ಹೈದರಾಬಾದ್: ಪ್ರಸ್ತುತ ಅಲ್ಲು ಅರ್ಜುನ್ ಜೊತೆಗೆ ಪುಷ್ಪ 2 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಇನ್ಸ್ಟಾಗ್ರಾಂಗೆ ಗೈರಾಗಿದ್ದ ರಶ್ಮಿಕಾ ಮಂದಣ್ಣ ಇದೀಗ ತಮ್ಮ ಎರಡು ಫೋಟೋಗಳನ್ನು ಹಂಚಿಕೊಂಡು, ಅಭಿಮಾನಿಗಳಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿಲ್ಲದ ಕಾರಣವನ್ನು ಬಹಿರಂಗ ಪಡಿಸಿದ್ದಾರೆ. ಅಭಿಮಾನಿಗಳ ಮುಂದೆ ಬರದೇ ಇರುವುದಕ್ಕೂ ರಶ್ಮಿಕಾ ಕ್ಷಮೆ ಕೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ಎಕ್ಸ್, ಇನ್ಸ್ಟಾಗ್ರಾಂ, ಹಾಗೂ ಫೇಸ್ಬುಕ್ಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಎರಡು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸುದೀರ್ಘವಾದ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಕೊಡಗಿನ ಕುವರಿ, ಅಭಿಮಾನಿಗಳು ಎಲ್ಲಿದ್ದೀರಾ? ವ್ಯಾಲೆಂಟೈನ್ಸ್ ಡೇ ಯೋಜನೆ ಏನು ಎಂದು ಹೇಳಿ ಎಂದು ಪೋಸ್ಟ್ ಹಾಕಿದ್ದಾರೆ. ಈ ಮೂಲಕ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಪೋಸ್ಟ್ನಲ್ಲಿ "ಕೆಲಕಾಲ ನಿಮ್ಮ ಮುಂದೆ ಬರದೇ ಇದ್ದದ್ದಕ್ಕೆ ಕ್ಷಮಿಸಿ. ಅತಿಯಾದ ಕೆಲಸದ ವೇಳಾಪಟ್ಟಿಯಿಂದಾಗಿ ಸ್ವಲ್ಪ ಅಸ್ವಸ್ಥಳಾಗಿದ್ದೇನೆ. ಆದರೆ ನಿಮ್ಮನ್ನೇ ಮಾತನಾಡಿಸಲೆಂದು ಬಂದಿದ್ದೇನೆ. ಅಭಿಮಾನಿಗಳೇ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ." ಎಂದು ಟ್ವೀಟ್ನಲ್ಲಿ ಹೇಳಿಕೊಂಡಿದ್ದಾರೆ.