ಕರ್ನಾಟಕ

karnataka

ETV Bharat / entertainment

ಅತ್ಯಾಚಾರ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆಹೋದ ನಟ ಸಿದ್ದಿಕ್ - Actor Siddique Case - ACTOR SIDDIQUE CASE

ನಟಿಯೋರ್ವರು ತಮ್ಮ ವಿರುದ್ಧ ದಾಖಲಿಸಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳನ್ನು ತಿರಸ್ಕರಿಸಿರುವ ನಟ ಇದೊಂದು ಪಿತೂರಿ ಎಂದು ತಿಳಿಸಿದ್ದಾರೆ.

Actor Siddique
ನಟ ಸಿದ್ದಿಕ್ (ANI)

By ETV Bharat Karnataka Team

Published : Sep 2, 2024, 6:36 PM IST

ಹೈದರಾಬಾದ್: ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ಮಲಯಾಳಂ ಚಿತ್ರರಂಗದಲ್ಲಿ ಆಕ್ರೋಶದ ಕಿಚ್ಚು ಹೊತ್ತಿಸಿದೆ. ಈ ಬಗ್ಗೆ ಚರ್ಚೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ. ಇದೀಗ ನಟಿಯೋರ್ವರು ತಮ್ಮ ವಿರುದ್ಧ ದಾಖಲಿಸಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ತಿರುವನಂತಪುರಂ ಮ್ಯೂಸಿಯಂ ಪೊಲೀಸ್​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್​​ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ. 2016ರ ಜನವರಿಯಲ್ಲಿ ತಿರುವನಂತಪುರಂನ ಹೋಟೆಲ್‌ನಲ್ಲಿ ನಟ ಸಿದ್ದಿಕ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿಯೋರ್ವರು ಆರೋಪಿಸಿದ್ದರು.

ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಸಿದ್ದಿಕ್ ತಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆರೋಪಗಳು ಆಧಾರರಹಿತವೆಂದು ತಿಳಿಸಿದ್ದಾರೆ. ಜೊತೆಗೆ ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ನಡೆಯುತ್ತಿರುವ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ದಿಕ್ ಸಿದ್ಧರಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರರಂಗದಲ್ಲಿ ಬಿರುಗಾಳಿಯೆಬ್ಬಿಸಿದೆ. ಸಿನಿಕ್ಷೇತ್ರದ ಹೆಸರಾಂತರ ವಿರುದ್ಧ ನಟಿಮಣಿಯರು ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಇದರ ಬೆನ್ನಲ್ಲೇ ಮಲಯಾಳಂ ಚಲನಚಿತ್ರ ಕಲಾವಿದರ ಅಸೋಸಿಯೇಶನ್‌ನ (ಅಮ್ಮ) ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರು. ಅಮ್ಮ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಟ ಸಿದ್ದಿಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನಟ ಸಿದ್ದಿಕ್​​​ ತಮ್ಮ ವಿರುದ್ಧದ ಆರೋಪಗಳು ಪಿತೂರಿಯೆಂದು ಆರೋಪಿಸಿ ಪೊಲೀಸ್ ಮಹಾನಿರ್ದೇಶಕರಿಗೆ ಪ್ರತಿದೂರು ಸಹ ಸಲ್ಲಿಸಿದ್ದಾರೆ.

ಇತ್ತೀಚೆಗೆ ನ್ಯಾಯಮೂರ್ತಿ ಹೇಮಾ ಸಮಿತಿ ವರದಿಯು ಮಲಯಾಳಂ ಚಿತ್ರರಂಗದ ದೌರ್ಜನ್ಯವನ್ನು ಬಹಿರಂಗಪಡಿಸಿದೆ. ಸಿದ್ದಿಕ್ ಜೊತೆಗೆ, ನಟರಾದ ಮುಖೇಶ್, ಜಯಸೂರ್ಯ, ಎಡವೆಲ ಬಾಬು, ಮಣಿಯನ್ಪಿಳ್ಳ ರಾಜು ಮತ್ತು ನಿರ್ದೇಶಕ ರಂಜಿತ್ ಸೇರಿದಂತೆ ಹಲವು ಪ್ರಮುಖ ವ್ಯಕ್ತಿಗಳು ಸಹ ಇದೇ ರೀತಿಯ ಗಂಭೀರ ಆರೋಪಗಳನ್ನು ಎದುರಿಸಿದ್ದಾರೆ.

ಇದನ್ನೂ ಓದಿ:50 ಸಿನಿಮಾಗಳಿಗೆ ಸಂಗೀತ ನೀಡಿದ ಅಜನೀಶ್‌ ಲೋಕನಾಥ್: ಸಿನಿಮಾ ನಿರ್ಮಾಣಕ್ಕಿಳಿದ ಸಂಗೀತ ನಿರ್ದೇಶಕ - B Ajaneesh Loknath

ಇತ್ತೀಚೆಗಷ್ಟೇ ನಟರ ವಿರುದ್ಧ ದೌರ್ಜನ್ಯದ ಆರೋಪ ಎಸಗಿರುವ ನಟಿಯರ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ. ವಿಶೇಷ ತನಿಖಾ ತಂಡ ಆಲುವಾದಲ್ಲಿರುವ ಫ್ಲ್ಯಾಟ್​​ ಒಂದಕ್ಕೆ ಆಗಮಿಸಿ ಕೆಲ ನಟಿಯರಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಮೂಡುಗಲ್ಲು ಕೇಶವನಾಥೇಶ್ವರನ ದರ್ಶನ ಪಡೆದ ರಿಷಬ್​​, ಜೂ.ಎನ್​ಟಿಆರ್​​, ಪ್ರಶಾಂತ್​ ನೀಲ್​ ಕುಟುಂಬ: ತಮ್ಮೂರು ಪರಿಚಯಿಸಿದ ಶೆಟ್ರು - Superstars Temple Visit

ಜನಪ್ರಿಯ ನಟ ಮಮ್ಮುಟ್ಟಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಯಾವುದೇ 'ಪವರ್​​ಹೌಸ್​' ಇಲ್ಲ. ಇದೀಗ ಕೇಳಿಬಂದಿರುವ ಆರೋಪಗಳ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details