ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ(ಬಿಇಎಲ್) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕ ಅವಧಿಗೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಒಟ್ಟು 55 ಹುದ್ದೆಗಳ ಭರ್ತಿ.
- ಟ್ರೈನಿ ಇಂಜಿನಿಯರ್: 33
- ಪ್ರಾಜೆಕ್ಟ್ ಇಂಜಿನಿಯರ್: 22
ವಿದ್ಯಾರ್ಹತೆ: ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ, ಬಿ.ಟೆಕ್ ಅಥವಾ ಬಿ.ಎಸ್ಸಿ ಪದವಿ ಹೊಂದಿರಬೇಕು.
ವಯೋಮಿತಿ: ಟ್ರೈನಿ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 28 ವರ್ಷ. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 32 ವರ್ಷ.
ವಿಶೇಷ ಸೂಚನೆ: ಟ್ರೈನಿ ಇಂಜಿನಿಯರಿಂಗ್ ಹುದ್ದೆಯನ್ನು 2 ವರ್ಷಗಳ ಅವಧಿಗೆ ನೇಮಕಾತಿ ನಡೆಸಲಾಗುತ್ತಿದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಒಂದು ವರ್ಷ ಹುದ್ದೆ ವಿಸ್ತರಣೆ ಮಾಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ 6 ತಿಂಗಳ ಹುದ್ದೆ ನಿರ್ವಹಣೆ ಅನುಭವ ಹೊಂದಿರಬೇಕು.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ 3 ವರ್ಷದ ಅವಧಿಗೆ ನೇಮಕಾತಿ ನಡೆಸಲಾಗುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಒಂದು ವರ್ಷ ಹುದ್ದೆ ವಿಸ್ತರಣೆ ನಡೆಯಲಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಎರಡು ವರ್ಷದ ಹುದ್ದೆ ನಿರ್ವಹಣೆ ಅನುಭವ ಹೊಂದಿರಬೇಕು.