ಕರ್ನಾಟಕ

karnataka

ETV Bharat / entertainment

ಕಲಾಸಾಮ್ರಾಟ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ದುನಿಯಾ ವಿಜಯ್, ಶ್ರೇಯಸ್ ಮಂಜು - S NARAYAN DIRECTION - S NARAYAN DIRECTION

ಕಲಾಸಾಮ್ರಾಟ್ ಡಾ. ಎಸ್ ನಾರಾಯಣ್ ಅವರ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ದುನಿಯಾ ವಿಜಯ್, ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ.

S Narayan  Duniya Vijay  Shreyas Manju
ಕಲಾಸಾಮ್ರಾಟ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ದುನಿಯಾ ವಿಜಯ್, ಶ್ರೇಯಸ್ ಮಂಜು (ETV Bharat)

By ETV Bharat Karnataka Team

Published : Jun 3, 2024, 1:11 PM IST

ಡಾ. ರಾಜಕುಮಾರ್, ಡಾ. ವಿಷ್ಣುವರ್ಧನ್, ಡಾ. ಅಂಬರೀಶ್ ಅಂತಹ ದಿಗ್ಗಜರ ಸಿನಿಮಾಗಳನ್ನ ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ. ಎಸ್ ನಾರಾಯಣ್. ಸದ್ಯ ಎಸ್. ನಾರಾಯಣ್ ಅವರು ಬಹಳ ವರ್ಷಗಳ ಬಳಿಕ ಮತ್ತೆ ಸಿನಿಮಾ ಡೈರೆಕ್ಷನ್​ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರೊಡಕ್ಷನ್ ನಂ 1 ಎಂಬ ಹೆಸರಿನಲ್ಲಿ ಹೊಸ ಚಿತ್ರ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ.

ಶ್ರೇಯಸ್ ಮಂಜು (ETV Bharat)

ಮೊದಲ ಹಂತದ ಶೂಟಿಂಗ್​ ಮುಕ್ತಾಯ; ದುನಿಯಾ ವಿಜಯ್ ಅವರು ಜೂನ್ 5 ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ.

ದುನಿಯಾ ವಿಜಯ್ (ETV Bharat)

ವಿಭಿನ್ನ ಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ದುನಿಯಾ ವಿಜಯ್ (ETV Bharat)

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ. ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್. ನಾರಾಯಣ್, ಕೆ. ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ.

ಶ್ರೇಯಸ್ ಮಂಜು (ETV Bharat)

ಎಸ್. ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ. ಕೆ. ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನ "ಪ್ರೊಡಕ್ಷನ್ ನಂ 1" ಚಿತ್ರಕ್ಕಿದೆ. ಇಷ್ಟೆಲ್ಲಾ ವಿಶೇಷತೆ ಇರುವ ಈ ಚಿತ್ರದ ಟೈಟಲ್ ಏನು ಅನ್ನೋದನ್ನು ಚಿತ್ರತಂಡ ಸದ್ಯದಲ್ಲೇ ರಿವೀಲ್ ಮಾಡಲಿದೆ.

ಇದನ್ನೂ ಓದಿ:ದೀಪಿಕಾ ಪಡುಕೋಣೆ ಫ್ಯಾಮಿಲಿ ಡಿನ್ನರ್ ಡೇಟ್​: ತಾರೆಯ ಬೇಬಿ ಬಂಪ್​ ವಿಡಿಯೋ ವೈರಲ್​ - Deepika padukone

ABOUT THE AUTHOR

...view details