ಕರ್ನಾಟಕ

karnataka

ETV Bharat / entertainment

ನಟನೆ ಜೊತೆಗೆ ಪ್ರೊಡ್ಯೂಸರ್ ಆದ ರಾಕಿಭಾಯ್: ಬಾಲಿವುಡ್ ಚಿತ್ರಕ್ಕೆ ಯಶ್ ಸಹ​ ನಿರ್ಮಾಪಕ - Yash Producing Ramayana - YASH PRODUCING RAMAYANA

ಬಹುಕೋಟಿ ಬಜೆಟ್​ನ ಬಾಲಿವುಡ್ ಚಿತ್ರ 'ರಾಮಾಯಣ' ನಿರ್ಮಾಣಕ್ಕೆ ಯಶ್​​ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ.

Yash Monster Mind Creations to produce Ramayana Movie
ಬಾಲಿವುಡ್ ಚಿತ್ರಕ್ಕೆ ಯಶ್ ಸಹ​ ನಿರ್ಮಾಪಕ

By ETV Bharat Karnataka Team

Published : Apr 12, 2024, 1:51 PM IST

ಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ 'ರಾಮಾಯಣ' ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆ ತೆರೆದಿಡುವ ಈ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ.

ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ 'ದಂಗಲ್' ನಿರ್ದೇಶಕ ನಿತೀಶ್ ತಿವಾರಿ ತಯಾರಿ ನಡೆಸಿದ್ದಾರೆ. ಅದರಂತೆ, ಬಹುಕೋಟಿ ಬಜೆಟ್ ಹಾಕಿ, ನಿರ್ಮಾಣ ಮಾಡುವುದಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್​ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ''ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ'' ಎಂದರು.

ಯಶ್ ಮಾತನಾಡಿ, ''ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ VFC ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ಬ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತ್ತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯವು ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ'' ಎಂದು ಹೇಳಿದ್ದಾರೆ.

ನಮಿತ್ ಮಲ್ಹೋತ್ರಾ ಒಡೆತನದ ಪ್ರೈಮ್ ಫೋಕಸ್ ಸ್ಟುಡಿಯೋ ಜಾಗತಿಕ ಮಟ್ಟದ ಕಂಟೆಂಟ್ ಹಾಗೂ ವಿಭಿನ್ನ ಬಗೆಯ ಕ್ರಿಯೇಟ್ ಮಾಡುವ ಸ್ವತಂತ್ರ ನಿರ್ಮಾಣ ಕಂಪನಿಯಾಗಿದೆ. ಈ ಸಂಸ್ಥೆ ಸದ್ಯ ಮೂರು ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ. ಆ ಪೈಕಿ ರಾಮಾಯಣವೂ ಕೂಡ ಒಂದು.

ಯಶ್ ತಮ್ಮದೇ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಎಂಬ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಬ್ಯಾನರ್​​ನಡಿ 'ಟಾಕ್ಸಿಕ್' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ 'ಮಾನ್ಸ್ಟರ್ ಮೈಂಡ್' ಕ್ರಿಯೇಷನ್ಸ್ ಕೂಡ 'ಟಾಕ್ಸಿಕ್' ಸಿನಿಮಾದ ನಿರ್ಮಾಣದಲ್ಲಿ ಪಾಲುದಾರಿಕೆ ಹೊಂದಿದೆ. ಇದೇ ಬ್ಯಾನರ್​​ನಡಿ ರಾಮಾಯಣ ಸಿನಿಮಾಗೂ ಯಶ್ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ:'ರಾಮಾಯಣ'ಕ್ಕೆ ರಾಕಿಂಗ್ ಸ್ಟಾರ್ ಯಶ್ ಸಹ​ ನಿರ್ಮಾಪಕ? - Yash

ABOUT THE AUTHOR

...view details