ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ 'ಬಘೀರ' ಚಿತ್ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನ ಚಿತ್ರ 5ರಿಂದ 6 ಕೋಟಿ ರೂ ಕಲೆಕ್ಷನ್ ಮಾಡಿರುವುದಾಗಿ ಹೊಂಬಾಳೆ ಫಿಲ್ಮ್ ಸಂಸ್ಥೆಯ ಆಪ್ತರೊಬ್ಬರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಬಘೀರ, ಒಂದೇ ತಿಂಗಳಿಗೆ ಒಟಿಟಿಗೆ ಬರಲು ಸಜ್ಜಾಗುತ್ತಿದೆ.
ನೆಟ್‍ಫ್ಲಿಕ್ಸ್‌ನಲ್ಲಿ ಬಘೀರ ರಿಲೀಸ್ ಆಗಲಿದೆ. ಮೊದಲು ಕನ್ನಡ ಸಿನಿಮಾಗಳನ್ನು ನೆಟ್‍ಫ್ಲಿಕ್ಸ್ ಖರೀದಿಸುವುದಿಲ್ಲ ಎಂಬ ಆರೋಪಗಳಿದ್ದವು. ಇದೇ ಕಾರಣಕ್ಕೆ ಕೆಲವು ತಿಂಗಳಗಳ ಹಿಂದೆ ನೆಟ್‍ಫ್ಲಿಕ್ಸ್ ವಿರುದ್ಧ ಕೆಲ ಕನ್ನಡ ನಿರ್ಮಾಪಕರು ತಿರುಗಿಬಿದ್ದಿದ್ದರು.
ಬಘೀರ ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳಿಗೂ ಡಬ್ ಆಗಿ ಸ್ಟ್ರೀಮಿಂಗ್ ಆಗಲಿದೆ. ಹೊಂಬಾಳೆ ಸಂಸ್ಥೆ ದೊಡ್ಡ ಮೊತ್ತಕ್ಕೆ ಚಿತ್ರವನ್ನು ಮಾರಾಟ ಮಾಡಿದೆಯಂತೆ. ಡಿಸೆಂಬರ್ ಮೊದಲ ವಾರದ ವೇಳೆಗೆ ಚಿತ್ರ ಒಟಿಟಿ ಪ್ರವೇಶಿಸಲಿದೆ.