ಕರ್ನಾಟಕ

karnataka

ETV Bharat / entertainment

ಚೆಕ್ ಬೌನ್ಸ್ ಪ್ರಕರಣ: ನಟಿ ಪದ್ಮಜಾ ರಾವ್‌ಗೆ ದಂಡ ವಿಧಿಸಿದ ಕೋರ್ಟ್ - Padmaja Rao Check Bounce Case - PADMAJA RAO CHECK BOUNCE CASE

ಚೆಕ್ ಬೌನ್ಸ್ ಪ್ರಕರಣದಲ್ಲಿ ನಟಿ ಪದ್ಮಜಾ ರಾವ್ ಅವರ ತಪ್ಪು ಸಾಬೀತಾಗಿದೆ. ಈ ಹಿನ್ನೆಲೆ 40.20 ಲಕ್ಷ ರೂ. ದಂಡ ಪಾವತಿಸುವಂತೆ ಪದ್ಮಜಾ ರಾವ್ ಅವರಿಗೆ ನ್ಯಾಯಾಲಯ ಸೂಚಿಸಿದೆ. ದಂಡ ತೆರಲು ವಿಫಲವಾದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.

Padmaja Rao Check Bounce Case
ನಟಿ ಪದ್ಮಜಾ ರಾವ್‌ಗೆ ಶಿಕ್ಷೆ (ETV Bharat)

By ETV Bharat Karnataka Team

Published : Aug 26, 2024, 6:17 PM IST

ಮಂಗಳೂರು (ದಕ್ಷಿಣ ಕನ್ನಡ): ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ.

ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರು ತನ್ನಿಂದ 41ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು 2021ರಲ್ಲಿ ನಟಿ ಪದ್ಮಜಾ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಗೆ ಪದ್ಮಜಾ ರಾವ್ ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಲು ಬಂದ ಸಂದರ್ಭ ಪರಿಚಯವಾಗಿದ್ದರು. ಬಳಿಕ ವೀರೇಂದ್ರ ಶೆಟ್ಟಿಯವರ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಟಿ ಪದ್ಮಜಾ ಹಂತ ಹಂತವಾಗಿ 41 ಲಕ್ಷ ರೂ. ಸಾಲವನ್ನು ಪಡೆದಿದ್ದರು. ಸಾಲದ ಭದ್ರತೆಗೆ ಅವರು 40 ಲಕ್ಷ ರೂ.ನ ಚೆಕ್ ನೀಡಿದ್ದರು‌.

ಇದನ್ನೂ ಓದಿ:ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಆದರೆ ಪದ್ಮಜಾ ರಾವ್ ಅವರು ಸಾಲ ಹಿಂತಿರುಗಿಸಿದ ಹಿನ್ನೆಲೆ ವೀರೇಂದ್ರ ಅವರು ಆ ಚೆಕ್​ ಮೂಲಕ ಹಣ ಪಡೆಯಲು ಮುಂದಾದರು. ಆದರೆ, ಬ್ಯಾಂಕ್​ನಲ್ಲಿ ಹಣವಿಲ್ಲದಿದ್ದರಿಂದ ಚೆಕ್ ಬೌನ್ಸ್ ಆಗಿತ್ತು. ಬಳಿಕ ಪ್ರಕರಣ ಮಂಗಳೂರಿನ ಎಂಟನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮೆಟ್ಟಿಲೇರಿತ್ತು. ವಾದ-ವಿವಾದವನ್ನು ಆಲಿಸಿದ ನ್ಯಾಯಾಲಯ ನಟಿ ಪದ್ಮಜಾ ರಾವ್ ಹಣ ನೀಡದೇ ವಂಚಿಸಿದ್ದಾರೆ ಎಂದು ತಿಳಿಸಿದೆ. 40.20 ಲಕ್ಷ ರೂ. ದಂಡ ಪಾವತಿಸುವಂತೆ ಪದ್ಮಜಾ ರಾವ್ ಅವರಿಗೆ ನ್ಯಾಯಾಲಯ ಆದೇಶಿಸಿದೆ. ದಂಡದ ಮೊತ್ತದಲ್ಲಿ 40.17 ಲಕ್ಷ ರೂಪಾಯಿಯನ್ನು ದೂರುದಾರ ವೀರೇಂದ್ರ ಶೆಟ್ಟಿ ಅವರಿಗೆ ಹಾಗೂ ಉಳಿದ ಮೂರು ಸಾವಿರವನ್ನು ರಾಜ್ಯದ ಬೊಕ್ಕಸಕ್ಕೆ ತುಂಬಲು ನ್ಯಾಯಾಲಯ ಸೂಚಿಸಿದೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ:’’ಕಾನೂನು ಹೋರಾಟದಲ್ಲಿ ಗೆದ್ದೇ ಗೆಲ್ಲುವೆ ಎಂಬ ಭರವಸೆ ನನಗಿದೆ‘‘: ನಟಿ ಪದ್ಮಜಾ ರಾವ್

ABOUT THE AUTHOR

...view details