ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ 'ಸುಬ್ರಹ್ಮಣ್ಯ' ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಉದ್ದನೆಯ ಕೂದಲು ಬಿಟ್ಟು, ವಿಶೇಷವಾಗಿ ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ ಪೋಸ್ಟರ್ನಲ್ಲಿ ಗಮನಸೆಳೆಯುತ್ತಿದೆ.
ಆರ್ಮುಗ ರವಿಶಂಕರ್ ಪುತ್ರನ ಚೊಚ್ಚಲ ಚಿತ್ರಕ್ಕೆ ಸಿಕ್ತು ಹ್ಯಾಟ್ರಿಕ್ ಹೀರೋನ ಸಾಥ್ (ETV Bharat) ಸೋಶಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸುಬ್ರಹ್ಮಣ್ಯ ಸಿನಿಮಾದ ಶೇ.60ರಷ್ಟು ಕೆಲಸ ಪೂರ್ಣಗೊಂಡಿದ್ದು, ಮುಂಬೈನ ರೆಡ್ ಚಿಲ್ಲಿಸ್ ಸ್ಟುಡಿಯೋದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ಗ್ರಾಫಿಕ್ಸ್ ಕೆಲಸಗಳು ನಡೆಯುತ್ತಿವೆ.
ಸುಬ್ರಹ್ಮಣ್ಯ ಪೋಸ್ಟರ್ (ETV Bharat) ಎಸ್.ಜಿ ಮೂವಿ ಮೇಕರ್ಸ್ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಸುಬ್ರಹ್ಮಣ್ಯ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.
ಶಿವರಾಜ್ಕುಮಾರ್ ನಿವಾಸದಲ್ಲಿ ರವಿಶಂಕರ್ ಮತ್ತು ಪುತ್ರ ಅದ್ವೈ (ETV Bharat) ಇದನ್ನೂ ಓದಿ:Watch.. ಆಸ್ಪತ್ರೆ ತಲುಪಿದ ತುಂಬುಗರ್ಭಿಣಿ ದೀಪಿಕಾ ಪಡುಕೋಣೆ: ಹಾಸ್ಪಿಟಲ್ನಲ್ಲಿದೆ ಕಂಪ್ಲೀಟ್ ಫ್ಯಾಮಿಲಿ - Deepika Padukone Reach Hospital
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ದುರ್ಗಿ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್ ಕ್ಯಾಪ್ ಧರಿಸಿದ್ದಾರೆ.