ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗದಿಂದ (ಎಸ್ಎಸ್ಸಿ) ಹಿರಿಯ ಮತ್ತು ಕಿರಿಯ ಕ್ಲರಿಕಲ್ ಸಹಾಯಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳು ಇವಾಗಿದ್ದು, ಒಟ್ಟು 121 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರೈಲ್ವೆ ಬೋರ್ಡ್, ವಿದೇಶಾಂಗ ಸಚಿವಾಲಯ, ಕೇಂದ್ರ ಪಾಸ್ಪೋರ್ಟ್ ಸಂಘಟನೆ, ಶಸ್ತ್ರಾಸ್ತ್ರ ಬಲ ಮುಖ್ಯ ಕಚೇರಿ ಸೇರಿದಂತೆ ಪ್ರಮುಖ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಹುದ್ದೆ ವಿವರ: ಸಿಬ್ಬಂದಿ ನೇಮಕಾತಿ ಆಯೋಗದಿಂದ ಅರ್ಜಿ ಆಹ್ವಾನಿಸಲಾಗಿರುವ ಹುದ್ದೆಗಳು ಹೀಗಿವೆ
- ಕಿರಿಯ ಸೆಕ್ರೆಟರಿಯೇಟ್ ಸಹಾಯಕ - 52
- ಹಿರಿಯ ಸೆಕ್ರೆಟರಿಯೇಟ್ ಸಹಾಯಕ - 69
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವೇತನ: ಕಿರಿಯ ಸೆಕ್ರೆಟರಿಯೇಟ್ ಸಹಾಯಕ 19900-63200 ರೂ. ಮಾಸಿಕ, ಹಿರಿಯ ಸೆಕ್ರೆಟರಿಯೇಟ್ ಸಹಾಯಕ 25500-81100 ರೂ. ಮಾಸಿಕ ವೇತನ ಸಿಗಲಿದೆ.
ವಯೋಮಿತಿ: ಕಿರಿಯ ಸೆಕ್ರೆಟರಿಯೇಟ್ ಸಹಾಯಕರ ಹುದ್ದೆಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ಆಗಿದ್ದು, ಹಿರಿಯ ಸೆಕ್ರೆಟರಿಯೇಟ್ ಸಹಾಯಕ ಹುದ್ದೆಗೆ ಗರಿಷ್ಠ ವಯೋಮಿತಿ 50 ವರ್ಷ ಆಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.