ಕರ್ನಾಟಕ

karnataka

ETV Bharat / education-and-career

ಅಂಗನವಾಡಿಯಲ್ಲಿ ಉದ್ಯೋಗ: ಬೆಳಗಾವಿ, ಕಲಬುರಗಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ - Anganwadi Jobs

ಬೆಳಗಾವಿಯಲ್ಲಿ 313, ಕಲಬುರಗಿಯಲ್ಲಿ 299 ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

WCD Notification for Belagavi and kalaburagi Anganwadi Worker and Helpers post
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Jul 19, 2024, 1:09 PM IST

ಬೆಂಗಳೂರು: ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿನ ವಿವಿಧ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತರು ಮತ್ತು ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ:

ಬೆಳಗಾವಿ ಜಿಲ್ಲೆಯಲ್ಲಿರುವ ಒಟ್ಟು ಹುದ್ದೆಗಳು- 313

  • ಅಂಗನವಾಡಿ ಕಾರ್ಯಕರ್ತರು - 61
  • ಅಂಗನವಾಡಿ ಸಹಾಯಕಿಯರು - 252

ಕಲಬುರಗಿ ಜಿಲ್ಲೆಯಲ್ಲಿರುವ ಹುದ್ದೆಗಳ ವಿವರ- 299

  • ಅಂಗನವಾಡಿ ಕಾರ್ಯಕರ್ತರು - 61
  • ಅಂಗನಾಡಿ ಸಹಾಯಕಿಯರು - 238

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 19ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ, ಆನ್​ಲೈನ್​ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ನಿಗದಿಯಾಗಿಲ್ಲ. ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರು ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆ ಗಡುವು: ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬೆಳಗಾವಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ಆಗಸ್ಟ್​ 4. ಕಲಬುರಗಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ಆಗಸ್ಟ್​ 7.

ಅರ್ಜಿ ಸಲ್ಲಿಸುವ ವಿಧಾನ:ಅಭ್ಯರ್ಥಿಗಳು http://karnemakaone.kar.nic.in/abcd/ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆ ಆಯ್ಕೆ ಮಾಡಿ, ಅಗತ್ಯ ಪ್ರಮಾಣ ಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:ಉತ್ತರ ಕನ್ನಡ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

ABOUT THE AUTHOR

...view details