ಕರ್ನಾಟಕ

karnataka

ETV Bharat / entertainment

ರಿಷಿ ಅಭಿನಯದ 'ರಾಮನ ಅವತಾರ' ಬಿಡುಗಡೆಗೆ ಮುಹೂರ್ತ ಫಿಕ್ಸ್ - Ramana Avatara Movie - RAMANA AVATARA MOVIE

'ರಾಮನ ಅವತಾರ' ಬಿಡುಗಡೆ ಕುರಿತಂತೆ ಚಿತ್ರದ ನಟ ರಿಷಿ ಮಾತನಾಡಿದ್ದಾರೆ.

actor-rishi-talks-on-ramana-avatara-movie-release
ರಿಷಿ ಅಭಿನಯದ 'ರಾಮನ ಅವತಾರ' ಬಿಡುಗಡೆಗೆ ಮುಹೂರ್ತ ಫಿಕ್ಸ್

By ETV Bharat Karnataka Team

Published : Mar 30, 2024, 10:31 PM IST

ಸ್ಯಾಂಡಲ್​ವುಡ್​​ನಲ್ಲಿ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಕೇವಲ ಕಾಮಿಡಿಗಷ್ಟೇ ಸೀಮಿತವಾಗಿಲ್ಲ. 'ಕವಲುದಾರಿ'ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ 'ರಾಮನ ಅವತಾರ'ದಲ್ಲಿ ದರ್ಶನ ಕೊಡೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ರಿಷಿ ನಟನೆಯ 'ರಾಮನ ಅವತಾರ' ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ ತಿಂಗಳಲ್ಲಿ ಸಿನಿಮಾ ಬೆಳ್ಳಿತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿತ್ತು. ಆದರೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆ ತಡವಾಗಿದೆ. ಎಲೆಕ್ಷನ್ ಮತದಾನ ಮುಗಿದ ತಕ್ಷಣ ಇಲ್ಲವೇ ಮೇ ತಿಂಗಳಲ್ಲಿ ಪಕ್ಕಾ ಬರ್ತೇವೆ ಅಂತಾ ರಿಷಿ ಘೋಷಿಸಿದ್ದಾರೆ.

ರಾಮನ ಅವತಾರ

ರಾಮನ ಅವತಾರ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ವಿಕಾಸ್ ಪಂಪಾಪತಿ ಆ್ಯಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಟೀಸರ್ ಹಾಗೂ ಹಾಡುಗಳ ಮೂಲಕ ರಾಮನ ಅವತಾರ ನಿರೀಕ್ಷೆ ಹೆಚ್ಚಿಸಿದೆ.

ರಾಮನ ಅವತಾರ

ಸ್ಟಾರ್ ಫ್ಯಾಬ್ ಪ್ರೊಡಕ್ಷನ್​ನಡಿ 'ಆಪರೇಷನ್ ಅಲಮೇಲಮ್ಮ' ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದೆ. ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ ಹಾಗೂ ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.

ರಿಷಿ ಸ್ಪೆಷಲ್ ವಿಡಿಯೋ ಮೂಲಕ ರಾಮನ ಅವತಾರ ಸಿನಿಮಾ ಬಿಡುಗಡೆ ದಿನಾಂಕವನ್ನು ರಿವೀಲ್ ಮಾಡಿದ್ದಾರೆ. ಮೇ 10ಕ್ಕೆ ಬರ್ತೇವೆ. ಎಲೆಕ್ಷನ್ ರಿಸಲ್ಟ್​​ಗೂ ಮೊದಲೇ ನಮ್ಮ ಸಿನಿಮಾ ರಿಸಲ್ಟ್ ಬರಲಿದೆ ಎಂದಿದ್ದಾರೆ. ಪ್ರಮೋಷನ್ ಅಖಾಡಕ್ಕೆ ಇಳಿಯೋದಕ್ಕೆ ಇಡೀ ತಂಡ ಸಜ್ಜಾಗುತ್ತಿದೆ.

ಇದನ್ನೂ ಓದಿ:ಫ್ಯಾಮಿಲಿ ಮ್ಯಾನ್​​ ಆಗಲು ರೆಡಿ 'ಫ್ಯಾಮಿಲಿ ಸ್ಟಾರ್': ವಿಜಯ್ ದೇವರಕೊಂಡ ಆಗೋದು ಲವ್ ಮ್ಯಾರೇಜ್​ ಅಂತೆ - VIJAY DEVERAKONDA

ABOUT THE AUTHOR

...view details