ಬೆಂಗಳೂರು: ಗದಗ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ ಪ್ರಕಟಿಸಲಾಗಿದೆ.
ಗದಗ ಜಿಲ್ಲೆಯಲ್ಲಿನ ನೇಮಕಾತಿ:ಜಿಲ್ಲೆಯಲ್ಲಿ ಒಟ್ಟು 196 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ 46 ಅಂಗನವಾಡಿ ಕಾರ್ಯಕರ್ತರು ಮತ್ತು 150 ಅಂಗನವಾಡಿ ಸಹಾಯಕರ ಹುದ್ದೆ ಆಗಿದೆ.
ಗದಗದ ಈ ತಾಲೂಕಿನಲ್ಲಿದೆ ಹುದ್ದೆ
- ಮುಂಡರಗಿ - 29
- ನರಗುಂದ - 17
- ಗದಗ - 45
- ರೋಣ - 35
- ಶಿರಹಟ್ಟಿ -70
ಅರ್ಜಿ ಸಲ್ಲಿಕೆ ಕಡೆಯ ದಿನ: ಸೆಪ್ಟೆಂಬರ್ 17
ವಿಜಯನಗರ ಜಿಲ್ಲೆಯಲ್ಲಿ ನೇಮಕಾತಿ: ಜಿಲ್ಲೆಯಲ್ಲಿ 297 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ 58 ಕಾರ್ಯಕರ್ತರು ಮತ್ತು 239 ಅಂಗನವಾಡಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
- ಹೂವಿನ ಹಡಗಲಿ - 56
- ಹಗರಿಬೊಮ್ಮನಹಳ್ಳಿ 32
- ಹೊಸಪೇಟೆ - 54
- ಕೂಡ್ಗಿಗಿ - 53
- ಹರಪನಹಳ್ಳಿ - 82
- ಕೊಟ್ಟೂರು - 21
ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಸೆಪ್ಟೆಂಬರ್ 12
ಯಾದಗಿರಿಯಲ್ಲಿ 470 ಹುದ್ದೆ: ಜಿಲ್ಲೆಯಲ್ಲಿ 159 ಅಂಗನವಾಡಿ ಕಾರ್ಯಕರ್ತರು ಮತ್ತು 311 ಅಂಗನವಾಡಿ ಸಹಾಯಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
- ಶಹಾಪುರದಲ್ಲಿ - 124
- ಸುರಪುರ - 221
- ಯಾದಗಿರಿ - 54
- ಗುರುಮಠಕಲ್ - 71
ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್ 13 ಆಗಿದೆ.
ವಿದ್ಯಾರ್ಹತೆ:ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:ಕನಿಷ್ಠ 19ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ, ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ನಿಗದಿಯಾಗಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರು ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆ ಆಯ್ಕೆ ಮಾಡಿ, ಅಗತ್ಯ ಪ್ರಮಾಣ ಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಬೆಂಗಳೂರಿನ ಕಾಫಿ ಬೋರ್ಡ್ನಲ್ಲಿ ಗ್ರಾಫಿಕ್ ಡಿಸೈನರ್, ಕಂಟೆಂಟ್ ಕ್ರಿಯೇಟರ್ ಹುದ್ದೆ