ಕರ್ನಾಟಕ

karnataka

ETV Bharat / entertainment

1 ಸಿನಿಮಾ, 5 ನಿರ್ದೇಶಕರು, 5 ಕಥೆ: ಇದು 'ಬಿಟಿಎಸ್' - BTS Kannada Movie - BTS KANNADA MOVIE

'ಬಿಟಿಎಸ್' ಶೀರ್ಷಿಕೆಯ ಚಿತ್ರದ ಟ್ರೇಲರ್​ ಅನಾವರಣಗೊಂಡಿದೆ. ಐವರು ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು ಮಾಡಿರುವ ಸಿನಿಮಾವಿದು.

BTS film team
ಬಿಟಿಎಸ್ ಚಿತ್ರತಂಡ (ETV Bharat)

By ETV Bharat Entertainment Team

Published : Aug 23, 2024, 7:51 PM IST

ಕನ್ನಡ ಚಿತ್ರರಂಗದಲ್ಲಿ ಒಂದು ಸಿನಿಮಾವನ್ನು ಇಬ್ಬರು ನಿರ್ದೇಶಕರು ಸೇರಿ ನಿರ್ದೇಶಿಸಿರುವ ಉದಾಹರಣೆಗಳು ಸಾಕಷ್ಟಿವೆ. ಆದ್ರೆ ಐವರು ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು 'ಬಿಟಿಎಸ್' ಎಂಬ ಸಿನಿಮಾ ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಗೆಲ್ಲಲು ಮುಂದಾಗಿದ್ದಾರೆ‌. ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ.ಶೆಟ್ಟಿ ಸಾಥ್ ನೀಡಿ, ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು ಭೀಮ ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಅನಾವರಣಗೊಳಿಸಿದ್ದಾರೆ.

ಬಿಟಿಎಸ್ (ಬಿಹೈಂಡ್ ದಿ ಸ್ಕ್ರೀನ್) ಚಿತ್ರವನ್ನು ಪ್ರಜ್ವಲ್​ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್.ಶಂಕದ್​, ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ತೆರೆಯ ಹಿಂದಿನ ವಿಷಯಗಳನ್ನು ಐವರು ನಿರ್ದೇಶಕರು ತೆರೆಯ ಮೇಲೆ ತರುವ ಹೊಸ ಪ್ರಯತ್ನ ಮಾಡಿದ್ದಾರೆ. ಚಿತ್ರದ ಟ್ರೇಲರ್ ಚೆನ್ನಾಗಿದೆ. ಚಿತ್ರತಂಡಕ್ಕೆ ಶುಭವಾಗಲಿ ಎಂದು ನಿರ್ಮಾಪಕ ಕೃಷ್ಣ ಸಾರ್ಥಕ್ ಹಾರೈಸಿದರು.

ಬಿಟಿಎಸ್ ಚಿತ್ರತಂಡ (ETV Bharat)

ಈ ವೇಳೆ ನಿರ್ದೇಶಕರಲ್ಲಿ ಒಬ್ಬರಾದ ಕುಲದೀಪ್ ಕಾರಿಯಪ್ಪ ಮಾತನಾಡಿ, ಜೀವನದಲ್ಲಿ ಸಾಧನೆಗೆ ಮುಂದಾದಾಗ ನಮ್ಮನ್ನು ಯಾರೂ ಬೆಂಬಲಿಸುವುದಿಲ್ಲ ಎಂದು ಸಮಾಜವನ್ನು ಬಯ್ಯುವುದಕ್ಕೆ ಮುಂದಾಗುತ್ತೇವೆ. ಸಾಧನೆ ಮಾಡಲು ಮುಂದಾದಾಗ ಏನೆಲ್ಲಾ ಸಮಸ್ಯೆ ಎದುರಾಗುತ್ತದೆ ಎನ್ನುವುದೇ ಕಥೆಯ ತಿರುಳು. ನನ್ನ ಕಥೆಯ ಹೆಸರು 'ಹೀರೋ'. ಅಪರೂಪದ ವಿಷಯಗಳನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ ಎಂದು ವಿವರ ನೀಡಿದರು.

ಮತ್ತೊಬ್ಬ ನಿರ್ದೇಶಕ ಸಾಯಿ ಶ್ರೀನಿಧಿ ಮಾತನಾಡಿ, ಸಾಲ ಮಾಡಿಯಾದರೂ ಚಿತ್ರ ಮಾಡಬೇಕು ಎನ್ನುವ ಆಸೆ ನನಗೆ. ನನ್ನ ಆಸೆಗೆ ನಿರ್ಮಾಪಕ ಮುರುಳಿ ಕೃಷ್ಣ ನೆರವಾದರು. ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ‌. ಕಾಫಿ, ಸಿಗರೆಟ್ ಮತ್ತು ಲೈನ್ ಎನ್ನುವುದು ನನ್ನ ಕಥೆಯ ಭಾಗ ಎಂದು ಮಾಹಿತಿ ನೀಡಿದರು.

ಬಿಟಿಎಸ್ ಚಿತ್ರತಂಡ (ETV Bharat)

ನಿರ್ದೇಶಕ ಪ್ರಜ್ವಲ್ ರಾಜ್ ಮಾತನಾಡಿ, "ಬಾನಿಗೊಂದು ಎಲ್ಲೆ ಎಲ್ಲಿದೆ" ಎನ್ನುವುದು ನಾನು ನಿರ್ದೇಶನ ಮಾಡಿರುವ ಕಥೆಯ ಭಾಗ ಎಂದರು.

ಈಗಾಗ್ಲೇ ಕಿರುತೆರೆ ಹಾಗು ಹಿರಿತೆರೆಯಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ಅಪೂರ್ವ ಭಾರದ್ವಾಜ್ ಮಾತನಾಡಿ, ಇಷ್ಟು ವರ್ಷ ನಟಿಯಾಗಿ ಕಾಣಿಸಿಕೊಂಡಿದ್ದೆ. ಈಗ ನಿರ್ದೇಶಕಿಯಾಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಐದು ನಿರ್ದೇಶಕರು ಐದು ಕಥೆ ಹೇಳುವುದು ಎನ್ನುವ ವಿಷಯ ಆಸಕ್ತಿಕರವಾದದ್ದು. ಹೀಗಾಗಿ ಒಂದು ಕಥೆಯನ್ನು ನಿರ್ದೇಶನ ಮಾಡಲು ಒಪ್ಪಿಕೊಂಡೆ. ಮಹದೇವ ಪ್ರಸಾದ್ ಮತ್ತು ಶ್ರೀಪ್ರಿಯಾ ನನ್ನ ಕಥೆಯಲ್ಲಿ ಕಾಣಿಸಿಕೊಂಡಿದ್ದಾರೆ.‌‌ ಮೇಕಪ್ ಕುರಿತ ಕಥೆ. ಮೇಕಪ್ ಮ್ಯಾನ್ ಮತ್ತು ಟಚ್ಚಪ್ ಬಾಯ್​​ಗೆ ಚಿತ್ರ ಅರ್ಪಿಸುವೆ ಎಂದು ಮಾಹಿತಿ ಹಂಚಿಕೊಂಡರು.

ಕಥೆ ಹೇಳುವಾಗ ಬಹಳಷ್ಟು ನಿರ್ದೇಶಕರು ನಿರ್ಮಾಪಕರ ಮನಸ್ಸು ಗೆದ್ದು ಬಿಡ್ತಾರೆ. ಆದ್ರೆ ಸಿನಿಮಾದ ಯಶಸ್ಸಿನಲ್ಲಿ ವಿಫಲರಾಗುತ್ತಾರೆ. ಅದ್ಯಾಕೋ ಗೊತ್ತಿಲ್ಲ, ಕನ್ನಡದಲ್ಲಿ ಬಹಳಷ್ಟು ಕಥೆಗಾರರು ಇದ್ದಾರೆ. ಆದರೆ ಯಶಸ್ಸು ಮಾತ್ರ ಕಡಿಮೆ ಎಂದರು ನಟ ಮೂಗು ಸುರೇಶ್.

ಬಿಟಿಎಸ್ ಚಿತ್ರತಂಡ (ETV Bharat)

ಇದನ್ನೂ ಓದಿ:ರೋಮಿಯೋ ನಿರ್ದೇಶಕ ಪಿ.ಸಿ.ಶೇಖರ್ ಜೊತೆ ಕೈಜೋಡಿಸಿದ ವಿಜಯ್​​ ರಾಘವೇಂದ್ರ: ರೈತರ ಕುರಿತ ಸಿನಿಮಾದಲ್ಲಿ ಚಿನ್ನಾರಿಮುತ್ತ - Vijay Raghavendra Movie

ನಿರ್ಮಾಪಕ ಮುರುಳಿ ಕೃಷ್ಣ ಮಾತನಾಡಿ, ಐವರು ನಿರ್ದೇಶಕರ ಐದು ಕಥೆಗಳು ಸೇರಿ ಬಿಟಿಎಸ್ ಚಿತ್ರವಾಗಿದೆ. ಐದು ಮಂದಿ‌ ನಿರ್ದೇಶಕರೇ ಚಿತ್ರದ ಆಧಾರಸ್ತಂಭ. ಚಿತ್ರ ಎಲ್ಲರಿಗೂ ಇಷ್ಟವಾಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕಿರಣ್ ರಾಜ್ ನೋಡಲು ಆ.30 ಅಲ್ಲ, ಇನ್ನೂ 3 ವಾರ ಕಾಯಬೇಕು: 'ರಾನಿ' ಬಿಡುಗಡೆ ದಿನಾಂಕ ಮುಂದೂಡಿಕೆ - Ronny Release Date Postponed

ಚಿತ್ರದಲ್ಲಿ ವಿಜಯ್ ಕೃಷ್ಣ, ಮಹದೇವ ಪ್ರಸಾದ್, ಶ್ರೀಪ್ರಿಯ, ಕೌಶಿಕ್, ಚಂದನ, ವಿಜಯ್ ಕೃಷ್ಣ ಸೇರಿದಂತೆ ಮತ್ತಿತರು ಅಭಿನಯಿಸಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರಾದ ರಾಮೇನಹಳ್ಳಿ ಜಗನ್ನಾಥ್, ವಿನಯ್ ಪ್ರೀತಂ, ಗುರುರಾಜ ಕುಲಕರ್ಣಿ, ಶ್ರೀಧರ್ ಶಿಕಾರಿಪುರ, ಜೈಶಂಕರ್,ದೇವನೂರು ಚಂದ್ರು, ಚೇತನ್ ಕೇಶವ್ , ಇಸ್ಲಾವುದ್ದೀನ್ ಮುಂತಾದವರು ಗಣ್ಯರು ಉಪಸ್ಥಿತರಿದ್ದರು.

ABOUT THE AUTHOR

...view details