ಕರ್ನಾಟಕ

karnataka

ETV Bharat / entertainment

ತೆರೆಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿಯವರ 'ಜುಗಾರಿ ಕ್ರಾಸ್‌': ಗುರುದತ್ ಗಾಣಿಗ ನಿರ್ದೇಶನ - Jugari Cross - JUGARI CROSS

ಪೂರ್ಣಚಂದ್ರ ತೇಜಸ್ವಿ ಅವರ ಜನಪ್ರಿಯ ಕಾದಂಬರಿ 'ಜುಗಾರಿ ಕ್ರಾಸ್'ಗೆ ಸಿನಿಮಾ ಟಚ್​​ ಸಿಗುತ್ತಿದೆ. ನಿರ್ದೇಶಕ ಗುರುದತ್ ಗಾಣಿಗ ಆ್ಯಕ್ಷನ್​ ಕಟ್​​ ಹೇಳುತ್ತಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಂಡಿದ್ದು, ಸಿನಿಪ್ರಿಯರು ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ.

Gurudath Ganiga's 'Jugari Cross'
ಗುರುದತ್ ಗಾಣಿಗ ನಿರ್ದೇಶನದಲ್ಲಿ 'ಜುಗಾರಿ ಕ್ರಾಸ್‌' (ETV Bharat)

By ETV Bharat Entertainment Team

Published : Sep 9, 2024, 12:41 PM IST

'ಜುಗಾರಿ ಕ್ರಾಸ್'. ಈ ಪ್ರಸಿದ್ದ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಓದದೇ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ, ಪ್ರಸಿದ್ಧ ಕಾದಂಬರಿಗಳಲ್ಲಿ 'ಜುಗಾರಿ ಕ್ರಾಸ್' ಕೂಡ ಒಂದು. ಮಲೆನಾಡಿನ ಕೃಷಿಕ ದಂಪತಿಯ ಸ್ವಾರಸ್ಯಕರ ಕಥೆಯೇ ಈ 'ಜುಗಾರಿ ಕ್ರಾಸ್'.

ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ಕಾದಂಬರಿಯಲ್ಲಿ ವಿವರಿಸಲಾಗಿದೆ. ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ರೋಚಕವಾಗಿ ಹೇಳಿದ್ದಾರೆ ಪೂಚಂತೇ. ಓದುಗರ ಮೆಚ್ಚಿನ, ಶ್ರೇಷ್ಠ ಕಾದಂಬರಿ 'ಜುಗಾರಿ ಕ್ರಾಸ್' ಇದೀಗ ಸಿನಿಮಾ ಆಗುತ್ತಿದೆ. ಬೆಳ್ಳಿ ಪರದೆ ಮೇಲೆ ರಾರಾಜಿಸಲು ಸಿದ್ದವಾಗುತ್ತಿದೆ.

ಪೂರ್ಣಚಂದ್ರ ತೇಜಸ್ವಿ ಹುಟ್ಟುಹಬ್ಬಕ್ಕೆ ಬಿಗ್ ಸರ್ಪೈಸ್:ಈ ಕಾದಂಬರಿಯನ್ನು ತೆರೆಮೇಲೆ ತರುವ ಸಾಹಸಕ್ಕೆ ಮುಂದಾಗಿದ್ದಾರೆ 'ಕರಾವಳಿ' ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ. ಭಾನುವಾರ, ಪೂರ್ಣಚಂದ್ರ ತೇಜಸ್ವಿ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾ ಅನೌನ್ಸ್ ಮಾಡಿ ಬಿಗ್ ಸರ್ಪೈಸ್ ನೀಡಿದ್ದಾರೆ ನಿರ್ದೇಶಕರು. ಫಸ್ಟ್ ಲುಕ್ ಪೋಸ್ಟರ್ ಕೂಡಾ ರಿಲೀಸ್ ಆಗಿದ್ದು ಗಮನ ಸೆಳೆಯುತ್ತಿದೆ.

ಜುಗಾರಿ ಕ್ರಾಸ್​ಗೆ ಸಿನಿಮಾ ಟಚ್​: ಜುಗಾರಿ ಕ್ರಾಸ್ ಕಾದಂಬರಿಯನ್ನು ಸಿನಿಮಾ ಮಾಡಬೇಕೆಂದು ಕನಸು ಕಂಡವರು ಅನೇಕರು. ಕನ್ನಡ ಚಿತ್ರರಂಗದ ದೊಡ್ಡ ದೊಡ್ಡ ನಿರ್ದೇಶಕರು, ಕಲಾವಿದರು ಪ್ರಯತ್ನಪಟ್ಟಿದ್ದರು. ಆದರೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಆದ್ರೀಗ ಕಾಲ ಕೂಡಿ ಬಂದಿದೆ. ಜುಗಾರಿ ಕ್ರಾಸ್ ಕಾಂದಬರಿಯನ್ನು ತೆರೆಮೇಲೆ ಕಣ್ತುಂಬಿಕೊಳ್ಳುವ ಸಮಯ ಪ್ರೇಕ್ಷಕರಿಗೆ ಒದಗಿ ಬಂದಿದೆ.

ನಿರ್ದೇಶಕ ಗುರುದತ್ ಗಾಣಿಗ ಪೋಸ್ಟ್: ನಿರ್ದೇಶಕರು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದ್ದಾರೆ.'ದಂತಕಥೆಯ ಜನುಮದಿನದ ಸಂಭ್ರಮದಲ್ಲಿ ಲೋಕವೇ ಮೆಚ್ಚಿದ ಅವರ ಶ್ರೇಷ್ಠ ಕೃತಿ ಸಿನಿಮಾವಾಗುವ ಸಮಯ. ಬೆಳ್ಳಿ ಪರದೆ ಮೇಲೆ ಜುಗಾರಿ ಕ್ರಾಸ್​' ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ನಟ ದರ್ಶನ್, ಸಹಚರರ ನ್ಯಾಯಾಂಗ ಬಂಧನ ಅವಧಿ ಅಂತ್ಯ: ವಿಡಿಯೋ ಕಾನ್ಫರೆನ್ಸ್​ನಲ್ಲಿ ಕೋರ್ಟ್​ಗೆ ಇಂದು ಹಾಜರು - Renukaswamy Murder

ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳುತ್ತಿದ್ದಾರೆ, ಜುಗಾರಿ ಕ್ರಾಸ್​ನ ಪ್ರಮುಖ ಪಾತ್ರಗಳಿಗೆ ಯಾರೆಲ್ಲಾ ಜೀವ ತುಂಬಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಸುಪ್ರಸಿದ್ಧ ಕಾದಂಬರಿಯನ್ನು ತೆರೆ ಮೇಲೆ ತರುವುದೆ ಅತೀ ದೊಡ್ಡ ಜವಾಬ್ದಾರಿ. ಹಾಗಾಗಿ, ಈ ಶ್ರೇಷ್ಠ ಕಾದಂಬರಿಯ ಸಿನಿಮಾದಲ್ಲಿ ಹೊಸ ಕಲಾವಿದರು ಕಾಣಿಸಿಕೊಳ್ಳುತ್ತಾರಾ? ಅಥವಾ ಸ್ಟಾರ್ ನಟರು ಬಣ್ಣ ಹಚ್ಚುತ್ತಾರಾ? ಎಂಬುದನ್ನು ಕಾದು ನೋಡಬೇಕು. ಶೀಘ್ರದಲ್ಲೇ ಕಾಸ್ಟ್​ ಸೇರಿದಂತೆ ಇನ್ನಿತರೆ ವಿಚಾರಗಳು ಚಿತ್ರರಂಡದಿಂದ ಅಧಿಕೃತವಾಗಿ ಘೋಷಣೆಯಾಗಲಿದೆ.

ಇದನ್ನೂ ಓದಿ:ದೀಪ್​ ವೀರ್​ ಕುಟುಂಬಕ್ಕೆ ಹೊಸ ಅತಿಥಿ; ಬಂದೇ ಬಿಟ್ಲು ಮಹಾಲಕ್ಷ್ಮಿ - ranveer Deepika baby girl

ಈ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಅವರ ಕ್ಯಾಮರಾ ವರ್ಕ್ ಇರಲಿದೆ. ಇನ್ನೂ ತಾಂತ್ರಿಕ ವರ್ಗ, ಉಳಿದೆಲ್ಲಾ ಕಲಾವಿದರ ಬಗ್ಗೆ ಸಂಪೂರ್ಣ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ. ಜುಗಾರಿ ಕ್ರಾಸ್ ಸಿನಿಮಾಗುತ್ತಿದೆ ಎನ್ನುವ ಸುದ್ದಿ ಕೇಳಿಯೇ ತೇಜಸ್ವಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಸಿನಿಮಾ ಹೇಗೆ ಮೂಡಿ ಬರಲಿದೆ ಎಂಬ ಕುತೂಹಲ, ನಿರೀಕ್ಷೆ, ಕಾತರ ಎಲ್ಲರಲ್ಲೂ ಇದೆ.

ABOUT THE AUTHOR

...view details