ಕರ್ನಾಟಕ

karnataka

ETV Bharat / entertainment

'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ವಿಭಿನ್ನ ಪಾತ್ರದಲ್ಲಿ ಬರ್ತಿದ್ದಾರೆ ಚಂದನ್ ಶೆಟ್ಟಿ - Chandan Shetty - CHANDAN SHETTY

ಚಂದನ್ ಶೆಟ್ಟಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ.

Chanda shetty
Chanda shetty

By ETV Bharat Karnataka Team

Published : Mar 26, 2024, 10:00 AM IST

'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಚಿತ್ರ ಶೀರ್ಷಿಕೆಯಿಂದಲೇ ಸ್ಯಾಂಡಲ್​​ವುಡ್​​ನಲ್ಲಿ ಸದ್ದು ಮಾಡುತ್ತಿದೆ. ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿರುವ ಹಾಗೂ ಅರುಣ್ ಅಮುಕ್ತ ನಿರ್ದೇಶನದ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿದೆ. ಶೂಟಿಂಗ್ ಅನುಭವದ ಕುರಿತು ಚಿತ್ರತಂಡ ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದೆ.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಪಾತ್ರಗಳನ್ನು ನಿರ್ವಹಿಸಿರುವ ಪ್ರಶಾಂತ್ ಸಂಬರ್ಗಿ, ಹಿರಿಯ ನಟಿ ಭವ್ಯಾ, ಸುನೀಲ್ ಪುರಾಣಿಕ್, ರಘು ರಾಮನಕೊಪ್ಪ ಮುಂತಾದವರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಎಲ್ಲರೂ ಸಿನಿಮಾ ಬಗ್ಗೆ, ಚಿತ್ರತಂಡ ಮತ್ತು ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತನಾಡಿದರು. ಈ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಮತ್ತಷ್ಟು ಕುತೂಹಲ ಮೂಡಿಸಿದೆ. ಇದೇ ವೇದಿಕೆಯಲ್ಲಿ ಪಾತ್ರಗಳನ್ನು ಪರಿಚಯಿಸುವ ವಿಡಿಯೋ ಮತ್ತು ತಾಂತ್ರಿಕ ವರ್ಗವನ್ನು ಪರಿಚಯಿಸುವ ವಿಡಿಯೋವನ್ನು ಪ್ರದರ್ಶನ ಮಾಡಲಾಯಿತು.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ತಂಡ

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಚಂದನ್ ಶೆಟ್ಟಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾರೆ. ಆ ಮೂರೂ ಆಯಾಮಗಳು ಒಂದಕ್ಕೊಂದು ತದ್ವಿರುದ್ಧ ದಿಕ್ಕಿನವುಗಳು. ಚಂದನ್ ಅವರಿಗೆ ತಮ್ಮ ಅಸಲಿ ವ್ಯಕ್ತಿತ್ವಕ್ಕೆ ವಿರುದ್ಧವಾಗಿರುವ ಪಾತ್ರಗಳನ್ನು ನಿಭಾಯಿಸುವುದು ಸವಾಲಾಗಿತ್ತಂತೆ. ಆದರೆ, ಅವಿರತ ಶ್ರಮದಿಂದ ಅದೆಲ್ಲದಕ್ಕೂ ನ್ಯಾಯ ಸಲ್ಲಿಸಿದ ಖುಷಿ ನನಗಿದೆ ಎಂದು ಚಂದನ್ ಶೆಟ್ಟಿ ಹೇಳಿದರು.

ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ:ಬಹುಕಾಲದ ಗೆಳೆಯನನ್ನು ವರಿಸಿದ ನಟಿ ತಾಪ್ಸಿ ಪನ್ನು: ಪ್ರಿ ವೆಡ್ಡಿಂಗ್​ ಫೋಟೋ ಹಂಚಿಕೊಂಡ ಸಹೋದರಿ - Taapsee Pannu marries Mathias Boe

ಅರುಣ್ ಅಮುಕ್ತ ಪಾಲಿಗಿದು ಮಹತ್ವಾಕಾಂಕ್ಷೆಯ ಚಿತ್ರ. ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಭಿನ್ನವಾಗಿ ಮೂಡಿಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ.ಶಿವಲಿಂಗೇಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಚಿತ್ರಕ್ಕಿರಲಿದೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನವಿದೆ.

ನಿರ್ದೇಶಕ ಅರುಣ್ ಅಮುಕ್ತ ಯೋಜನೆಯಂತೆ ಚಿತ್ರೀಕರಣ ಮುಗಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆ ಅವ್ಯಾಹತವಾಗಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದು ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಜಿ.ಕಶ್ಯಪ್ ಮಾಹಿತಿ ನೀಡಿದರು. ಕುಂಬಳಕಾಯಿ ಹೊಡೆದ ಬಳಿಕ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್​​ಗಳಲ್ಲಿ ಬ್ಯುಸಿಯಾಗಿದೆ. ಜೂನ್​ ಬಳಿಕ ಸಿನಿಮಾ ಬಿಡುಗಡೆಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ:ಮೇಣದ ಪ್ರತಿಮೆ ಅನಾವರಣಕ್ಕೆ ಕುಟುಂಬದೊಂದಿಗೆ ದುಬೈಗೆ ಹಾರಿದ ನಟ ಅಲ್ಲು ಅರ್ಜುನ್​ - Allu Arjun Unveil His Wax Statue

ABOUT THE AUTHOR

...view details