ಕರ್ನಾಟಕ

karnataka

ETV Bharat / education-and-career

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಹುದ್ದೆಗಳ ಭರ್ತಿಗೆ ಅಧಿಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿರುವ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

typist and peon job in Bengaluru Rural District Court
typist and peon job in Bengaluru Rural District Court

By ETV Bharat Karnataka Team

Published : Feb 19, 2024, 3:17 PM IST

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಟೈಪಿಸ್ಟ್​ ಮತ್ತು ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 58 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ

ಹುದ್ದೆ ವಿವರ: ಟೈಪಿಸ್ಟ್​​​ 30, ಜವಾನ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಟೈಪಿಸ್ಟ್​ ಹುದ್ದೆಗೆ ಅರ್ಜಿ ಸಲ್ಲಿಸುವ ಆಕಾಂಕ್ಷಿಗಳು ಪಿಯುಸಿ ಅಥವಾ ಡಿಪ್ಲೊಮಾ ಇನ್​ ಕಮರ್ಷಿಯಲ್​ ಪ್ರಾಕ್ಟಿಸ್​​ನಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಫ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಟೈಪಿಂಗ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಜವಾನ ಹುದ್ದೆಗೆ 17000-28950 ರೂ. ಮಾಸಿಕ

ಟೈಪಿಸ್ಟ್​​​ : 21400-42000 ರೂ. ಮಾಸಿಕ

ಅರ್ಜಿ ಸಲ್ಲಿಕೆ ಮತ್ತು ಶುಲ್ಕ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಈ ಹುದ್ದೆಗೆ ಫೆಬ್ರವರಿ 16ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಮಾರ್ಚ್​ 20 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು bengalururural.dcourts.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ:ಕರ್ನಾಟಕ ವಿದ್ಯುತ್​ ನಿಗಮ ನಿಯಮಿತದಲ್ಲಿದೆ ಉದ್ಯೋಗಾವಕಾಶ

ABOUT THE AUTHOR

...view details