ಕರ್ನಾಟಕ

karnataka

ETV Bharat / entertainment

'ಬಿಳಿಚುಕ್ಕಿ ಹಳ್ಳಿಹಕ್ಕಿ'ಯಲ್ಲಿ ಕಾಜಲ್ ಕುಂದರ್ ನಾಯಕಿ: ಪೋಸ್ಟರ್ ರಿವೀಲ್ - BILICHUKKI HALLIHAKKI KANNADA FILM

ಪೆಪೆ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಾಯಕಿ ಪಾತ್ರದಲ್ಲಿ ಅಭಿನಯಿಸಿರುವ ಮಂಗಳೂರಿನ ಕಾಜಲ್​ ಕುಂದರ್​ ಈಗ ಬಿಳಿಚುಕ್ಕಿ ಹಳ್ಳಿಹಕ್ಕಿ ಸಿನಿಮಾದ ನಾಯಕಿ ಕವಿತಾ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

Actress Kajal Kunder
ನಟಿ ಕಾಜಲ್ ಕುಂದರ್ (ETV Bharat)

By ETV Bharat Karnataka Team

Published : Dec 7, 2024, 8:42 PM IST

ಪೋಸ್ಟರ್ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಸದ್ದು ಮಾಡಿದ ಸಿನಿಮಾ ಬಿಳಿಚುಕ್ಕಿ ಹಳ್ಳಿಹಕ್ಕಿ. ಮಹೇಶ್ ಗೌಡ ಅವರು ನಟಿಸಿ, ನಿರ್ಮಾಣ ಮಾಡಿ, ನಿರ್ದೇಶಿಸಿರುವ ಈ ಸಿನಿಮಾ vitiligo ಬಗೆಗಿನ ಕಥಾ ಹಂದರವನ್ನೊಳಗೊಂಡಿದೆ. vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ಧಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಇದೀಗ ಈ ಸಿನಿಮಾ ನಾಯಕಿಯಾಗಿರುವ ಮಂಗಳೂರು ಹುಡುಗಿ ಕಾಜಲ್ ಕುಂದರ್ ಅವರ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ. ಇದರೊಂದಿಗೆ ನಾಯಕಿ ಪಾತ್ರ ರಿವೀಲ್​ ಆಗಿದೆ.

ಕಾಜಲ್ ಕುಂದರ್ ಈ ಚಿತ್ರದ ನಾಯಕಿ ಕವಿತಾ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮೂಲತಃ ಮಂಗಳೂರಿನವರಾದ ಕಾಜಲ್ ಮುಂಬೈನಲ್ಲಿಯೇ ನೆಲೆ ಹೊಂದಿದ್ದರೂ ಕನ್ನಡ ಭಾಷೆಯಲ್ಲಿ ಹಿಡಿತ ಹೊಂದಿದ್ದಾರೆ. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಕಾಜಲ್ ಪಾಲಿಗಿದು ಮೈಲಿಗಲ್ಲಿನಂಥಾ ಸಿನಿಮಾ ಆಗುವ ಸಾಧ್ಯತೆ ಇದೆ.

ನಟಿ ಕಾಜಲ್ ಕುಂದರ್ (ETV Bharat)

ರಂಗಭೂಮಿ ಕಲಾವಿದೆಯಾಗಿ ಪಳಗಿರುವ ಕಾಜಲ್ ಆಡಿಷನ್ ಮೂಲಕವೇ ಕವಿತಾ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ. ಈ ಪಾತ್ರಕ್ಕೆ ಹೇಳಿ ಮಾಡಿಸಿದಂತಿರೋ ನಟಿ, ಬಹುಮುಖ ಪ್ರತಿಭೆಯೂ ಹೌದು. ಕವಿತಾ ಎಂಬುದು ಒಂದಿಡೀ ಕಥೆಯಲ್ಲಿ ಮಹತ್ವದ, ಸೂಕ್ಷ್ಮ ಪಾತ್ರ. ಅದಕ್ಕೆ ಕಾಜಲ್ ಲೀಲಾಜಾಲವಾಗಿ ಜೀವ ತುಂಬಿದ್ದಾರಂತೆ. ಇಂಥಾ ನಟಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಬೇಕು. ಇನ್ನೂ ಒಂದಷ್ಟು ಸವಾಲಿನ ಪಾತ್ರಗಳಿಗೆ ಜೀವ ತುಂಬಬೇಕೆಂಬ ಆಶಯ ನಿರ್ದೇಶಕರದ್ದು.

ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಒಂದೊಳ್ಳೆ ಕಂಟೆಂಟು ಹೊಂದಿರುವ "ಬಿಳಿಚುಕ್ಕಿ ಹಳ್ಳಿಹಕ್ಕಿ' ರಿಲೀಸ್ ಡೇಟ್ ಅನ್ನು ಅತೀ ಶೀಘ್ರವಾಗಿ ಘೋಷಿಸಲು ಚಿತ್ರತಂಡ ಅಣಿಗೊಳ್ಳುತ್ತಿದೆ. vitiligo ಎಂಬ ಸಮಸ್ಯೆ ಲಕ್ಷಾಂತರ ಜನರನ್ನು ಕಾಡುತ್ತಿದೆ. ಇದಕ್ಕೆ ತುತ್ತಾದವರ ಮಾನಸಿಕ ತೊಳಲಾಟಗಳನ್ನು ಬೇರೆಯವರು ಸಲೀಸಾಗಿ ಅಂದಾಜಿಸೋದು ಕಷ್ಟ. ಅದರ ಸುತ್ತ ಜರುಗುವ ಬೆರಗಿನ, ಸೂಕ್ಷ್ಮ ಕಥನದೊಂದಿಗೆ ಮಹೇಶ್ ಗೌಡ ಅವರು ಈ ಚಿತ್ರವನ್ನು ರೂಪಿಸಿದ್ದಾರಂತೆ. ಇಂಥಾ ಕಥೆಯನ್ನು ಪಕ್ಕಾ ಮನೋರಂಜನೆಯ, ಕಮರ್ಶಿಯಲ್ ಧಾಟಿಯಲ್ಲಿ ದೃಶ್ಯೀಕರಿಸಲಾಗಿದೆಯಂತೆ.

ಒಟ್ಟಾರೆ ಸಿನಿಮಾದ ಇನ್ನೊಂದಷ್ಟು ಅಚ್ಚರಿಗಳು ಹಂತ ಹಂತವಾಗಿ ಪ್ರೇಕ್ಷಕರನ್ನು ತಲುಪಲಿವೆ. ಅದರ ಜೊತೆ ಜೊತೆಗೆ ಬಿಡುಗಡೆ ದಿನಾಂಕವೂ ನಿಕ್ಕಿಯಾಗಲಿದೆ.

ಇದನ್ನೂ ಓದಿ:ಪತ್ನಿ ಗೀತಾ ಸಮೇತ ತಿರುಪತಿಗೆ ಮುಡಿ ಕೊಟ್ಟ ನಟ ಶಿವರಾಜ್ ಕುಮಾರ್

ABOUT THE AUTHOR

...view details