ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ, ರವಿರಾಜ್ ನಿರ್ಮಾಣ ಹಾಗೂ ಎಂ.ಶಶಿಧರ್ ನಿರ್ದೇಶನದ 'ಅಜಾಗ್ರತ' ಚಿತ್ರವು ನೂರು ದಿನಗಳ ಶೂಟಿಂಗ್ ಮುಗಿಸಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಕೆಲವು ಮಾತಿನ ಭಾಗ ಹಾಗೂ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಈ ತಿಂಗಳ ಕೊನೆಗೆ ಅಂತಿಮ ಹಂತದ ಶೂಟಿಂಗ್ ಆರಂಭವಾಗಲಿದೆ.
ಇತ್ತೀಚಿಗೆ ನಿರ್ದೇಶಕ ಶಶಿಧರ್ ಅವರ ಹುಟ್ಟುಹಬ್ಬ ಹಾಗೂ ಚಿತ್ರವು ನೂರು ದಿನಗಳ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿದ ಸಂಭ್ರಮ ಆಚರಿಸಲಾಗಿದೆ. ಈ ಎರಡು ಸಂಭ್ರಮದ ಹಿನ್ನೆಲೆಯಲ್ಲಿ ನಿರ್ಮಾಪಕ ರವಿರಾಜ್ ಹಾಗೂ ರಾಧಿಕಾ ಕುಮಾರಸ್ವಾಮಿ ಅವರು ನಿರ್ದೇಶಕರಿಂದ ನೂರು ಕೆ.ಜಿ ಕೇಕ್ ಕಟ್ ಮಾಡಿಸಿದ್ದಾರೆ. ಇಡೀ ಚಿತ್ರತಂಡ ಈ ಸಂದರ್ಭದಲ್ಲಿ ಭಾಗಿಯಾಗಿತ್ತು.