ಮಂಗಳೂರು (ದಕ್ಷಿಣ ಕನ್ನಡ): ಬಾಲಿವುಡ್ ನಿರ್ದೇಶಕಿ ಹಾಗೂ ನಿರ್ಮಾಪಕಿ ಏಕ್ತಾ ಕಪೂರ್ ಕುಟುಂಬದ ಜೊತೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಏಕ್ತಾ ಕಪೂರ್, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ದೇವಿಯ ವಿಶೇಷ ವಸ್ತ್ರ ನೀಡಿ ಅವರನ್ನು ಗೌರವಿಸಲಾಯಿತು.
ದೇವಸ್ಥಾನದಲ್ಲಿ ಕುಟುಂಬದ ಜೊತೆ ಸಮಯ ಕಳೆದ ಅವರು ಬಳಿಕ ದೇವಸ್ಥಾನಕ್ಕೆ ಹತ್ತಿರದಲ್ಲೇ ಇರುವ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ಕೊಟ್ಟರು. ಅಲ್ಲಿಯೂ ಅವರನ್ನು ಗೌರವಿಸಲಾಯಿತು.