ನಟರಾದ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಮತ್ತು ಚಂದ್ರ ಮೋಹನ್ ನಿರ್ದೇಶನದ 'ಫಾರೆಸ್ಟ್' ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಪುನೀತ್ ಆರ್ಯ ಬರೆದು ಧರ್ಮವಿಶ್ ಸಂಗೀತ ನೀಡಿರುವ 'ಓಡೋ ಓಡೋ..' ಎಂಬ ಹಾಡು ಎನ್.ಎಂ.ಕೆ ಸಿನಿಮಾಸ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಖ್ಯಾತ ಗಾಯಕ ಕೈಲಾಶ್ ಖೇರ್ ಹಾಡಿರುವ ಈ ಹಾಡು ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.
ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಫಾರೆಸ್ಟ್ ಹಾಗೂ ಬೆಂಗಳೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಜೊತೆಗೆ ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.