ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ 'ಕಲ್ಕಿ 2898 ಎಡಿ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ತೆರೆಕಂಡ ಕೇವಲ ಮೂರೇ ದಿನಗಳಲ್ಲಿ ವಿಶ್ವದಾದ್ಯಂತ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ಫ್ಯಾನ್ಸ್ ತಮ್ಮ ಮೆಚ್ಚಿನ ನಟರ ಸಿನಿಮಾ ಸಾಧನೆಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.
ನಾಗ್ ಅಶ್ವಿನ್ ನಿರ್ದೇಶನದ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಬಹುಬೇಡಿಕೆ ಕಲಾವಿದರು ಬಣ್ಣ ಹಚ್ಚಿದ್ದಾರೆ. ದಕ್ಷಿಣ ಚಿತ್ರರಂಗದ ಪ್ರಸಿದ್ಧ ಚಲನಚಿತ್ರ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ಬರೋಬ್ಬರಿ 600 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಿದೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾ ಜಾಗತಿಕವಾಗಿ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದ್ದು, ಒಟಿಟಿ ರೈಟ್ಸ್ ಕೂಡ ದೊಡ್ಡ ಮಟ್ಟಕ್ಕೆ ಸೇಲ್ ಆಗಿದೆ. ಹಾಗಾಗಿ ಸಿನಿಮಾಗೆ ಹಾಕಿದ ಬಂಡವಾಳ ಬಹುತೇಕ ವಾಪಸ್ ಬಂದಂತಾಗಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಜೊತೆ ಬಾಲಿವುಡ್ ಸೂಪರ್ ಸ್ಟಾರ್ಗಳಾದ ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಮತ್ತು ಸೌತ್ ಸೂಪರ್ ಸ್ಟಾರ್ ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿದ್ದಾರೆ. ವಿಜಯ್ ದೇವರಕೊಂಡ, ಮೃಣಾಲ್ ಠಾಕೂರ್, ದುಲ್ಕರ್ ಸಲ್ಮಾನ್, ಫರಿಯಾ ಅಬ್ದುಲ್ಲಾ ಅತಿಥಿ ಪಾತ್ರಗಳಲ್ಲಿದ್ದರೆ, ದಿಶಾ ಪಟಾನಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ:ಮೂರೇ ದಿನದಲ್ಲಿ ಭಾರತದಲ್ಲಿ ₹200 ಕೋಟಿ ಗಳಿಸಿದ 'ಕಲ್ಕಿ 2898 ಎಡಿ' - Kalki Movie Collection
ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಕೇವಲ ಮೂರು ದಿನಗಳಲ್ಲಿ 220 ಕೋಟಿ ರೂ. ಗಳಿಸಿರುವ ಈ ಮೈಥೋಲಾಜಿಕಲ್ ಸೈನ್ಸ್ ಫಿಕ್ಷನ್ ಥ್ರಿಲ್ಲರ್ ವಿಶ್ವದಾದ್ಯಂತ 415 ಕೋಟಿ ರೂ. ಕಲೆಕ್ಷನ್ ಮಾಡುವಲ್ಲಿ ಯಶಸ್ವಿಯಾಗಿದೆ. ವೈಜಯಂತಿ ಮೂವೀಸ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ಚಿತ್ರದ ಒಟ್ಟು ಗಳಿಕೆಯನ್ನು ಬಹಿರಂಗಪಡಿಸಿದೆ. ಪ್ರಪಂಚದಾದ್ಯಂತದ ಒಟ್ಟು ಕಲೆಕ್ಷನ್ ಅಂಕಿ-ಅಂಶವನ್ನು ಹಂಚಿಕೊಂಡ ಚಿತ್ರ ತಯಾರಕರು "ದಿ ಫೋರ್ಸ್ ಈಸ್ ಅನ್ಸ್ಟಾಪಬಲ್" ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ವಿಶ್ವ ಚಾಂಪಿಯನ್ನರಿಗೆ ಯಶ್, ಸುದೀಪ್, ರಶ್ಮಿಕಾ ಸೇರಿ ಕನ್ನಡ ತಾರೆಯರಿಂದ ಅಭಿನಂದನೆ - Sandalwood Stars Reactions
ಕಲ್ಕಿ 2898 ಎಡಿ, ಹಿಂದೂ ಮಹಾಕಾವ್ಯ ಮಹಾಭಾರತದ ವಿಚಾರಗಳನ್ನು ಒಳಗೊಂಡ ವೈಜ್ಞಾನಿಕ ಕಾಲ್ಪನಿಕ ಕಥೆ. ವಿಶ್ವದಾದ್ಯಂತ ಜೂನ್ 27ರಂದು ಆರು ಭಾಷೆಗಳಲ್ಲಿ - ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲಿಷ್ನಲ್ಲಿ ತೆರೆಕಂಡು ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ವೈಜಯಂತಿ ಮೂವೀಸ್‌ನ ಬಿಗ್ ಬಜೆಟ್ ಸಿನಿಮಾ ಮೊದಲ ದಿನವೇ ಜಗತ್ತಿನಾದ್ಯಂತ 191.5 ಕೋಟಿ ರೂ. ಕಲೆಕ್ಷನ್ ಮಾಡಿದೆ. ನಂತರ, ಶುಕ್ರವಾರದಂದು 107 ಕೋಟಿ ರೂ. ಮತ್ತು ಶನಿವಾರದಂದು 152.5 ಕೋಟಿ ರೂಪಾಯಿಗಳನ್ನು ಕಲೆಕ್ಷನ್ ಮಾಡಿರುವ 'ಕಲ್ಕಿ 2898 ಎಡಿ'ಯ ಇಂದಿನ ಅಂದರೆ ಭಾನುವಾರದ ಕಲೆಕ್ಷನ್ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.