ಕರ್ನಾಟಕ

karnataka

ETV Bharat / entertainment

'O2' ಚಿತ್ರ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯುತ್ತದೆ: ಅಶ್ವಿನಿ ಪುನೀತ್ ರಾಜ್‌ಕುಮಾರ್ - O2 Movie - O2 MOVIE

'O2' ಚಿತ್ರದ ಬಗ್ಗೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ashwini-puneeth-rajkumar
ಅಶ್ವಿನಿ ಪುನೀತ್ ರಾಜ್‌ಕುಮಾರ್

By ETV Bharat Karnataka Team

Published : Apr 1, 2024, 9:43 PM IST

ಸ್ಯಾಂಡಲ್​ವುಡ್​ನ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆಯಾದ ಪಿ.ಆರ್.ಕೆ ಪ್ರೊಡಕ್ಷನ್ಸ್ ಇದೀಗ 'O2' ಎಂಬ ಹೊಸ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಇದೊಂದು ಕುತೂಹಲಕಾರಿ ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು, ಪ್ರೀತಿ-ಪ್ರೇಮದ ಅಂಶಗಳ ಜತೆಗೆ ಲವ್ ಥ್ರಿಲ್ಲರ್ ಕಥೆಯನ್ನೂ ಹೊಂದಿದೆ.

ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ‌ ಪಿ.ಆರ್.ಕೆ ಪ್ರೊಡಕ್ಷನ್ಸ್ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದೆ. ಪಿ.ಆರ್.ಕೆ ಬ್ಯಾನರ್​ನಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಈ ಬ್ಯಾನರ್​ನಡಿ ನಿರ್ಮಾಣವಾಗುತ್ತಿರುವ 10ನೇ ಚಿತ್ರವಾಗಿದೆ. ಚಿತ್ರದಲ್ಲಿ ಆಶಿಕಾ ರಂಗನಾಥ್, ಪ್ರವೀಣ್ ತೇಜ್, ರಾಘವ್ ನಾಯಕ್, ಸಿರಿ ರವಿಕುಮಾರ್ ಹಾಗೂ ಪ್ರಕಾಶ್ ಬೆಳವಾಡಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಚಿತ್ರವನ್ನು ಪ್ರಶಾಂತ್ ರಾಜ್ ಮತ್ತು ಚಿತ್ರದ‌ ನಾಯಕ ರಾಘವ್ ನಾಯಕ್ ನಿರ್ದೇಶಿಸಿದ್ದಾರೆ‌.

'O2' ಚಿತ್ರ

'O2' ಬಹಳ ವಿಭಿನ್ನವಾದ ಕಥಾಹಂದರ ಹೊಂದಿರುವಂತಹ ಚಿತ್ರ. ಸಾಯುತ್ತಿರುವವರನ್ನು ಬದುಕಿಸುವುದೇ ವೈದ್ಯರ ಆದ್ಯ ಕರ್ತವ್ಯ ಎಂದು ನಂಬುವ 'ಶ್ರದ್ಧಾ' ಪಾತ್ರದಲ್ಲಿ ಆಶಿಕಾ ರಂಗನಾಥ್ ನಟಿಸಿದ್ದಾರೆ. ಸಂಶೋಧನೆಯ ಮೂಲಕ ಕಂಡು ಹಿಡಿಯುವ ಒಂದು ಚಾಲೆಂಜಿಂಗ್ ಪಾತ್ರ ಇದಾಗಿದೆ. ಡ್ರಗ್ಸ್​ ಮೂಲಕ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವವರನ್ನು ಬದುಕಿಸುವ ಪ್ರಯತ್ನಕ್ಕೆ ಶ್ರದ್ಧಾ ಮುಂದಾಗುತ್ತಾಳೆ. ಈ ಹಾದಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಾಳೆ. ಆ ಎಲ್ಲ ಅಡೆತಡೆಗಳನ್ನು ಮೀರಿ ಗುರಿ ತಲುಪಲು ಶ್ರದ್ಧಾಳಿಗೆ ಸಾಧ್ಯವಾಗುವುದೋ, ಇಲ್ಲವೋ ಎಂಬುದೇ ಚಿತ್ರದ ಕಥೆ.

ಮೆಡಿಕಲ್ ಥ್ರಿಲ್ಲರ್ ಸಿನಿಮಾ ಬಗ್ಗೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಾತನಾಡಿ, ''O2 ಎಂಬ ವಿಭಿನ್ನವಾದ ಚಿತ್ರ ನಿರ್ಮಿಸಿರುವುದು ನಮಗೆ ಹೆಮ್ಮೆ ಇದೆ. ಚಿತ್ರವನ್ನು ಪ್ರೇಕ್ಷಕರ ಮುಂದಿಡಲು ಕಾತುರದಿಂದ ಕಾಯುತ್ತಿದ್ದೇನೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶ ನಮ್ಮ ಸಂಸ್ಥೆಯದು. ಈ‌ ಚಿತ್ರವು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿಯುತ್ತದೆ. ಭಾರಿ‌ ಮಟ್ಟದಲ್ಲಿ ಪರಿಣಾಮ ಬೀರಲಿದೆ ಎಂದು ನಂಬಿದ್ದೇನೆ'' ಎಂದರು.

'O2' ಚಿತ್ರ

ರಾಘವ್ ನಾಯಕ್ ಹಾಗೂ ಪ್ರಶಾಂತ್ ರಾಜ್ ಎಂಬ ಇಬ್ಬರು ನಿರ್ದೇಶಕರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ವಿವಾನ್ ರಾಧಾಕೃಷ್ಣ ಸಂಗೀತ ನೀಡಿದ್ದು, ನವೀನ್ ಕುಮಾರ್ ಎಸ್ ಕ್ಯಾಮರಾ ವರ್ಕ್ ಇದೆ. ದೀಪು ಎಸ್.ಕುಮಾರ್ ಸಂಕಲನ, ಅವಿನಾಶ್ ಎಸ್.ದಿವಾಕರ್ ಕಲೆ ಇದ್ದು, ಇಂಚರಾ ಸುರೇಶ್ ಕಾಸ್ಟೂಮ್ ಡಿಸೈನ್ ಮಾಡಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಣ ಹೂಡಿಕೆ ಮಾಡಿದ್ದು, ಕಾರ್ಯಕಾರಿ ನಿರ್ಮಾಪಕರಾಗಿ ಪುಟ್ಟಸ್ವಾಮಿ ಕೆ.ಬಿ. ಮತ್ತು ಸತೀಶ್ ವಿ. ಕೆಲಸ ಮಾಡಿದ್ದಾರೆ. ಸದ್ಯ ಟೀಸರ್​​ನಿಂದ ಕುತೂಹಲ ಹುಟ್ಟಿಸಿರುವ ಚಿತ್ರವು ಏಪ್ರಿಲ್ 19ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಇದನ್ನೂ ಓದಿ:ಚುನಾವಣೆ, ಐಪಿಎಲ್​ ಅಬ್ಬರದ ನಡುವೆಯೂ ಪ್ರೇಕ್ಷಕರ ಮನಗೆದ್ದ 'ಯುವ' - Yuva Movie

ABOUT THE AUTHOR

...view details