ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಕೆಲ ತಿಂಗಳ ಹಿಂದೆ ತಮ್ಮ ಇಬ್ಬರು ಮುದ್ದಾದ ಮಕ್ಕಳ ನಾಮಕರಣ ಶಾಸ್ತ್ರ ಮಾಡಿಸಿದ್ದರು. ಹನುಮನ ಭಕ್ತನಾಗಿರುವ ಧ್ರುವ ಸರ್ಜಾ 'ರಾಮಲಲ್ಲಾ' ಪ್ರಾಣ ಪ್ರತಿಷ್ಠಾಪನೆಯ ಶುಭ ದಿನದಂದು ಮಗಳಿಗೆ ರುದ್ರಾಕ್ಷಿ ಡಿ ಸರ್ಜಾ, ಮಗನಿಗೆ ಹಯಗ್ರೀವ ಡಿ ಸರ್ಜಾ ಎಂದು ಹೆಸರು ಇಟ್ಟಿರುವುದು ಗೊತ್ತೇ ಇದೆ.
ಇದೀಗ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳು ಹಾಗೂ ಪತ್ನಿ ಪ್ರೇರಣಾ ಜೊತೆ ಮನೆ ದೇವರು ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಬಂದು ಹರಕೆ ತೀರಿಸಿದರು. ಹಯಗ್ರೀವಾ ಹಾಗು ರುದ್ರಾಕ್ಷಿಯ ಪಂಚಮುಡಿ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದರು. ಧ್ರುವ ಸರ್ಜಾ ದೇವಸ್ಥಾನಕ್ಕೆ ಬಂದ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.