ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಫೈರ್ ಫ್ಲೈ ಸಿನಿಮಾ ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದಿಂದ, ತಾರಾಬಳಗದಿಂದ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಫೈರ್ ಫ್ಲೈ ಸಿನಿತಂಡ ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ ಸೇರಿದಂತೆ ಹಲವರನ್ನು ಪರಿಚಯಿಸಿದೆ. ಇದೀಗ ಚಿತ್ರದ ನಾಯಕಿ ಯಾರು ಅನ್ನುವುದನ್ನು ಚಿತ್ರತಂಡ ತಿಳಿಸಿದೆ.
ಲವ್ ಮಾಕ್‌ಟೇಲ್, ಹರಿಕಥೆ ಅಲ್ಲ ಗಿರಿಕಥೆ, ತ್ರಿಬಲ್ ರೈಡಿಂಗ್ ಸಿನಿಮಾಗಳಲ್ಲಿ ಬಬ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚನಾ ಇಂದರ್ ವಂಶಿಗೆ ಜೋಡಿಯಾಗಿ ಅಭಿನಯಿಸಿದ್ದಾರೆ. ನೇಹಾ ಎಂಬ ಪಾತ್ರದಲ್ಲಿ ರಚನಾ ಬಣ್ಣ ಹಚ್ಚಿದ್ದು, ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. 'ನಿವೇದಿತಾ ಶಿವರಾಜ್ ಕುಮಾರ್ ಅವರು ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಸಿನಿಮಾದಲ್ಲಿ ನೇಹಾ ಎಂಬ ಪಾತ್ರ ಮಾಡಿದ್ದೇನೆ. ನೇಹಾ ಬದುಕನ್ನು ತುಂಬಾ ಇಷ್ಟಪಡುತ್ತಾಳೆ. ಎಂಜಾಯ್ ಮಾಡುತ್ತಾಳೆ. ಭವಿಷ್ಯದ ಬಗ್ಗೆ ಯೋಚನೆ ಮಾಡೋದಿಲ್ಲ. ಸಿನಿಮಾವನ್ನು ನಾನು ನೋಡಲು ಕಾತರಳಾಗಿದ್ದಾನೆ. ಚಿತ್ರದ ಒಂದಷ್ಟು ಕ್ಲಿಪ್ ನೋಡಿದಾಗ ಮನರಂಜನೆ ನೀಡುವ ಸಿನಿಮಾ ಎನಿಸಿತು. ವಂಶಿ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ದೀಪಾವಳಿಗೆ ನಮ್ಮ ಚಿತ್ರ ತೆರೆಗೆ ಬರುತ್ತಿದೆ" ಎಂದಿದ್ದಾರೆ.