ಕರ್ನಾಟಕ

karnataka

ETV Bharat / entertainment

ಕಬಡ್ಡಿ ಆಟಗಾರನ ದುರಂತ ಕಥೆ 'ಪರ್ಶು' ಚಿತ್ರಕ್ಕೆ ಸಿಂಪಲ್ ಸುನಿ ಸಾಥ್​

ಕಬಡ್ಡಿ ಆಟಗಾರನ ದುರಂತದ ಕಥೆ ಹೇಳುವ 'ಪರ್ಶು' ಚಿತ್ರ ತಂಡಕ್ಕೆ ನಿರ್ದೇಶಕ ಸಿಂಪಲ್ ಸುನಿ ಶುಭ ಹಾರೈಸಿದರು.

By ETV Bharat Karnataka Team

Published : Feb 21, 2024, 8:01 PM IST

ಪರ್ಶು ಚಿತ್ರ ತಂಡ
ಪರ್ಶು ಚಿತ್ರ ತಂಡ

ಸ್ಯಾಂಡಲ್​ವುಡ್​​ನಲ್ಲಿ ನೈಜ ಘಟನೆ ಆಧಾರಿತ ಸಿನಿಮಾಗಳಿಗೇನು ಬರವಿಲ್ಲ. ಲವ್​, ಬಿಲ್ಡಪ್, ಹೊಡಿ-ಬಡಿ ಸಿನಿಮಾಗಳ ನಡುವೆಯೂ ನೈಜ ಘಟನೆ ಆಧಾರಿತ ಸಿನಿಮಾಗಳು ಸಹ ಅಭಿಮಾನಿಗಳ ಗಮನ ಸೆಳೆಯುತ್ತಿವೆ. ಇದೀಗ ಹೊಸಬರ ತಂಡವೊಂದು ರಾಜ್ಯ ಮಟ್ಟದ ಕಬಡ್ಡಿ ಆಟಗಾರನೊಬ್ಬನ ದುರಂತದ ಕಥೆಯನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈಹಾಕಿದ್ದಾರೆ.

ಚಿತ್ರಕ್ಕೆ 'ಪರ್ಶು' ಎಂದು ಟೈಟಲ್ ಸಹ ಇಡಲಾಗಿದೆ. ಟೈಟಲ್ ರಿಲೀಸ್ ಮಾಡುವ ನೆಪದಲ್ಲಿ ಚಿತ್ರ ತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು. ತಂಡಕ್ಕೆ ನಿರ್ದೇಶಕ ಸಿಂಪಲ್ ಸುನಿ, ಮಾಜಿ ಪೊಲೀಸ್ ಅಧಿಕಾರಿ, ನಟಿ ಸಪ್ತಮಿ ಗೌಡ ಅವರ ತಂದೆ ಹೆಚ್ ಸಿ ಉಮೇಶ್, ಕಾಶಿನಾಥ್ ಅವರ ಪುತ್ರ ಅಭಿಮನ್ಯು ಸಾಥ್ ನೀಡಿದರು. ಟೈಟಲ್ ಪೋಸ್ಟರ್ ರಿಲೀಸ್ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು.

ಚಿತ್ರ ತಂಡ

ಚಿತ್ರಕ್ಕೆ ರುದ್ರ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳಿದ್ದು, ನಿರ್ದೇಶಕ ಶ್ರೀನಿವಾಸ್ ಅವರಿಗೆ ಚೊಚ್ಚಲ ಸಿನಿಮಾ ಇದಾಗಿದೆ. ಹಾಗಂತ ಸಿನಿಮಾರಂಗ ಅವರಿಗೆ ಹೊಸದೇನಲ್ಲ. ಶ್ರೀನಿವಾಸ್ ಅವರು ಊರ್ವಶಿ ಚಿತ್ರಮಂದಿರದಲ್ಲಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇದೀಗ ನಿರ್ದೇಶಕರಾಗಿ ಸ್ಯಾಂಡಲ್‌ವುಡ್​​ಗೆ ಎಂಟ್ರಿ ಕೊಟ್ಟಿದ್ದಾರೆ. 'ಪರ್ಶು' ಚಿತ್ರಕ್ಕೆ ಪರಶುರಾಮ್ ಬಂಡವಾಳ ಹೂಡುತ್ತಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಕಬಡ್ಡಿ ಆಟಗಾರನ ಪಾತ್ರದಲ್ಲಿ ಪರಶುರಾಮ್ ಅವರೇ ಕಾಣಿಸಿಕೊಳ್ಳುತ್ತಿದ್ದಾರೆ.

ಅಂದಹಾಗೆ ಇದು 2014 ಮತ್ತು 2015ರಲ್ಲಿ ನಡೆದ ಘಟನೆ ಇದಾಗಿದೆ. ಮೈಸೂರು ಭಾಗದ ರಾಜ್ಯಮಟ್ಟದ ಕಬಡ್ಡಿ ಆಟಗಾರನೊಬ್ಬನ ಕಥೆ ಇದಾಗಿದೆ. ದೊಡ್ಡ ಆಟಗಾರನಾಗಬೇಕು ಎನ್ನುವ ಕನಸು ಕಂಡಿದ್ದ ವ್ಯಕ್ತಿಯ ಮೇಲೆ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕುಳುಹಿಸಿ ಆತನ ಜೀವನ ಮತ್ತು ಇಡೀ ಕುಟುಂಬದ ಬದುಕನ್ನೇ ಕಿತ್ತುಕೊಂಡ ಘಟನೆ ಇದಾಗಿದೆ. ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿರುವ ಸಿನಿಮಾ ತಂಡ, ತೆರೆಮೇಲೆ ತರುವ ಪ್ರಯತ್ನ ಮಾಡುತ್ತಿದೆ.

ಚಿತ್ರ ತಂಡ

ಸಿನಿಮಾದ ಪೋಸ್ಟರ್ ಅನಾವರಣ ಮಾಡಿ ಮಾತನಾಡಿದ ಮಾಜಿ ಪೊಲೀಸ್ ಅಧಿಕಾರಿ ಹೆಚ್ ಸಿ ಉಮೇಶ್, ಈ ಸಿನಿಮಾಗೆ ನಾನು ಕೂಡ ಸಾಕಷ್ಟು ಇನ್‌ಪುಟ್ ಕೊಡುತ್ತಿದ್ದೀನಿ. ನನ್ನ ಬೆಂಬಲ ಖಂಡಿತ ಇರುತ್ತೆ ಎಂದು ಹೇಳಿದರು. ಇನ್ನು ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ಈ ಕಥೆ ತುಂಬಾ ಚೆನ್ನಾಗಿ ಇದೆ. ನೈಜ ಘಟನೆ ಆಧಾರಿತ ಘಟನೆ, ಪರಶು ಅವರೇ ಈ ಸಿನಿಮಾಗೆ ಸೂಕ್ತ ಎಂದು ಹೇಳಿದರು. ನಟ ಕಾಶಿನಾಥ್ ಅವರ ಪುತ್ರ ಮಾತನಾಡಿ, ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು. ಜೊತೆಗೆ ಅಷ್ಟೇ ನೋವು ಕೂಡ ಆಯ್ತು. ಕರಳು ಹಿಂಡುವ ಕಥೆ ಎಂದರು.

ಚಿತ್ರ ತಂಡ

ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ಬಡವರ ಮೇಲಿನ ದೌರ್ಜನ್ಯದ ಬಗ್ಗೆ ಇರುವ ಸಿನಿಮಾ ಇದಾಗಿದೆ. ಈ ಕಥೆ ಮಾಡುವಾಗ ಆ ಕುಟುಂಬದ ಜೊತೆ ಒಂದಿಷ್ಟು ದಿನ ಇದ್ದೆ ಎಂದರು. ನಾಯಕ ಮತ್ತು ನಿರ್ಮಾಪಕ ಪರಶುರಾಮ್ ಮಾತನಾಡಿ, ಅನೇಕ ವರ್ಷಗಳಿಂದ ಈ ಸಿನಿಮಾದ ಕಥೆಗಾಗಿ ಕೆಲಸ ಮಾಡಿದ್ದೀನಿ. ಯಾವುದೇ ತಪ್ಪು ಮಾಡದ ಉತ್ತಮ ಆಟಗಾರನ ದುರಂತ ಬದುಕಿನ ಘಟನೆ ಇದಾಗಿದೆ ಅಂದರು. ಸದ್ಯ ಅನೇಕ ವರ್ಷಗಳಿಂದ ಈ ಸಿನಿಮಾಗಾಗಿ ತಯಾರಿ ನಡೆಯುತ್ತಿದ್ದು, ಇದೀಗ ಅಧಿಕೃತವಾಗಿ ಟೈಟಲ್ ಪೋಸ್ಟರ್ ಲಾಂಚ್ ಮಾಡುವ ಚಿತ್ರದ ತಂಡ ಚಿತ್ರೀಕರಣ ಮಾಡೋದಕ್ಕೆ ಸಜ್ಜಾಗಿದೆ.

ಇದನ್ನೂ ಓದಿ:ಕಾಟೇರ ಚಿತ್ರದ ಟೈಟಲ್ ವಿಚಾರ: ನಟ ದರ್ಶನ್ -ನಿರ್ಮಾಪಕ ಉಮಾಪತಿ ನಡುವೆ ಜಟಾಪಟಿ

ABOUT THE AUTHOR

...view details