ಕರ್ನಾಟಕ

karnataka

ETV Bharat / entertainment

ಡಾಲಿಯ 'ಉತ್ತರಕಾಂಡ'ಕ್ಕೆ ಮ್ಯೂಸಿಕ್ ನೀಡಲಿದ್ದಾರೆ ಬಾಲಿವುಡ್​ನ ಖ್ಯಾತ ಸಂಗೀತ ನಿರ್ದೇಶಕ - Amit Trivedi - AMIT TRIVEDI

ಬಾಲಿವುಡ್​ನ ಅಮಿತ್ ತ್ರಿವೇದಿ ''ಉತ್ತರಕಾಂಡ'' ಕನ್ನಡ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

Amit Trivedi
'ಉತ್ತರಕಾಂಡ' ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ

By ETV Bharat Karnataka Team

Published : Apr 3, 2024, 12:18 PM IST

''ಉತ್ತರಕಾಂಡ'' ಕನ್ನಡ ಚಿತ್ರರಂಗದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಟಾಕ್ ಆಗುತ್ತಿರುವ ಸಿನಿಮಾ. ಟೀಸರ್ ಮೂಲಕ ಗಮನ ಸೆಳೆದಿರುವ ಈ ಚಿತ್ರದಿಂದ ಮೋಹಕತಾರೆ ರಮ್ಯಾ ಹಿಂದೆ ಸರಿದ ಬಳಿಕ ಮತ್ತೊಂದು ಅಪ್ಡೇಟ್ ಹೊರಬಿದ್ದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಹಿಂದಿ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ 'ಉತ್ತರಕಾಂಡ' ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಈ ವಿಚಾರ ಚಿತ್ರದ ಮೇಲಿನ ನಿರೀಕ್ಷೆಗಳನ್ನು ದುಪ್ಪಟ್ಟುಗೊಳಿಸಿದೆ.

'ಉತ್ತರಕಾಂಡ' ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ

ಅಮಿತ್ ತ್ರಿವೇದಿ ಪ್ರಸ್ತುತ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಬೇಡಿಕೆ ಹೊಂದಿರುವ ಗಾಯಕ. ಕೇವಲ ಹಿಂದಿ ಚಿತ್ರಗಳಷ್ಟೇ ಅಲ್ಲದೇ‌ ತೆಲುಗು, ಮಲಯಾಳಂ ಚಿತ್ರಗಳಲ್ಲೂ ತಮ್ಮ ವಿಭಿನ್ನ ಸಂಗೀತ ಸಂಯೋಜನಾ ಶೈಲಿ ಮೂಲಕ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ.

ದೇವ್ ಡಿ, ಕ್ವೀನ್, ವೇಕ್ ಅಪ್ ಸಿದ್, ಇಂಗ್ಲಿಷ್ ವಿಂಗ್ಲಿಷ್, ಕೈ ಪೋ ಚೆ, ಲೂಟೇರಾ, ಉಡ್ತಾ ಪಂಜಾಬ್, ಡಿಯರ್ ಜಿಂದಗಿ, ಸೀಕ್ರೆಟ್ ಸೂಪರ್ ಸ್ಟಾರ್, ಮನ್ಮರ್ಜಿಯಾನ್, ಅಂಧಾದುನ್, ಸೈ ರಾ‌ ನರಸಿಂಹ ರೆಡ್ಡಿ, ಜೂಬಿಲಿ ಎಂಬ ವೆಬ್ ಸೀರಿಸ್ ಮತ್ತು ಇತ್ತೀಚಿನ ಶೈತಾನ್ ಸೇರಿದಂತೆ ಮುಂತಾದವುಗಳು ಇವರು ಸಂಗೀತ ಸಂಯೋಜನೆ ಮಾಡಿರುವ ಚಿತ್ರಗಳು.

'ಉತ್ತರಕಾಂಡ' ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ

ಉತ್ತರಕಾಂಡದ ಪ್ರೋಮೋಗೆ ಸ್ಯಾಂಡಲ್​ವುಡ್​ನ ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು,‌ ಸಂಪೂರ್ಣ ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಈ ಕುರಿತು ಚಿತ್ರದ ನಿರ್ಮಾಪಕರಾದ ಕಾರ್ತಿಕ್ ಹಾಗೂ ಯೋಗಿ ಜಿ ಮತ್ತು ನಿರ್ದೇಶಕ ರೋಹಿತ್ ಪದಕಿ ಮಾತನಾಡಿ, ಉತ್ತರಕಾಂಡ ಚಿತ್ರದ ಮೂಲಕ ನಾವು ಉತ್ತರಕರ್ನಾಟಕದ ನಾಟಿ ಮತ್ತು ಹಳ್ಳಿಗಾಡಿನ ಕಥೆಯನ್ನು ಹೇಳಬಯಸುತ್ತೇವೆ. ಇಂತಹ ಸ್ಥಳೀಯ ಭಾವನೆಯನ್ನು ಉಂಟು ಮಾಡುವ ಕಥೆಗೆ ಅಮಿತ್ ತ್ರಿವೇದಿ ಅವರ ಸಂಗೀತ ಸಾಥ್ ನೀಡಲಿದೆ. ಅವರು ನಮ್ಮ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುವುದು ಚಿತ್ರದ ಮೆರುಗನ್ನು ಹೆಚ್ಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಅಮಿತ್ ತ್ರಿವೇದಿ ಮಾತನಾಡಿ, ಈ ಚಿತ್ರದ ಕಥಾವಸ್ತು ಮತ್ತು ಭಾವನೆ ನನಗೆ ಸಂಪೂರ್ಣವಾಗಿ ಅರ್ಥವಾಗಿದೆ‌. ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲು ಉತ್ಸುಕನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಅವತಾರ ಪುರುಷ 2 ಟ್ರೇಲರ್: ಶರಣ್ ಚಿತ್ರಕ್ಕೆ ಪ್ರೇಮ್, ರಿಷಿ, ವಿಕ್ಕಿ ವರುಣ್ ಸಾಥ್ - Avatara Purusha 2

ಉತ್ತರಕಾಂಡ ಚಿತ್ರವನ್ನು ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ನಿರ್ಮಾಣ ಮಾಡಲಿದ್ದಾರೆ. ರೋಹಿತ್ ಪದಕಿ ಅವರ ನಿರ್ದೇಶನವಿರಲಿದ್ದು, ಆ್ಯಕ್ಷನ್ ಡ್ರಾಮಾ ಚಿತ್ರವಾಗಿದೆ. ‌ನಟ ಶಿವರಾಜ್​ಕುಮಾರ್ ಮತ್ತು‌ ಧನಂಜಯ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡ ನಾಯಕಿಯ ಹುಡುಕಾಟದಲ್ಲಿದೆ. ಇದೇ ಏಪ್ರಿಲ್ 15ರಿಂದ ಚಿತ್ರೀಕರಣ ಶುರುವಾಗಲಿದೆ.

ಇದನ್ನೂ ಓದಿ:ಯಶ್ 'ಟಾಕ್ಸಿಕ್​' ಚಿತ್ರದಲ್ಲಿ ಕರೀನಾ ನಾಯಕಿಯಲ್ಲ; ವಿಶೇಷ ಪಾತ್ರ? ಬೆಂಗಳೂರಿನಲ್ಲೇ ಶೂಟಿಂಗ್​ - Kareena In Toxic

ABOUT THE AUTHOR

...view details