ಕರ್ನಾಟಕ

karnataka

ETV Bharat / entertainment

ಇಂದ್ರಜಿತ್ ಲಂಕೇಶ್ ಪುತ್ರನ ಚೊಚ್ಚಲ ಚಿತ್ರಕ್ಕೆ ಅನಿಲ್ ಕುಂಬ್ಳೆ, ಅಶ್ವಿನಿ ಪುನೀತ್ ರಾಜ್​​ಕುಮಾರ್ ಸಾಥ್ - Gowri Pre Teaser - GOWRI PRE TEASER

ಉದಯೋನ್ಮುಖ ನಟ ಸಮರ್ಜಿತ್ ಲಂಕೇಶ್ ಅಭಿನಯದ ಗೌರಿ ಚಿತ್ರದ ಪ್ರೀ ಟೀಸರ್ ಅನಾವರಣಗೊಂಡಿದೆ.

Gowri Pre Teaser
"ಗೌರಿ" ಚಿತ್ರತಂಡ

By ETV Bharat Karnataka Team

Published : Apr 24, 2024, 8:19 PM IST

ಕನ್ನಡ ಚಿತ್ರರಂಗದಲ್ಲಿ ಅದ್ಧೂರಿ ಮೇಕಿಂಗ್ ಜೊತೆಗೆ ವಿಭಿನ್ನ ಚಿತ್ರಗಳನ್ನು ನಿರ್ದೇಶಿಸಿ ಸ್ಟೈಲಿಶ್ ಡೈರೆಕ್ಟರ್ ಎಂದು ಕರೆಸಿಕೊಂಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್. ಇದೀಗ ಇಂದ್ರಜಿತ್ ಪುತ್ರ ಸಮರ್ಜಿತ್ ಲಂಕೇಶ್ 'ಗೌರಿ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿರುವುದು ನಿಮಗೆ ತಿಳಿದಿರುವ ವಿಚಾರವೇ. ಈ ಚಿತ್ರಕ್ಕೆ ಇಂದ್ರಜಿತ್ ಅವರೇ ಆ್ಯಕ್ಷನ್​ ಕಟ್​​ ಹೇಳುತ್ತಿದ್ದಾರೆ.

ಇತ್ತೀಚಿಗೆ ಗೌರಿ ಚಿತ್ರದ ಪ್ರೀ ಟೀಸರ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಸ್ಪಿನ್ ಮಾಂತ್ರಿಕ ಎಂದೇ ಖ್ಯಾತರಾಗಿರುವ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆ ಹಾಗೂ ಹೆಸರಾಂತ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಗೌರಿ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ಮಾಪಕ ರಮೇಶ್ ರೆಡ್ಡಿ, ಪತ್ರಕರ್ತ ಸದಾಶಿವ ಶೆಣೈ, ಕವಿತಾ ಲಂಕೇಶ್ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಅನಿಲ್‌ ಕುಂಬ್ಳೆ ಮಾತನಾಡಿ, ನಾನು ಹಾಗೂ ಅಜಿತ್ ಅಂದ್ರೆ ಇಂದ್ರಜಿತ್ ಹಲವು ವರ್ಷಗಳ ಗೆಳೆಯರು. ಅವರ ಮಗ ಸಮರ್ಜಿತ್ ನನ್ನ ಜೊತೆ ಜಾಹೀರಾತೊಂದರಲ್ಲಿ ಅಭಿನಿಯಿಸಿದ್ದರು. ಈಗ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾನ್ಯಾ ಅಯ್ಯರ್ ನಾಯಕಿಯಾಗಿ ನಟಿಸಿದ್ದಾರೆ. ಇಬ್ಬರು ಯುವ ಪ್ರತಿಭೆಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

"ಗೌರಿ" ಚಿತ್ರತಂಡ

ನಿರ್ದೇಶಕ ಕಮ್ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಮಾತನಾಡಿ, ಅನಿಲ್ ಕುಂಬ್ಳೆ ಜೊತೆಗಿನ ಸ್ನೇಹ ಮೂವತ್ತು ವರ್ಷಕ್ಕೂ ಮೀರಿದ್ದು. ಹಾಗೆ ಪುನೀತ್ ರಾಜಕುಮಾರ್ ಸಹ ಬಹಳ ಆತ್ಮೀಯರಾಗಿದ್ದರು. ಇಂದು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಅನಿಲ್ ಕುಂಬ್ಳೆ ಅವರು ನಮ್ಮ ಗೌರಿ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಧನ್ಯವಾದಗಳು. ನನ್ನ ಮಗ ಸಮರ್ಜಿತ್ ನಾಯಕನಾಗಲು ಬೇಕಾದ ಎಲ್ಲಾ ತಯಾರಿ ಮಾಡಿಕೊಂಡು ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದಾನೆ.‌ ಸಾನ್ಯಾ ಅವರ ಅಭಿನಯ ಕೂಡ ಉತ್ತಮವಾಗಿದೆ. 'ಗೌರಿ' ಚಿತ್ರ ಯಾವುದಕ್ಕೂ ಕಡಿಮೆ ಇಲ್ಲದೇ ಅದ್ಧೂರಿಯಾಗಿ ಮೂಡಿಬಂದಿದೆ.

ಚಿತ್ರಕ್ಕೆ ಎ.ಜೆ.ಶೆಟ್ಟಿ ಹಾಗೂ ಕೆ.ಕೆ ಛಾಯಾಗ್ರಹಣ ನಿರ್ವಹಿಸಿದ್ದಾರೆ. ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಭೇರ್ಗಿ ಹಾಗೂ ಅನಿರುದ್ಧ್ ಶಾಸ್ತ್ರಿ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮ್ಯಾಥ್ಯೂಸ್ ಮನು ರೀರೆಕಾರ್ಡಿಂಗ್ ಮಾಡಿದ್ದಾರೆ. ವಿ.ನಾಗೇಂದ್ರಪ್ರಸಾದ್, ಕವಿರಾಜ್, ಕೆ.ಕಲ್ಯಾಣ್, ವರದರಾಜ್ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಕೈಲಾಶ್ ಖೇರ್,ಚಂದನ್ ಶೆಟ್ಟಿ, ಅನಿರುದ್ಧ್ ಶಾಸ್ತ್ರಿ, ಜಾವೇದ್ ಅಲಿ, ಅನನ್ಯ ಭಟ್, ನಿಹಾಲ್ ತೌರೋ, ಅದಿತಿ ಸಾಗರ್, ಬಾಲಸುಬ್ರಹ್ಮಣ್ಯಂ ಹಾಗೂ ಪ್ರಜ್ಞಾ ಮರಾಠೆ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಗುಬ್ಬಿ, ಮಾಸ್ತಿ, ರಾಜಶೇಖರ್ ಹಾಗೂ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ. ರವಿವರ್ಮ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ. ಹೀಗೆ ನುರಿತ ತಂತ್ರಜ್ಞರ ಕಾರ್ಯವೈಖರಿ ಹಾಗೂ ಕಲಾವಿದರ ಉತ್ತಮ ಅಭಿನಯದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದು ಮಾಹಿತಿ ಹಂಚಿಕೊಂಡರು.

"ಗೌರಿ" ಚಿತ್ರತಂಡ

ಇದನ್ನೂ ಓದಿ:ಅಪ್ಪುಸ್ ಗಂಧದಗುಡಿ ಅಗರಬತ್ತಿ ಬಿಡುಗಡೆ: ಹೊಸ ಉದ್ಯಮ ಶುರುಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ - Gandhadagudi Agarbatti

ನಮ್ಮ ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿಕೊಟ್ಟ ಅನಿಲ್ ಕುಂಬ್ಳೆ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಾಯಕ ನಟ ಸಮರ್ಜಿತ್ ಲಂಕೇಶ್ ಕೇಳಿಕೊಂಡರು. ಅವಕಾಶ ಕೊಟ್ಟ ನಿರ್ಮಾಪಕ, ನಿರ್ದೇಶಕರಿಗೆ ಹಾಗೂ ಆಗಮಿಸಿ ಗಣ್ಯರಿಗೆ ನಾಯಕಿ ಸಾನ್ಯಾ ಅಯ್ಯರ್ ವಿಶೇಷವಾಗಿ ಧನ್ಯವಾದ ಅರ್ಪಿಸಿದರು.

"ಗೌರಿ" ಚಿತ್ರತಂಡ

ಇದನ್ನೂ ಓದಿ:ರಿಲೀಸ್​ಗೆ ರೆಡಿ ಗ್ರೇ ಗೇಮ್ಸ್‌: ವಿಭಿನ್ನ ಕಥಾಹಂದರದೊಂದಿಗೆ ಪ್ರೇಕ್ಷಕರೆದುರು ಬರಲಿದ್ದಾರೆ ವಿಜಯ್ ರಾಘವೇಂದ್ರ - Vijay Raghavendra

ಸಂಭಾಷಣೆ ಬರೆದಿರುವ ಮಾಸ್ತಿ, ರಾಜಶೇಖರ್, ಸಂಗೀತ ನಿರ್ದೇಶನ ಮಾಡಿರುವ ಅನಿರುದ್ಧ್ ಶಾಸ್ತ್ರಿ, ಹಿನ್ನೆಲೆ ಸಂಗೀತ ನೀಡಿರುವ ಮ್ಯಾಥ್ಯೂಸ್ ಮನು, ನಟ ನೀನಾಸಂ ಅಶ್ವಥ್ ಹಾಗೂ ಗಾಯಕರಾದ ಅದಿತಿ ಸಾಗರ್, ಬಾಲಸುಬ್ರಹ್ಮಣ್ಯಂ ಹಾಗೂ ಪ್ರಜ್ಞಾ ಮರಾಠೆ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಲಾಫಿಂಗ್ ಬುದ್ಧ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶನ ಮಾಡಿದ್ದಾರೆ. ಸದ್ಯ ಅನಾವರಣಗೊಂಡಿರುವ ಪ್ರೀ ಟೀಸರ್ 'ಗೌರಿ' ಗೆಲ್ಲುವ ಸೂಚನೆ ಕೊಟ್ಟಿದೆ.

ABOUT THE AUTHOR

...view details