ಕರ್ನಾಟಕ

karnataka

ETV Bharat / entertainment

25 ದಿನ ಪೂರೈಸಿದ ಸಂಭ್ರಮದಲ್ಲಿ 'ಫಾರ್ ರಿಜಿಸ್ಟ್ರೇಷನ್' ಸಿನಿಮಾ ತಂಡ - For Registration Movie - FOR REGISTRATION MOVIE

ನವೀನ್​ ದ್ವಾರಕನಾಥ್​ ಮೊದಲ ಬಾರಿಗೆ ಆ್ಯಕ್ಷನ್​ ಕಟ್​ ಹೇಳಿರುವ ಫಾರ್​ ರಿಜಿಸ್ಟ್ರೇಷನ್​ ಸಿನಿಮಾ 25 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ.

For registration Film Poster
ಫಾರ್ ರಿಜಿಸ್ಟ್ರೇಷನ್ ಸಿನಿಮಾ ಪೋಸ್ಟರ್​

By ETV Bharat Karnataka Team

Published : Apr 5, 2024, 7:05 PM IST

ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂಬುದು ವಾರ, ತಿಂಗಳ ಸುತ್ತ ಬಂಧಿಯಾಗಿರುವ ಕಾಲಮಾನ. ಸಿನಿಮಾವೊಂದು ಯಶಸ್ವಿಯಾಗಿ 25 ದಿನಗಳನ್ನು ಪೂರೈಸುವುದೇ ಕನಸಿನ ಮಾತಾಗುತ್ತಿದೆ. ಇಂತಹ ವಾತಾವರಣದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನಗಳ ಸಂಭ್ರಮಾಚರಣೆಗೆ ಮಾಡಿಕೊಳ್ಳುತ್ತಿದೆ.

ಪೃಥ್ವಿ ಅಂಬರ್ ಹಾಗೂ ಮಿಲನಾ ನಾಗರಾಜ್ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಚಿತ್ರತಂಡ ಇತ್ತೀಚೆಗೆ ಈ ಸಂಭ್ರಮವನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಹಮ್ಮಿಕೊಂಡಿತ್ತು. ಸಿನಿಮಾ ಯಶಸ್ಸಿಗೆ ಕಾರಣರಾದ ಇಡೀ ಚಿತ್ರತಂಡಕ್ಕೆ ನೆನಪಿನ ಕಾಣಿಕೆ ನೀಡಿ ಗೌರವ ಸಲ್ಲಿಸಲಾಯಿತು.

ಫಾರ್ ರಿಜಿಸ್ಟ್ರೇಷನ್ ಚಿತ್ರತಂಡ

ನಿರ್ದೇಶಕ ನವೀನ್ ದ್ವಾರಕನಾಥ್ ಮಾತನಾಡಿ, "ನನ್ನ ಮೊದಲ ಕನಸಿಗೆ ನವೀನ್ ರಾವ್​ ಜತೆಯಾದರು. ನಾವು ಏನೇ ಕಥೆ ಬರೆದರೂ ಕಥೆಗೆ ರೂಪ ಕೊಡುವುದು ಪಾತ್ರಧಾರಿಗಳು. ಅದರಂತೆ ಇಡೀ ತಂಡ ನಮ್ಮ ಪಯಣಕ್ಕೆ ಜತೆಯಾಗಿ ನಿಂತಿದೆ. ನಮ್ಮ ಕನಸು ಇಂದು ನನಸಾಗಿದೆ. ಸಿನಿಮಾ ಮಾಡುವುದು ಮುಖ್ಯವಲ್ಲ. ರಿಲೀಸ್ ಮಾಡುವುದು ಎಷ್ಟು ಮುಖ್ಯ ಎನ್ನುವುದು ಅರ್ಥ ಆಗಿದೆ. ಜೂನ್‌ನಲ್ಲಿ ಸಿನಿಮಾ ತೆಲುಗಿಗೆ ಡಬ್ ಆಗಲಿದೆ. 25 ದಿನಗಳ ಸೆಲೆಬ್ರೇಶನ್​ ಮಾಡುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಈಗ ಖುಷಿಯಾಗುತ್ತಿದೆ" ಎಂದು ಸಂತಸ ಹಂಚಿಕೊಂಡರು.

ಬಳಿಕ ನಟ ಪೃಥ್ವಿ ಅಂಬರ್ ಮಾತನಾಡಿ, "ಸಿನಿಮಾದ ಗೆಲುವು ತುಂಬಾ ಖುಷಿ ತಂದಿದೆ. ಇದೊಂದು ದೊಡ್ಡ ಜರ್ನಿ. ನಿರ್ದೇಶಕರು ಹಾಗೂ ನಿರ್ಮಾಪಕರು ಇಬ್ಬರು ಫ್ಯಾಷನೇಟೇಡ್. ಇಬ್ಬರು ಇದೇ ರೀತಿ ಮುಂದೆ ಸಾಗಲಿ. ನಿಮ್ಮ ಮುಂದಿನ ಸಿನಿಮಾ 100 ದಿನದ ಸಂಭ್ರಮವನ್ನು ಆಚರಣೆ ಮಾಡುವಂತೆ ಆಗಲಿದೆ" ಎಂದು ಹಾರೈಸಿದರು.

ಸಂಬಂಧ ಹಾಗೂ ಭಾವನಾತ್ಮಕ ಎಳೆಯನ್ನು ಒಳಗೊಂಡು ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ ನವೀನ್ ದ್ವಾರಕನಾಥ್ ಆ್ಯಕ್ಷನ್ ಕಟ್ ಹೇಳಿದ್ದರು. ಮೊದಲ ಸಿನಿಮಾದಲ್ಲಿಯೇ ಒಂದೊಳ್ಳೆ ಕಥೆ ಮೂಲಕ ನವೀನ್ ಗೆದ್ದಿದ್ದಾರೆ. ನವೀನ್ ಕನಸಿಗೆ ಅವರ ಗೆಳೆಯ ನವೀನ್ ರಾವ್ ಸಾಥ್ ಕೊಟ್ಟಿದ್ದರು. ಫಾರ್ ರಿಜಿಸ್ಟ್ರೇಷನ್ ಚಿತ್ರಕ್ಕೆ ನವೀನ್ ರಾವ್ ಹಣ ಹಾಕುವ ಮೂಲಕ ಗೆಳೆಯನ ಚೊಚ್ಚಲ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತಿದ್ದರು.

ಫಾರ್ ರಿಜಿಸ್ಟ್ರೇಷನ್ 25 ದಿನದ ಸಂಭ್ರಮ

ಬಳಿಕ ಮಾತನಾಡಿದ ನಿರ್ಮಾಪಕ ನವೀನ್ ರಾವ್, "ಪ್ರಾರಂಭದ ದಿನದಲ್ಲೇ ಬಹುತೇಕ ಕಡೆ ನಮ್ಮ ಚಿತ್ರ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಪರಭಾಷಾ ಸಿನಿಮಾಗಳ ಅಬ್ಬರದ ನಡುವೆ ಫಾರ್ ರಿಜಿಸ್ಟ್ರೇಷನ್ ಸಿನಿಮಾ 25 ದಿನಗಳನ್ನು ಪೂರೈಸಿದೆ. ನಮ್ಮ ಮೊದಲ ಸಿನಿಮಾಗೆ ಎಲ್ಲೆಡೆಯಿಂದ ಬೆಂಬಲ ಸಿಕ್ಕಿದೆ. ಚಿತ್ರ ಗೆದ್ದಿರುವುದು ಖುಷಿ ಕೊಟ್ಟಿದೆ" ಎಂದರು.

ಥಿಯೇಟರ್​ನಲ್ಲಿ ಅದ್ಭುತ ಪ್ರದರ್ಶನ ಕಂಡಿರುವ ಫಾರ್ ರಿಜಿಸ್ಟ್ರೇಷನ್ ಸಿನಿಮಾದ ಡಿಜಿಟಲ್ ಹಾಗೂ ಸ್ಯಾಟಲೈಟ್ ಹಕ್ಕು ಖರೀದಿ ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ಎಲ್ಲವೂ ಫೈನಲ್ ಆಗಲಿದೆ. ಮೊದಲ ಪ್ರಯತ್ನದಲ್ಲಿಯೇ ಗೆದ್ದಿರುವ ನಿರ್ದೇಶಕ ನವೀನ್ ದ್ವಾರಕನಾಥ್ ಅವರು ಈಗಾಗಲೇ ಮೂರು ಕಥೆಗಳನ್ನು ರೆಡಿ ಮಾಡಿದ್ದು, ಒಂದಷ್ಟು ನಿರ್ಮಾಪಕರು ಅಪ್ರೋಚ್ ಆಗಿದ್ದಾರೆ ಎನ್ನುವ ಮಾಹಿತಿ ಇದೆ.

ರವಿಶಂಕರ್, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್ ಭಟ್, ಉಮೇಶ್ ತಾರಾಬಗಳಗದಲ್ಲಿದ್ದಾರೆ. ನಿರ್ದೇಶನದ ಜೊತೆಗೆ ಚಿತ್ರಕಥೆಯನ್ನೂ ನವೀನ್ ದ್ವಾರಕನಾಥ್ ಅವರೇ ಬರೆದಿದ್ದಾರೆ. ಸಂಗೀತ ಸಂಯೋಜನೆ ಆರ್.ಕೆ. ಹರೀಶ್, ಅಭಿಲಾಷ್ ಕಲಾತಿ, ಅಭಿಷೇಕ್ ಜಿ. ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ:'ಬಡವ್ರ ಮಕ್ಳೂ ಬೆಳೀಬೇಕು ಕಣ್ರಯ್ಯಾ': ಡಾಲಿ ಡೈಲಾಗ್ ಈಗ ಸಿನಿಮಾ ಟೈಟಲ್ - Dali Dhananjay Dialogue

ABOUT THE AUTHOR

...view details