ಕರ್ನಾಟಕ

karnataka

3,712 ಕಿರಿಯ ದರ್ಜೆ ಕ್ಲರ್ಕ್​, ಡೇಟಾ ಎಂಟ್ರಿ ಆಪರೇಟರ್​ ಹುದ್ದೆ ನೇಮಕಾತಿ - SSC CHSL Recruitment

By ETV Bharat Karnataka Team

Published : Apr 11, 2024, 12:33 PM IST

ಸಿಬ್ಬಂದಿ ನೇಮಕಾತಿ ಆಯೋಗದಿಂದ ಹೊರಡಿಸಲಾದ ಹುದ್ದೆಗಳ ಅಧಿಸೂಚನೆ, ಅರ್ಹತೆ, ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ssc-recruitment-for-lower-division-clerk-and-data-entry-operator
ssc-recruitment-for-lower-division-clerk-and-data-entry-operator

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗದಿಂದ 3,712 ಕಿರಿಯ ದರ್ಜೆ ಕ್ಲರ್ಕ್​ ಮತ್ತು ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಹುದ್ದೆ ವಿವರ: ಎಸ್​ಎಸ್​ಸಿ ಸಿಎಚ್​​ಎಸ್​​ಎಲ್​ 3712 ಹುದ್ದೆಗಳ ಭರ್ತಿಗೆ ಕ್ರಮ

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 27 ವರ್ಷ ವಯೋಮಿತಿ ಪೂರ್ಣಗೊಳಿಸಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ. ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅಧಿಸೂಚನೆ

ಅರ್ಜಿ ಸಲ್ಲಿಕೆ:ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ ಮತ್ತು ವಿಶೇಷ ಚೇತನ, ಮಹಿಳಾ ಹಾಗೂ ನಿವೃತ್ತ ಸೇವಾಧಾರರ ಹುದ್ದೆಗೆ ಅರ್ಜಿ ಶುಲ್ಕ ವಿನಾಯಿತಿ ಮಾಡಲಾಗಿದೆ. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂ ಶುಲ್ಕ ವಿಧಿಸಲಾಗಿದೆ.

ಆಯ್ಕೆ:ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ನಡೆಸಲಾಗುವುದು. ಈ ಹುದ್ದೆಗೆ ಎಪ್ರಿಲ್​ 8ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನ ಮೇ 7 ಆಗಿದೆ. ಈ ಹುದ್ದೆಗಳಿಗೆ ಜೂನ್​​ ಅಥವಾ ಜುಲೈನಲ್ಲಿ ಲಿಖಿತ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಅಭ್ಯರ್ಥಿಗಳು ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಜೂನಿಯರ್​ ಇಂಜಿನಿಯರಿಂಗ್​ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಏಪ್ರಿಲ್​ 18 ಕಡೇ ದಿನ:ಸಿಬ್ಬಂದಿ ನೇಮಕಾತಿ ಆಯೋಗದಿಂದ 968 ಜೂನಿಯರ್​​ ಇಂಜಿನಿಯರ್​​ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆಗೆ ಏಪ್ರಿಲ್​ 18 ಕಡೇಯ ದಿನವಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಹುದ್ದೆಗಳ ಭರ್ತಿ ನಡೆಸಲಾಗುವುದು. ಡಿಪ್ಲೊಮಾ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 32 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ. ಇತರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈ ಹುದ್ದೆ ನೇಮಕಾತಿ ನಡೆಸಲಾಗುವುದು. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಏಪ್ರಿಲ್​ 18 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ssc.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: 4,660 ಸಬ್​ ಇನ್ಸ್​​ಪೆಕ್ಟರ್​​, ಕಾನ್ಸ್​ಟೇಬಲ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ

ABOUT THE AUTHOR

...view details