ಸ್ಯಾಂಡಲ್ವುಡ್ನ ಪ್ರಸಿದ್ಧ ಚಲನಚಿತ್ರ ನಿರ್ಮಾಣ ಸಂಸ್ಥೆ ಪರಂವಃ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿರುವ ಬಹುನಿರೀಕ್ಷಿತ ಚಿತ್ರ 'ಇಬ್ಬನಿ ತಬ್ಬಿದ ಇಳೆಯಲಿ'. ಸೆಪ್ಟೆಂಬರ್ 5ಕ್ಕೆ ಚಿತ್ರಮಂದಿರ ಪ್ರವೇಶಿಸಲಿರುವ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ.
ಸಿಂಪಲ್ ಸ್ಟಾರ್ ಖ್ಯಾತಿಯ ರಕ್ಷಿತ್ ಶೆಟ್ಟಿ ಮಾಲೀಕತ್ವದ ಪರಂವಃ ಸ್ಟುಡಿಯೋಸ್ ಕಂಟೆಂಟ್ ಆಧರಿತ ಮತ್ತು ಹೊಸ ಪ್ರತಿಭಾನ್ವಿತರ ಸಿನಿಮಾಗಳನ್ನು ನಿರ್ಮಿಸುವ ಮೂಲಕ ಹೆಸರುವಾಸಿಯಾಗಿದೆ. ಈ ಸಂಸ್ಥೆಯಿಂದ ಬಂದ ಬಹುತೇಕ ಚಿತ್ರಗಳು ಜನಮನ ಸೆಳೆಯುವಲ್ಲಿ ಯಶಸ್ಸು ಕಂಡಿವೆ. ಅದರಂತೆ ಹೊಸದಾಗಿ ನಿರ್ಮಾಣಗೊಂಡಿರುವ ಚಿತ್ರ ಇಬ್ಬನಿ ತಬ್ಬಿದ ಇಳೆಯಲಿ. ಒಂದೊಳ್ಳೆ ಕಂಟೆಂಟ್ನ ಟ್ರೇಲರ್ ಇಂದು ಬಿಡುಗಡೆ ಆಗಿದ್ದು, ಸಿನಿಮಾ ನೋಡುವ ಕುತೂಹಲವನ್ನು ಪ್ರೇಕ್ಷಕರು ವ್ಯಕ್ತಪಡಿಸುತ್ತಿದ್ದಾರೆ.
ಚಂದ್ರಜಿತ್ ಬೆಳ್ಳಿಯಪ್ಪ ಆ್ಯಕ್ಷನ್ ಕಟ್ ಹೇಳಿರುವ ಈ ಸುಂದರ ಶೀರ್ಷಿಕೆಯ ಸಿನಿಮಾದಲ್ಲಿ ವಿಹಾನ್ ಹಾಗೂ ಅಂಕಿತಾ ಅಮರ್ ತೆರೆ ಹಂಚಿಕೊಂಡಿದ್ದಾರೆ. ನಟಿ ಮಯೂರಿ ನಟರಾಜ್ ಕೂಡಾ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಜಿ.ಎಸ್.ಗುಪ್ತ ಮತ್ತು ರಕ್ಷಿತ್ ಶೆಟ್ಟಿ ಚಿತ್ರ ನಿರ್ಮಾಣ ಮಾಡಿದ್ದಾರೆ.