ಬಾಲಿವುಡ್ ನಟಿ ಆಲಿಯಾ ಭಟ್ ಇಂದು 31ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಬಹುಮುಖ ಪ್ರತಿಭೆಗೆ ಹೆಸರುವಾಸಿಯಾಗಿರುವ ನಟಿ 2012ರಲ್ಲಿ ಸ್ಟೂಡೆಂಟ್ ಆಫ್ ದಿ ಇಯರ್ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ ಹೈವೇ, ಗಲ್ಲಿ ಬಾಯ್, ಡಾರ್ಲಿಂಗ್ಸ್, ಗಂಗೂಬಾಯಿ ಕಥಿಯಾವಾಡಿ, ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ, ಬ್ರಹ್ಮಾಸ್ತ್ರದಂತಹ ಸಿನಿಮಾಗಳಲ್ಲಿ ಅದ್ಭುತ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸೋ ಮೂಲಕ ಪ್ರೇಕ್ಷಕರನ್ನು ಮನರಂಜಿಸುವಲ್ಲಿ ಯಶ ಕಂಡಿದ್ದಾರೆ. ಆರಂಭದಲ್ಲಿ ಬಂದ ಟೀಕೆ-ಟ್ರೋಲ್ಗಳನ್ನು ಸಮರ್ಥವಾಗಿ ಎದುರಿಸಿ, ಸದ್ಯ ಮೆಚ್ಚುಗೆಯ ಮಳೆ ಸ್ವೀಕರಿಸುತ್ತಿದ್ದಾರೆ. ಬಾಲಿವುಡ್ನ ಬಹುಬೇಡಿಕೆ ನಟಿಯರ ಸಾಲಿನಲ್ಲಿ ಅಗ್ರ ಕ್ರಮಾಂಕದಲ್ಲಿದ್ದಾರೆ.
ಪ್ರೇಮಕಥೆಯಿಂದ ಹಿಡಿದು ಆ್ಯಕ್ಷನ್-ಪ್ಯಾಕ್ಡ್ ಸಿನಿಮಾಗಳಲ್ಲಿ ನಟಿಸೋ ಮೂಲಕ ತಮ್ಮ ಬಹುಮುಖ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಸೂಪರ್ ಹಿಟ್ ಗಂಗೂಬಾಯಿ ಕಥಯಾವಾಡಿ ಸಿನಿಮಾದಲ್ಲಿನ ಅದ್ಭುತ ನಟನೆಗೆ ಕಳೆದ ವರ್ಷ ರಾಷ್ಟ್ರಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದ್ದಾರೆ. ಯಶಸ್ವಿ ವೃತ್ತಿಜೀವನ ಮುನ್ನಡೆಸುತ್ತಿರುವ ನಟಿಯ ಮುಂದಿನ ಚಿತ್ರಗಳ ಮೇಲೆ ಸಿನಿಪ್ರಿಯರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಟಿಯ ಮುಂಬರುವ ಸಿನಿಮಾಗಳ್ಯಾವುವು? ಎಂಬುದನ್ನು ನೋಡೋಣ ಬನ್ನಿ.
1. ಜಿಗ್ರಾ: ಇದು ನಟಿಯ ಮುಂದಿನ ಬಹುನಿರೀಕ್ಷಿತ ಚಿತ್ರಗಳಲ್ಲೊಂದು. ವೇದಾಂಗ್ ರೈನಾ ಜೊತೆ ತೆರೆ ಹಂಚಿಕೊಂಡಿದ್ದು, ಸಹೋದರರ ಕಥೆ ಎಂದು ನಂಬಲಾಗಿದೆ. ಕರಣ್ ಜೋಹರ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಆಲಿಯಾ ನಟನೆ ಜೊತೆ ಸಹನಿರ್ಮಾಪಕಿಯಾಗಿಯೂ ಕೆಲಸ ಮಾಡಿದ್ದಾರೆ. ಇದೇ ಸಾಲಿನ ಸೆಪ್ಟೆಂಬರ್ 27ರಂದು ಜಿಗ್ರಾ ತೆರೆಗಪ್ಪಳಿಸಲಿದೆ. ವಾಸನ್ ಬಾಲಾ ನಿರ್ದೇಶನದ ಈ ಚಿತ್ರದ ಮೇಲೆ ಸಿನಿಪ್ರಿಯರು ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ.