ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆ, ಸದಭಿರುಚಿಯ ಸಿನಿಮಾಗಳನ್ನು ನಿರ್ಮಿಸುವ ಮೂಲಕ ಫ್ಯಾಷನೇಟ್ ಪ್ರೊಡ್ಯೂಸರ್ ಎಂಬ ಖ್ಯಾತಿಗೆ ಪಾತ್ರರಾದವರು ನಿರ್ಮಾಪಕ ರಮೇಶ್ ರೆಡ್ಡಿ. ಸದ್ಯ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಾಜ್ ಬಿ.ಶೆಟ್ಟಿ ಜೊತೆ ನಿರ್ಮಾಪಕ ರೆಡ್ಡಿ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಬಹುನಿರೀಕ್ಷಿತ ಚಿತ್ರಕ್ಕೆ '45' ಎಂಬ ವಿಭಿನ್ನ ಟೈಟಲ್ ಇಡಲಾಗಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಬ್ಯುಸಿಯಾಗಿದೆ ಚಿತ್ರತಂಡ. ಈ ಮಧ್ಯೆ ತಂಡದಿಂದ ಹೊಸ ಅಪ್ಡೇಟ್ ಸಿಕ್ಕಿದೆ.
ಈಗಾಗಲೇ '45' ಚಿತ್ರತಂಡ ಶಿವರಾಜ್ಕುಮಾರ್ ಹಾಗೂ ಉಪೇಂದ್ರ ಅವರ ಫಸ್ಟ್ ಲುಕ್ಗಳನ್ನು ಅನಾವರಣಗೊಳಿಸುವ ಮೂಲಕ ಇಬ್ಬರು ಸ್ಟಾರ್ ನಟರ ಅಭಿಮಾನಿ ಬಳಗದಲ್ಲಿ ಕುತೂಹಲ ಹುಟ್ಟಿಸಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಚಿತ್ರಕ್ಕೆ ಹಾಲಿವುಡ್ನ 150ಕ್ಕೂ ಅಧಿಕ ಚಿತ್ರಗಳಿಗೆ ಗ್ರಾಫಿಕ್ಸ್ ಕೆಲಸ ಮಾಡಿ, ಆಸ್ಕರ್ಗೆ ನಾಮಿನೇಟ್ ಆಗಿದ್ದ ಟೊರೊಂಟೋದ 'MARZ' ವಿ ಎಫ್ ಎಕ್ಸ್ ಕಂಪನಿ ಗ್ರಾಫಿಕ್ಸ್ ಕೆಲಸ ಮಾಡುತ್ತಿದೆ.
ಈ ಖ್ಯಾತ ಕಂಪನಿ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ ಕನ್ನಡದ ಮೊದಲ ಚಿತ್ರ '45'. 'MARZ' ಸಂಸ್ಥೆಯ ತಂತ್ರಜ್ಞರಾದ ಮಿಸ್ಟರ್ ರಾಫೆಲ್ ಹಾಗೂ ಮಿಸ್ಟರ್ ಜಸ್ಟಿನ್ ಅವರ ನೇತೃತ್ವದಲ್ಲಿ ಗ್ರಾಫಿಕ್ಸ್ ಕಾರ್ಯ ನಡೆಯುತ್ತಿದೆ. ಇತ್ತೀಚಿಗೆ '45' ಚಿತ್ರದ ಗ್ರಾಫಿಕ್ಸ್ ಕೆಲಸದ ನಿಮಿತ್ತವಾಗಿ 'MARZ' ವಿ ಎಫ್ ಎಕ್ಸ್ ಕಂಪನಿಗೆ ಭೇಟಿ ನೀಡಿದ ಚಿತ್ರಗಳನ್ನು ನಿರ್ದೇಶಕ ಅರ್ಜುನ್ ಜನ್ಯ ಹಂಚಿಕೊಂಡಿದ್ದಾರೆ.