ಕಾಲಿವುಡ್ ಚಿತ್ರರಂಗದ 'ವಿಡಾಮುಯರ್ಚಿ' ತಲಾ ಅಜಿತ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಸಿನಿಮಾ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಅಡಿ ಬಹಳ ಅದ್ಧೂರಿಯಾಗಿ ಈ ಚಿತ್ರ ಮೂಡಿ ಬರುತ್ತಿದೆ. ಅದರಲ್ಲಿಯೂ ಅಜಿತ್ ಡೇಂಜರಸ್ ಸ್ಟಂಟ್ ವಿಡಿಯೋ ವೈರಲ್ ಆದ್ಮೇಲಂತೂ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿದೆ. ಇದೀಗ ವಿಡಾಮುಯರ್ಚಿ ಸಿನಿಮಾದಲ್ಲಿ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ.
ತಮ್ಮ ವೈವಿಧ್ಯಮಯ ಪಾತ್ರಗಳ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಅರ್ಜುನ್ ಸರ್ಜಾ, 'ವಿಡಾಮುಯರ್ಚಿ' ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ವಿಡಾಮುಯರ್ಚಿ ಸಿನಿಮಾದಲ್ಲಿ ಆ್ಯಕ್ಷನ್ ಕಿಂಗ್ ಲುಕ್ ಹೇಗಿರಲಿದೆ ಎನ್ನುವುದಕ್ಕೆ ಇದೀಗ ಫಸ್ಟ್ ಲುಕ್ ರಿಲೀಸ್ ಆಗಿದೆ. ಪೋಸ್ಟರ್ನಲ್ಲಿ ಅರ್ಜುನ್ ಸರ್ಜಾ ರಸ್ತೆಯ ಮೇಲೆ ಸ್ಟೈಲಿಶ್ ಆಗಿ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಅಜಿತ್ ಅವರ ನಿಗೂಢತೆ ಮತ್ತು ನಿರೀಕ್ಷೆಯ ಭಾವವಿರುವ ಇಮೇಜ್ ಇದೆ. 'ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ' ಎಂಬ ಕುತೂಹಲ ಕೆರಳಿಸುವ ಅಡಿಬರಹವು ಚಿತ್ರದ ಸುತ್ತಲಿನ ಕುತೂಹಲವನ್ನು ಹೆಚ್ಚಿಸಿದೆ.
ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ 'ಮಂಗತ' ಸಿನಿಮಾದಲ್ಲಿ ಅಜಿತ್ ಕುಮಾರ್, ತ್ರಿಶಾ ಮತ್ತು ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಈಗ ಮತ್ತೊಮ್ಮೆ ಈ ಮೂರೂ ಕಲಾವಿದರು ಪ್ರೇಕ್ಷಕರ ಕಾಂಬಿನೇಷನ್ನಲ್ಲಿ ವಿಡಾಮುಯರ್ಚಿ ಬರ್ತಿದೆ. ಅಲ್ಲದೆ, ಆರವ್, ರೆಜಿನಾ ಕಸ್ಸಂದ್ರ, ನಿಖಿಲ್ ಮತ್ತು ಇತರರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.