ಭಾರತೀಯ ಚಿತ್ರರಂಗದ ಎರಡು ಬಹುನಿರೀಕ್ಷಿತ ಸಿನಿಮಾಗಳು ಶುಕ್ರವಾರ ತೆರೆಕಂಡಿವೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಉಣಬಡಿಸುತ್ತಿವೆ. ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ಅಭಿನಯದ 'ತೇರಿ ಬಾತೋ ಮೇ ಐಸಾ ಉಲ್ಜಾ ಜಿಯಾ', ಸೌತ್ ಫಿಲ್ಮ್ ಇಂಡಸ್ಟ್ರಿಯ ಸೂಪರ್ ಸ್ಟಾರ್ ರಜನಿಕಾಂತ್, ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಅಭಿನಯದ ಲಾಲ್ ಸಲಾಂ ಚಿತ್ರಗಳು ಚಿತ್ರಮಂದಿರ ಪ್ರವೇಶಿಸಿ, ಭರ್ಜರಿ ಎಂಟರ್ಟೈನ್ಮೆಂಟ್ ನೀಡುತ್ತಿವೆ.
'ಲಾಲ್ ಸಲಾಂ' ಚಿತ್ರವನ್ನು ನಿರ್ದೇಶಿಸಿದ್ದು ಬೇರೆ ಯಾರೂ ಅಲ್ಲ, ತಲೈವಾ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್. ಥಿಯೇಟರ್‌ನಲ್ಲಿ ಬಿಡುಗಡೆ ಆಗಿರೋ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಅಪಾರ ಪ್ರೀತಿ ವ್ಯಕ್ತವಾಗಿದೆ. ಲಾಲ್ ಸಲಾಂ ಒಂದು ಸ್ಪೋರ್ಟ್ಸ್ ಡ್ರಾಮಾ ಆಗಿದ್ದು, ಬಾಕ್ಸ್ ಆಫೀಸ್ ಪ್ರಯಾಣ ಉತ್ತಮವಾಗಿ ಆರಂಭಗೊಂಡಿದೆ.
ಲಾಲ್ ಸಲಾಂ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಮುಖ್ಯಭೂಮಿಕೆಯ ಚಿತ್ರವಾಗಿದ್ದು, ಇದರಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ವಿಸ್ತೃತ ಅತಿಥಿ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದಲ್ಲಿ ರಜನಿಕಾಂತ್ ಅವರು ಮೊಯ್ದೀನ್ ಭಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಮೊದಲ ದಿನ 4.30 ಕೋಟಿ ರೂ. ಗಳಿಸುವಲ್ಲಿ ಸಿನಿಮಾ ಯಶಸ್ವಿ ಆಗಿದೆ. ವಾರಾಂತ್ಯದಲ್ಲಿ ಚಿತ್ರದ ವ್ಯವಹಾರ ಇನ್ನೂ ಉತ್ತಮವಾಗಿರಲಿದೆ ಎಂದು ಅಂದಾಜಿಸಲಾಗಿದೆ. ತಮಿಳುನಾಡಿನ ಚಲನಚಿತ್ರ ಮಂದಿರಗಳಲ್ಲಿ ಶೇ. 30.35 ರಷ್ಟು ಆಕ್ಯುಪೆನ್ಸಿ ಇತ್ತು.