ಕರ್ನಾಟಕ

karnataka

ETV Bharat / entertainment

ನಟ ರಮೇಶ್ ಅರವಿಂದ್​ಗೆ 'ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ'

ರಾಯರ ವರ್ಧಂತಿ ಮಹೋತ್ಸವ ಪ್ರಯುಕ್ತ ನಡೆದ 'ಮರಳಿ ಸಂಸ್ಕೃತಿಗೆ' ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಅವರಿಗೆ 'ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ' ನೀಡಿ ಗೌರವಿಸಲಾಯಿತು.

ನಟ ರಮೇಶ್ ಅರವಿಂದ್​ಗೆ 'ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ'
ನಟ ರಮೇಶ್ ಅರವಿಂದ್​ಗೆ 'ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ'

By ETV Bharat Karnataka Team

Published : Mar 19, 2024, 8:09 AM IST

Updated : Mar 19, 2024, 9:22 AM IST

ನಟ ರಮೇಶ್ ಅರವಿಂದ್​ಗೆ 'ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ' ಪ್ರದಾನ

ನಟ ರಮೇಶ್ ಅರವಿಂದ್​ ಅವರಿಗೆ ಪ್ರಸಿದ್ಧ 'ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ' ನೀಡಿ ಗೌರವಿಸಲಾಗಿದೆ. ಮಂತ್ರಾಲಯದಲ್ಲಿ ಇತ್ತೀಚೆಗೆ 429ನೇ ರಾಯರ ವರ್ಧಂತಿ ಮಹೋತ್ಸವದ ಗುರು ವೈಭವೋತ್ಸವ ಅದ್ಧೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸುಬುಧೇಂದ್ರ ತೀರ್ಥರ ಸಾನಿಧ್ಯ ಹಾಗು ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ನಡೆದ 'ಮರಳಿ ಸಂಸ್ಕೃತಿಗೆ' ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್ ಅವರನ್ನು ಸನ್ಮಾನಿಸಲಾಯಿತು.

ಡಾ.ರಾಜ್​​ಕುಮಾರ್, ರಜನಿಕಾಂತ್, ಸುಧಾಮೂರ್ತಿ, ಶಿವ ರಾಜ್​ಕುಮಾರ್, ಪುನೀತ್ ರಾಜ್​ಕುಮಾರ್ ದರ್ಶನ್ ಸೇರಿದಂತೆ ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಮೇಶ್​ ಅರವಿಂದ್​ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಪರಭಾಷೆಯಲ್ಲೂ ಅಮೋಘ ಅಭಿನಯದಿಂದ ಜನಪ್ರಿಯತೆ ಗಳಿಸಿರುವ ನಟ. ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದ ಫೋಟೋವನ್ನು ಅವರು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡು 'ಧನ್ಯೋಸ್ಮಿ' ಎಂಬ ಸಾರ್ಥಕಭಾವ ವ್ಯಕ್ತಪಡಿಸಿದ್ದಾರೆ.

ಸದ್ಯ ರಿಯಾಲಿಟಿ ಶೋ ಹಾಗು ಶಿವಾಜಿ ಸುರತ್ಕಲ್ 2, ದೈಜಿ ಸಿನಿಮಾಗಳಲ್ಲಿ ರಮೇಶ್ ಅರವಿಂದ್ ಬ್ಯುಸಿಯಾಗಿದ್ದಾರೆ. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲೂ ನಟಿಸಿರುವ ಇವರು ದೈಜಿ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದೈಜಿ ಎಂಬ ಶೀರ್ಷಿಕೆಗೆ ಬೇರೆ ಬೇರೆ ಭಾಷೆಯಲ್ಲಿ ಬೇರೇ ಬೇರೆ ಅರ್ಥಗಳಿವೆ. ಇದು ರಮೇಶ್ ಅರವಿಂದ್ ಅವರ 106ನೇ ಚಿತ್ರವಾಗಿದೆ.

ಇದನ್ನೂ ಓದಿ:ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ನಟ ಜೂನಿಯರ್ ಎನ್​ಟಿಆರ್

Last Updated : Mar 19, 2024, 9:22 AM IST

ABOUT THE AUTHOR

...view details