR

...view details