ಕರ್ನಾಟಕ

karnataka

ETV Bharat / entertainment

'ಹಿರಣ್ಯ': ತಾಯಿ ಪ್ರೀತಿ ಸಾರುವ ಹಾಡಿನಲ್ಲಿ ರಾಜವರ್ಧನ್ - Hiranya - HIRANYA

'ಹಿರಣ್ಯ' ಚಿತ್ರದ 'ನನಗಂತಾನೆ' ಹಾಡು ಅನಾವರಣಗೊಂಡಿದೆ.

Rajavardhan
ರಾಜವರ್ಧನ್ (ETV Bharat)

By ETV Bharat Karnataka Team

Published : Jun 29, 2024, 2:29 PM IST

'ಬಿಚ್ಚುಗತ್ತಿ' ಚಿತ್ರದ ಮೂಲಕ ಭರವಸೆ ಹುಟ್ಟಿಸಿರೋ ನಟ ರಾಜವರ್ಧನ್‌. ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಈಗ 'ಹಿರಣ್ಯ' ಸಿನಿಮಾ ಮಾಡುತ್ತಿರೋದು ನಿಮಗೆ ಗೊತ್ತೇ ಇದೆ. ಇತ್ತೀಚೆಗೆ ಹಿರಣ್ಯಟೀಸರ್ ಮೂಲಕ ಭರವಸೆ ಹುಟ್ಟಿಸಿದ್ರು. ಇದೀಗ ತಾಯಿ ಪ್ರೀತಿ ವಿವರಿಸುವ ಹಿರಣ್ಯನ ಹೃದಯಸ್ಪರ್ಶಿ ಹಾಡು ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುಪ್ರಿಯಾ ರಾಮ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡಿದ್ದಾರೆ.

ನಾಯಕನಾಗಿ ಅಭಿನಯಿಸಿರುವ ರಾಜವರ್ಧನ್ ಗೆ ಜೋಡಿಯಾಗಿ ರಿಹಾನಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಹಿರಣ್ಯ ಚಿತ್ರವನ್ನು ಪ್ರವೀಣ್ ಅವ್ಯುಕ್ತ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ವೇದಾಸ್ ಇನ್ಫಿನಿಟಿ ಪಿಚ್ಚರ್ ಬ್ಯಾನರ್​ ಅಡಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ:ಯೂಟ್ಯೂಬ್​ನಲ್ಲಿ ಟ್ರೆಂಡಿಂಗ್​​​ನಲ್ಲಿದೆ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಚಿನ್ನಮ್ಮ ಹಾಡು‌ - Krishnam Pranaya Sakhi

ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತವಾಗಿರುವ ಹಿರಣ್ಯ ಸಿನಿಮಾವನ್ನು ಜುಲೈ 19ಕ್ಕೆ ಸಿನಿಮಾ ತೆರೆಗೆ ಬರಲಿದೆ.

ಇದನ್ನೂ ಓದಿ:ಹೀನಾ ಖಾನ್​ಗೆ ಸ್ತನ ಕ್ಯಾನ್ಸರ್: ಬ್ರೆಸ್ಟ್​​ ಕ್ಯಾನ್ಸರ್​ ವಿರುದ್ಧ ಹೋರಾಡಿದ ನಟಿಮಣಿಯರಿವರು - Breast Cancer

ABOUT THE AUTHOR

...view details