ಕರ್ನಾಟಕ

karnataka

ETV Bharat / entertainment

'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರದಿಂದ ಚಂದನ್ ಶೆಟ್ಟಿ ಪೋಸ್ಟರ್ ರಿಲೀಸ್​

'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರದಿಂದ ಚಂದನ್ ಶೆಟ್ಟಿ ವಿಭಿನ್ನ ಪೋಸ್ಟರ್ ಅನಾವರಣಗೊಂಡಿದೆ.

chandan shetty
ಚಂದನ್ ಶೆಟ್ಟಿ

By ETV Bharat Karnataka Team

Published : Mar 9, 2024, 2:34 PM IST

ಮಹಾ ಶಿವರಾತ್ರಿ ಶುಭ ಸಂದರ್ಭದಲ್ಲಿ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರದ ಕಡೆಯಿಂದ ಪ್ರೇಕ್ಷಕರಿಗೊಂದು ಉಡುಗೊರೆ ಸಿಕ್ಕಿದೆ. ಚಿತ್ರತಂಡ ಹಂತ ಹಂತವಾಗಿ, ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಸೆಳೆಯುತ್ತ ಬಂದಿದೆ. ಅದರ ಫಲವಾಗಿಯೇ ಸಿನಿಮಾ ಕಥೆಯ ಸುತ್ತ ಒಂದಷ್ಟು ಕುತೂಹಲ ಮೂಡಿಕೊಂಡು, ಚರ್ಚೆಗಳೂ ನಡೆಯುತ್ತಿವೆ. ಈ ಹಿಂದೆ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಗೊಂಡಿತ್ತು. ಇದೀಗ ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿ ಅವರ ವಿ ಆರ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ನಿವೇದಿತಾ ಗೌಡ ಬಿಡುಗಡೆಗೊಳಿಸಿದ್ದಾರೆ.

ಅರುಣ್ ಅಮುಕ್ತ ನಿರ್ದೇಶನದ ಈ ಚಿತ್ರದಲ್ಲಿ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ ಎಂಬ ವಿಚಾರ ಈ ಹಿಂದೆಯೇ ಜಾಹೀರಾಗಿತ್ತು. ಚಂದನ್ ಯಾವ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವಿಚಾರವನ್ನು ಮಾತ್ರ ಗೌಪ್ಯವಾಗಿಡಲಾಗಿತ್ತು. ಇದೀಗ ವಿಆರ್ ಪೋಸ್ಟರ್ ಮೂಲಕ ಚಂದನ್ ಶೆಟ್ಟಿ ಪಾತ್ರ ಪರಿಚಯವಾಗಿದೆ. ಚಂದನ್ ಇಲ್ಲಿ ಕಾಣಿಸಿಕೊಂಡಿರುವ ಗೆಟಪ್​​ನ ಸುತ್ತ ಒಟ್ಟಾರೆ ಕಥೆ ಬಗ್ಗೆ ಒಂದಷ್ಟು ಕುತೂಹಲ ಮೂಡಿಕೊಂಡಿದೆ.

ಈ ವರ್ಚುಯಲ್ ರಿಯಾಲಿಟಿ ಪೋಸ್ಟರ್ ಅಂತೂ ಈಗಿನ ಜನರೇಷನ್​ನ ಹುಡುಗರಿಗೆ ನೇರಾನೇರ ಕನೆಕ್ಟ್​​ ಆಗುವಂತಿದೆ. ಚಂದನ್ ಶೆಟ್ಟಿ ಗೆಟಪ್​ ಕೂಡಾ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಜೊತೆಗೆ ಇದು ಸೈಬರ್ ಫಂಕ್ ಕಥೆ ಒಳಗೊಂಡಿರಬಹುದಾ? ಎಂಬ ಪ್ರಶ್ನೆ ಎದ್ದಿದೆ. ಈ ಹಿಂದೆ ಬಿಡುಗಡೆಗೊಂಡಿದ್ದ ಪೋಸ್ಟರ್​ನಲ್ಲಿ, ಕೈಯಲ್ಲಿ ಹಾಕಿ ಸ್ಟಿಕ್ ಹಿಡಿದಿದ್ದ ನಾಲ್ಕು ಪಾತ್ರಗಳು ಎದುರುಗೊಂಡಿದ್ದವು.

ಇದನ್ನೂ ಓದಿ:ವಿಭಿನ್ನ ಪಾತ್ರದ ಮೂಲಕ 'ಕರಾವಳಿ'ಗೆ ಎಂಟ್ರಿ ಕೊಟ್ಟ ನಟ ಮಿತ್ರ

ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರಗಿ, ಕಾಕ್ರೋಚ್ ಸುಧಿ ಸೇರಿದಂತೆ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ:ಮಹಾಶಿವರಾತ್ರಿಗೆ ರಿವೀಲ್ ಆಯ್ತು 'ಕಣ್ಣಪ್ಪ' ಲುಕ್‌

ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಶ್ರೀಕಾಂತ್ ಜಿ ಕಶ್ಯಪ್ ಕೆಲಸ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ ನಿರ್ವಹಿಸುತ್ತಿದ್ದಾರೆ. ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಚಿತ್ರೀಕರಣ ಅಂತಿಮ ಹಂತ ತಲುಪಿದೆ.

ABOUT THE AUTHOR

...view details