ಕರ್ನಾಟಕ

karnataka

ETV Bharat / education-and-career

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಟೈಪಿಸ್ಟ್​, ಜವಾನ ಹುದ್ದೆಗೆ ಅರ್ಜಿ ಆಹ್ವಾನ - belagavi district Court recruitment

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 41 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

Stenographer typist and peon job in Belagavi district Court
Stenographer typist and peon job in Belagavi district Court

By ETV Bharat Karnataka Team

Published : Mar 20, 2024, 2:01 PM IST

Updated : Mar 20, 2024, 2:29 PM IST

ಬೆಂಗಳೂರು: ಬೆಳಗಾವಿ ಜಿಲ್ಲಾ ನ್ಯಾಯ ಘಟಕದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಸುವಿಕೆ ಸೇರಿದಂತೆ ಇತರೆ ಮಾಹಿತಿಗಳು ಇಲ್ಲಿವೆ.

ಹುದ್ದೆ ವಿವರ: ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿನ 41 ಹುದ್ದೆಗಳ ವಿವರ ಇಂತಿದೆ.

  • ಸ್ಟೆನೋಗ್ರಾಫರ್​​ ಗ್ರೇಡ್​​ 3 - 5
  • ಟೈಪಿಸ್ಟ್​​​ -1
  • ಪ್ರೊಸೆಸ್​ ಸರ್ವರ್​ -2
  • ಜವಾನ - 33

ವಿದ್ಯಾರ್ಹತೆ: ಶೀಘ್ರಲಿಪಿಗಾರ, ಟೈಪಿಸ್ಟ್​​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಕಮರ್ಷಿಯಲ್​ ಪ್ರಾಕ್ಟೀಸ್​ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ ಉತ್ತೀರ್ಣತೆ ಹೊಂದಿರಬೇಕು.

ಪ್ರೊಸೆಸ್​​ ಸರ್ವರ್ ಹುದ್ದೆಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಜವಾನ ಹುದ್ದೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿಕಲಚೇತನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿ ನೀಡಲಾಗಿದೆ.

ಸ್ಟೆನೋಗ್ರಾಫರ್​, ಟೈಪಿಸ್ಟ್​ ಹುದ್ದೆಗೆ ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಪ್ರೊಸೆಸ್​ ಸರ್ವರ್​ ಮತ್ತು ಜವಾನ ಹುದ್ದೆಗೆ ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್​​ ಪಟ್ಟಿ, ಟೈಪಿಂಗ್​ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗೆ ಮಾರ್ಚ್​ 14 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಕಡೆಯ ದಿನಾಂಕ ಎಪ್ರಿಲ್​ 14 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳುbelagavi.dcourts.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: KEAಯಿಂದ 44 ಹುದ್ದೆಗಳ ಭರ್ತಿಗೆ ಅಧಿಸೂಚನೆ; ಇಲ್ಲಿದೆ ಸಂಪೂರ್ಣ ಮಾಹಿತಿ

Last Updated : Mar 20, 2024, 2:29 PM IST

ABOUT THE AUTHOR

...view details