ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ. ದತ್ತರಾಜ್ ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ನಿರ್ದೇಶಕರಿಗೆ 87 ವರ್ಷ ವಯಸ್ಸಾಗಿತ್ತು.
ಚಿ.ದತ್ತರಾಜ್ ಅವರು ಖ್ಯಾತ ಸಾಹಿತಿ ದಿ.ಚಿ. ಉದಯಶಂಕರ್ ಅವರ ಸಹೋದರ. ನಟಸಾರ್ವಭೌಮ ಡಾ. ರಾಜ್ಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜ್ಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಜೊತೆಗೆ ಹಿರಿಯ ನಟಿ ಮಂಜುಳ ನಟನೆಯ ರುದ್ರಿ ಸೇರಿದಂತೆ ಮೊದಲಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು. ಮಧ್ಯಾಹ್ನ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಒಂದೆಡೆ ಸೇರಿದ್ದಾರೆ.