ಸ್ಯಾಂಡಲ್ವುಡ್ನಲ್ಲಿ ಹೆಚ್ಚು ಸುದ್ದಿಯಾದ ವ್ಯಕ್ತಿಗಳು ಹಾಗೂ ಸಿಕ್ಕಾಪಟ್ಟೆ ಟ್ರೋಲ್ ಆದವರ ಹೆಸರುಗಳು ಸಿನಿಮಾ ಟೈಟಲ್ ಆಗೋದು ಕಾಮನ್. ಇತ್ತೀಚೆಗಷ್ಟೇ ರಾಜ್ಯದಲ್ಲಿ ಪೆನ್ ಡ್ರೈವ್ ವಿಚಾರ ಸಖತ್ ಸುದ್ದಿಯಾಗಿತ್ತು. ಇದೀಗ ಬಿಗ್ ಬ್ಯಾಸ್ ಖ್ಯಾತಿಯ ತನಿಷಾ ಕುಪ್ಪಂಡ 'ಪೆನ್ ಡ್ರೈವ್' ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈಚೆಗೆ ಚಿತ್ರದ ಶೀರ್ಷಿಕೆ ಘೋಷಿಸಲಾಗಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ.ವಿಶ್ವನಾಥ್ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ವೆಂಕಟೇಶ್, ನರಸಿಂಹಲು ಉಪಸ್ಥಿತರಿದ್ದರು.
ಮೊದಲು ಮಾತನಾಡಿದ ನಿರ್ದೇಶಕ ಸೆಬಾಸ್ಟಿನ್ ಡೇವಿಡ್, "ಈವರೆಗೂ ಹದಿನೈದು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ. ಪೆನ್ ಡ್ರೈವ್ ಶೀರ್ಷಿಕೆ ನೀಡಿದ ವಾಣಿಜ್ಯ ಮಂಡಳಿಗೆ ಧನ್ಯವಾದ. ಪ್ರಸ್ತುತ ಚಾಲ್ತಿಯಲ್ಲಿರುವ ಪೆನ್ ಡ್ರೈವ್ಗೂ ನಮ್ಮ ಚಿತ್ರದ ಶೀರ್ಷಿಕೆಗೂ ಯಾವುದೇ ಸಂಬಂಧವಿಲ್ಲ. ಈ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದಲ್ಲಿ ಪೆನ್ ಡ್ರೈವ್ ಮುಖ್ಯಪಾತ್ರ ವಹಿಸುತ್ತದೆ. ಹಾಗಾಗಿ ಆ ಶೀರ್ಷಿಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಲಯನ್ ಎಸ್.ವೆಂಕಟೇಶ್ ಹಾಗೂ ಲಯನ್ ಆರ್.ವೆಂಕಟೇಶ್ ಅವರ ಸಹಕಾರದಿಂದ ಚಿತ್ರವನ್ನು ಶೀಘ್ರ ತೆರೆಗೆ ತರುವ ಪ್ರಯತ್ನ ಮಾಡುತ್ತೇನೆ" ಎಂದು ತಿಳಿಸಿದರು.
ಬಳಿಕ ನಟಿ ತನಿಷಾ ಕುಪ್ಪಂಡ ಮಾತನಾಡಿ, "ಪೆನ್ ಡ್ರೈವ್ ಚಿತ್ರದ ಕಥೆ ಚೆನ್ನಾಗಿದೆ. ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಕೊಳ್ಳುತ್ತಿದ್ದೇನೆ. ತುಂಬಾನೇ ಖುಷಿ ಇದೆ" ಎಂದು ತಿಳಿಸಿದರು.