ಕನ್ನಡ ಚಿತ್ರರಂಗದಲ್ಲಿ ಕೆಂಡಸಂಪಿಗೆ ಹಾಗೂ ಕಾಲೇಜ್ ಕುಮಾರ ಸಿನಿಮಾಗಳ ಮೂಲಕ ಭರವಸೆ ಹುಟ್ಟಿಸಿರುವ ನಟ ವಿಕ್ಕಿ ವರಣ್. ಧನ್ಯಾ ರಾಮ್ಕುಮಾರ್ ಸದ್ಯ ತಮ್ಮ ಪೌಡರ್ ಸಿನಿಮಾ ಸಕ್ಸಸ್ ಖುಷಿಯಲ್ಲಿದ್ದಾರೆ. ಇವರಿಬ್ಬರು ತೆರೆಹಂಚಿಕೊಂಡಿರುವ ಮುಂದಿನ ಬಹುನಿರಿಕ್ಷಿತ ಚಿತ್ರ ''ಕಾಲಾಪತ್ಥರ್''. ಇತ್ತೀಚೆಗೆ ಸಿನಿಮಾದ ಸಾಂಗ್ ರಿಲೀಸ್ ಆಗಿದೆ.
ವಿಕ್ಕಿ ವರಣ್ ಅವರು ಈ ಚಿತ್ರದಲ್ಲಿ ನಟನೆ ಜೊತೆ ಜೊತೆಗೆ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ತನ್ನ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ಸಿನಿಮಾ ಭರ್ಜರಿ ಪ್ರಚಾರ ಆರಂಭಿಸಿದೆ. ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ "ಬಾಂಡ್ಲಿ ಸ್ಟವ್" ಹಾಡು ಇತ್ತೀಚೆಗೆ ಅನಾವರಣಗೊಂಡಿದೆ. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿರೋದು ವಿಶೇಷ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ "ಬಾಂಡ್ಲಿ ಸ್ಟವ್".
ಆರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಮೊದಲು ಒಂದು ಹಾಡು ಶುರುವಾಗುವಾಗ ಸಂಗೀತ ನಿರ್ದೇಶಕರ ಜೊತೆಗೆ ನಿರ್ದೇಶಕರು ಇರುತ್ತಿದ್ದರು. ಈಗ ಹಾಗಲ್ಲ. ಆದ್ರೆ ಈ ಚಿತ್ರದ ನಿರ್ದೇಶಕ ವಿಕ್ಕಿ ವರುಣ್ ಆರಂಭದಿಂದಲೂ ನನ್ನ ಜೊತೆಗಿದ್ದಾರೆ. ಹಾಡು ಚೆನ್ನಾಗಿ ಮೂಡಿ ಬಂದಿದೆ ಅಂದ್ರೆ ಅದಕ್ಕೆ ಅವರು ಕಾರಣ ಎಂದು ತಿಳಿಸಿದರು.
ಇದನ್ನೂ ಓದಿ: ಚಿತ್ರದಲ್ಲಿ ವಿಕ್ಕಿ ವರಣ್ ಜೋಡಿಯಾಗಿ ಕಾಣಿಸಿಕೊಂಡಿರುವ ಧನ್ಯಾ ರಾಮ್ಕುಮಾರ್ ಮಾತನಾಡಿ, ಇದೀಗ ಬಿಡುಗಡೆಯಾಗಿರುವ ಹಾಡು ಹಾಗೂ ಚಿತ್ರ ಎರಡು ಚೆನ್ನಾಗಿದೆ ಎಂದು ತಿಳಿಸಿದರು.