ಸ್ಯಾಂಡಲ್‌ವುಡ್‌ನ ಮೋಸ್ಟ್ ಎಲಿಜಬಲ್ ಬ್ಯಾಚುಲರ್, ಹ್ಯಾಂಡ್ಸಮ್ ಹಂಕ್ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದಾರೆ. ಮದುವೆ ಯಾವಾಗ ಎನ್ನುವ ಪ್ರಶ್ನೆ ಡಾಲಿಗೆ ಯಾವಾಗಲೂ ಎದುರಾಗುತ್ತಿತ್ತು. ಕೊನೆಗೂ ಇದೀಗ ಆ ಪ್ರಶ್ನೆಗೆ ಡಾಲಿ ಧನಂಜಯ ಕಡೆಯಿಂದ ಉತ್ತರ ಸಿಕ್ಕಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡಿಯೋ ಹಾಗೂ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಧನಂದಯ ಮದುವೆ ಸುದ್ದಿ ಹಂಚಿಕೊಂಡಿದ್ದಾರೆ. ಡಾಲಿ ಯಾರನ್ನು ಮದುವೆಯಾಗುತ್ತಾರೆ? ಚಿತ್ರರಂಗದವರಾ ಅಥವಾ ಬೇರೆ ಕ್ಷೇತ್ರದವರನ್ನು ಮದುವೆಯಾಗುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಿಗಿತ್ತು. ಇದೀಗ ಆ ಎಲ್ಲ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಧನಂಜಯ ವೈದ್ಯೆಯನ್ನು ಕೈ ಹಿಡಿಯುತ್ತಿದ್ದಾರೆ. ಹೌದು ಡಾಲಿ ಮದುವೆಯಾಗುತ್ತಿರುವ ಹುಡುಗಿಯ ಹೆಸರು ಧನ್ಯತಾ. ಗೈನಕಾಲಜಿಸ್ಟ್ ಆಗಿರುವ ಧನ್ಯತಾ ಡಾಲಿ ಅವರನ್ನು ವರಿಸಲಿದ್ದಾರೆ.
ಅನೇಕ ವರ್ಷಗಳಿಂದ ಪರಿಚಯ:ಡಾಲಿ ಮತ್ತು ಧನ್ಯತಾ ಇಬ್ಬರಿಗೂ ಅನೇಕ ವರ್ಷಗಳಿಂದ ಪರಿಚಯ. ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರಲು ಸಿದ್ಧರಾಗಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಕೂಡ ಓದಿದ್ದು ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಸುಂದರವಾಗಿ ಕಂಗೊಳಿಸುತ್ತಿದ್ದಾರೆ. ಕವಿ ದ.ರಾ.ಬೇಂದ್ರೆ ಅವರ ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ ಧನಂಜಯ. ಧನ್ಯತಾ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಇಬ್ಬರ ಮುದ್ದಾದ ವಿಡಿಯೋಗೆ ಅಭಿಮಾನಿಗಳಿಂದ ಪ್ರೀತಿಯ ಶುಭಾಶಯ ಹರಿದುಬರುತ್ತಿದೆ.