ಕರ್ನಾಟಕ

karnataka

ETV Bharat / education-and-career

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಟೈಪಿಸ್ಟ್​ ಸೇರಿದಂತೆ 26 ಹುದ್ದೆ - Uttara kannada District Court job - UTTARA KANNADA DISTRICT COURT JOB

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್​ ನ್ಯೂಸ್​ ಇದೆ. ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಟೈಪಿಸ್ಟ್​, ಪ್ರೊಸೆಸ್​ ಸರ್ವರ್​​​ ಸೇರಿದಂತೆ ಒಟ್ಟು 26 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

typist and process server Job Recruitment from Uttara kannada District Court
ಉದ್ಯೋಗ ನೇಮಕಾತಿ (ಸಾಂದರ್ಭಿಕ ಚಿತ್ರ)

By ETV Bharat Karnataka Team

Published : Jun 20, 2024, 5:08 PM IST

ಬೆಂಗಳೂರು: ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಟೈಪಿಸ್ಟ್​, ಪ್ರೊಸೆಸ್​ ಸರ್ವರ್​​​ ಸೇರಿದಂತೆ ಒಟ್ಟು 26 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ (ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯ)

ಹುದ್ದೆ ವಿವರ: ಒಟ್ಟು 26 ಹುದ್ದೆ ನೇಮಕಾತಿ

  • ಟೈಪಿಸ್ಟ್​​​ -3
  • ಟೈಪಿಸ್ಟ್​​-ಕಾಪಿಸ್ಟ್​​ -3
  • ಪ್ರೊಸೆಸ್​ ಸರ್ವರ್​ -20

ವಿದ್ಯಾರ್ಹತೆ: ಟೈಪಿಸ್ಟ್​​​​, ಟೈಪಿಸ್ಟ್​​-ಕಾಪಿಸ್ಟ್​​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಕಮರ್ಷಿಯಲ್​ ಪ್ರಾಕ್ಟೀಸ್​ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೇ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಹಿರಿಯ ಶ್ರೇಣಿಯ ಟೈಪಿಂಗ್​ನಲ್ಲಿ ಉತ್ತೀರ್ಣರಾಗಿರಬೇಕು.

ಪ್ರೊಸೆಸ್​ ಸರ್ವರ್​ ಹುದ್ದೆಗೆ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಹುದ್ದೆಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕದ ವಿವರ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ 100ರೂ ಅರ್ಜಿ ಶುಲ್ಕ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 150 ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​​, ಟೈಪಿಂಗ್​ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅಭ್ಯರ್ಥಿಗಳು ಜೂನ್​ 20ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 19 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು uttarakannada.dcourts.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ಮೈಸೂರು ಮಹಾನಗರ ಪಾಲಿಕೆ ನೇಮಕಾತಿ: 252 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ABOUT THE AUTHOR

...view details