'ಅರಿವು' ಸಿನಿಮಾ ಮೂಲಕ ಸ್ಯಾಂಡಲ್ವುಡ್ನಲ್ಲಿ ನಟ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡವರು ಮಹೇಂದ್ರ. ಮೂಲತಃ ರಾಜಸ್ಥಾನದವರಾದ ಮಹೇಂದ್ರ ಮನ್ನೋತ್ ಅವರು ಗೋಪ್ರೇಮಿ ಕೂಡ. ಆಗಾಗ್ಗೆ ಗೋವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮಹೇಂದ್ರ ಅವರೀಗ ಗೋ ಶಾಲೆಗಳಿಗೆ ಧನಸಹಾಯ ಮಾಡಿ ಗಮನ ಸೆಳೆದಿದ್ದಾರೆ. ತಾಯಿಯ ಋಣ ತೀರಿಸಲು ಅಸಾಧ್ಯ. ಆದರೆ, ತಾಯಿಯಂತೆ ನಮ್ಮನ್ನು ಪೋಷಿಸುವ ಗೋಮಾತೆಯ ಋಣವನ್ನು ತೀರಿಸಲು ಮುಂದಾಗಿದ್ದಾರೆ.
ಗೋಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ (ETV Bharat) ಗೋವು ಪ್ರೇಮಿಯಾಗಿರೋ ಮಹೇಂದ್ರ ಮನ್ನೋತ್, ತಮ್ಮ ವ್ಯವಹಾರದಲ್ಲಿ ಸಂಗ್ರಹಿಸಿದ ಬಹುಪಾಲು ಹಣವನ್ನು ಗೋವುಗಳ ರಕ್ಷಣೆಗೆ, ಪಾಲನೆಗಾಗಿ ಖರ್ಚು ಮಾಡುತ್ತಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದ ಪ್ರತೀ ವರ್ಷ ಗೋಶಾಲೆಗಳಿಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡುತ್ತಾ ಬಂದಿದ್ದಾರೆ. ಈ ವರ್ಷ ನಾಡಿನ ವಿವಿಧ ಗೋಶಾಲೆಗಳಿಗೆ 51 ಲಕ್ಷ ರೂಪಾಯಿಗಳನ್ನು ದಾನ ಮಾಡಿದ್ದಾರೆ. ಗೋಶಾಲೆಗಳ ಅಗತ್ಯತೆಗಳಿಗೆ ತಕ್ಕಂತೆ ಹಣವನ್ನು ಒದಗಿಸಲಾಗಿದೆ.
ಗೋ ಶಾಲೆಗಳಿಗೆ ಮಹೇಂದ್ರ ಮುನ್ನೋತ್ ಧನ ಸಹಾಯ (ETV Bharat) ಇದರ ಹಿಂದಿನ ಕುತೂಹಲಕಾರಿ ಅಂಶ ಎಂದರೆ ನಾಡಿನಲ್ಲಿ ಅಕ್ರಮವಾಗಿ ಸಾಗಿಸಲ್ಪಡುವ ಗೋವುಗಳನ್ನು ಕಾನೂನಾತ್ಮಕವಾಗಿ ರಕ್ಷಿಸಿದ ನಂತರ ಆ ಗೋವುಗಳನ್ನು ಈ ಗೋಶಾಲೆಗಳಿಗೆ ತಂದು ಬಿಡಲಾಗುತ್ತದೆ. ಅಂತಹ ಗೋವುಗಳನ್ನು ಪೋಷಿಸಲು ಗೋಶಾಲೆಗಳಿಗೆ ಆರ್ಥಿಕ ಶಕ್ತಿ ಬೇಕಲ್ಲವೇ ? ಅಂಥ ಶಕ್ತಿಯನ್ನು ತುಂಬುವ ಕೆಲಸವನ್ನು ಮಹೇಂದ್ರ ಮುನ್ನೋತ್ ಅವರು ತಮ್ಮ ಮಾತಾಪಿತೃಗಳ ಪುಣ್ಯಸ್ಮರಣೆಯ ಹೆಸರಿನಲ್ಲಿ ಈ ಸೇವೆಯನ್ನು ಮಾಡಿಕೊಂಡು ಬಂದಿದೆ.
ಗೋಶಾಲೆಯಲ್ಲಿ ನಿರ್ಮಾಪಕ ಮಹೇಂದ್ರ ಮುನ್ನೋತ್ ಸೇರಿ ಹಲವರು (ETV Bharat) ಇದನ್ನೂ ಓದಿ:ವಿಜಯ್ ದೇವರಕೊಂಡ ಸಮಾಜಸೇವೆಗೆ ಮಂಗಳಮುಖಿ ಸೇರಿ ಹಲವರಿಂದ ಗುಣಗಾನ: ವಿಡಿಯೋ - Vijay Devarakonda Social Service
ಇತ್ತೀಚೆಗೆ ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ 20ಕ್ಕೂ ಹೆಚ್ಚು ಗೋಶಾಲೆಯ ಮುಖ್ಯಸ್ಥರನ್ನು ಆಹ್ವಾನಿಸಿ ಅವರಿಗೆ ಚೆಕ್ ರೂಪದಲ್ಲಿ ಹಣವನ್ನು ನೀಡಲಾಗಿದೆ. ಇವರೊಂದಿಗೆ ಮಹೇಂದ್ರ ಅವರ ಧರ್ಮಪತ್ನಿ ಸುರಕ್ಷಾ, ಅಲ್ಲದೇ ಇಡೀ ಕುಟುಂಬ ಹಾಜರಿದ್ದು ವೃಕ್ಷಾರೋಹಣ ಹೆಸರಿನಲ್ಲಿ ಗೋಶಾಲೆಯಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡುವುದರೊಂದಿಗೆ ಗೋಪೂಜೆಯನ್ನೂ ಹಮ್ಮಿಕೊಳ್ಳಲಾಗಿತ್ತು.
ಗೋಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ (ETV Bharat) ಇದನ್ನೂ ಓದಿ:'ಅಪ್ಪಾಜಿ ಈ ರೀತಿಯ ಪಾತ್ರಗಳನ್ನು ಮಾಡುತ್ತಿದ್ದರು': ಭೈರವನ ಕೊನೆ ಪಾಠದ ಬಗ್ಗೆ ಶಿವಣ್ಣ ಹೀಗಂದ್ರು - Bhairavana Kone PaaTa
ಈ ಕಾರ್ಯವನ್ನು ಉದ್ದೇಶಿಸಿ ಮಾತನಾಡಿದ ಮಹೇಂದ್ರ ಮನ್ನೋತ್, ನಮ್ಮ ತಂದೆತಾಯಿಯ ಋಣವನ್ನು ನಾವುಗಳು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಅಲ್ಲದೇ ಗೋವು ಎಂಬುದು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು. ಅಂತಹ ಗೋವನ್ನು ಉಳಿಸಿದರೆ ಗ್ರಾಮ ಮಾತ್ರವಲ್ಲ ಇಡೀ ದೇಶ ಸಂವೃದ್ಧಿ ಸಂಪದ್ಭರಿತ ಭೂಮಿಯಾಗುತ್ತದೆ. ಈ ನಂಬಿಕೆಯನ್ನು ಪ್ರತಿಯೊಬ್ಬ ಭಾರತೀಯನೂ ಅರ್ಥೈಸಿಕೊಳ್ಳಬೇಕಿದೆ ಅಂತಾ ಮಹೇಂದ್ರ ಮನ್ನೋತ್ ಹೇಳಿದರು.