ಸ್ಯಾಂಡಲ್ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಮುಂದಿನ ಬಹುನಿರೀಕ್ಷಿತ ಸಿನಿಮಾ 'ದ ಜಡ್ಜ್ಮೆಂಟ್'. ನ್ಯಾಯ ಕೊಡಿಸುವ ವಕೀಲನಾಗಿ ಅಭಿನಯಿಸಿರುವ ಚಿತ್ರದ ಕುತೂಹಲಕಾರಿ ಟೀಸರ್ ಅನಾವರಣಗೊಂಡಿದೆ.
ಸ್ಯಾಂಡಲ್ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಬಹು ತಾರಾಬಳಗ ಹೊಂದಿರುವ ದ ಜಡ್ಜ್ಮೆಂಟ್ ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಸದ್ಯ ಬಿಡುಗಡೆ ಆಗಿರುವ ಚಿತ್ರದ ಟೀಸರ್ ಪ್ರೇಕ್ಷಕರ ಕುತೂಹಲ ಕೆರಳಿಸಿದೆ. ಸಿನಿಮಾ ವೀಕ್ಷಿಸುವ ಸಿನಿಪ್ರಿಯರ ಕಾತರ ಹೆಚ್ಚಿಸಿದೆ.
ನಿರ್ಮಾಪಕ-ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ಮಾತನಾಡಿ, ಇತ್ತೀಚೆಗೆ ಡಾ. ರಾಜ್‍ಕುಮಾರ್ ಅವರ ಜನ್ಮದಿನೋತ್ಸವದಂದು ಚಿತ್ರದ ಚಿತ್ರೀಕರಣ ಮುಕ್ತಾಯ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಟೀಸರ್ ಸಹ ಬಿಡುಗಡೆಯಾಗಿದ್ದು, ಪ್ರಶಂಸೆಯ ಮಾತುಗಳು ಕೇಳಿ ಬರುತ್ತಿವೆ. ಮತ್ತೊಂದು ಖುಷಿಯ ವಿಚಾರವೆಂದರೆ ನಮ್ಮ ಚಿತ್ರದ ವಿತರಣೆ ಹಕ್ಕನ್ನು ಪ್ರತಿಷ್ಠಿತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ.
ಸ್ಯಾಂಡಲ್ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಈ ಹೆಸರಾಂತ ಸಂಸ್ಥೆಯ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಈ ಚಿತ್ರದ ವಿತರಣೆ ಅಷ್ಟೇ ಅಲ್ಲದೇ, ಮುಂದೆ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುವ ಚಿತ್ರಗಳ ನಿರ್ಮಾಣದಲ್ಲೂ ಸಹಯೋಗ ನೀಡುವುದಾಗಿ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ತಿಳಿಸಿದೆ. ಈವರೆಗೂ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ಈ ಸಂಸ್ಥೆ ವಿತರಣೆ ಮಾಡಿದೆ. ಆ ಪೈಕಿ 19 ಚಿತ್ರಗಳು ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿರುವ ಚಿತ್ರಗಳಾಗಿವೆ. ಇಂತಹ ಸಂಸ್ಥೆ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ. ಕೋರ್ಟ್ ಡ್ರಾಮಾ ಜಾನರ್ನ ಈ ಚಿತ್ರವನ್ನು ಶೀಘ್ರದಲ್ಲೇ ತೆರೆಗೆ ತರುವುದಾಗಿ ಮಾಹಿತಿ ಹಂಚಿಕೊಂಡರು.
ಇದನ್ನೂ ಓದಿ:ರಿಷಿ ಅಭಿನಯದ 'ರುದ್ರ ಗರುಡ ಪುರಾಣ'ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಾಥ್ - Rudhra Garuda Purana
ವಿ. ರವಿಚಂದ್ರನ್ ಅಲ್ಲದೇ ದಿಗಂತ್ , ಧನ್ಯಾ ರಾಮ್ಕುಮಾರ್, ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್ ಇದೆ. ಜಿ9 ಕಮ್ಯುನಿಕೇಶನ್ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣ ಆಗಿರುವ ಈ ಚಿತ್ರಕ್ಕೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಕೆಂಪರಾಜ್ ಅವರ ಸಂಕಲನವಿದೆ. ಸದ್ಯ ಟೀಸರ್ನಿಂದ ಗಮನ ಸೆಳೆಯುತ್ತಿರೋ ದ ಜಡ್ಜ್ಮೆಂಟ್ ಚಿತ್ರ ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ. ಕ್ರೇಜಿಸ್ಟಾರ್ ಮುಖ್ಯಭೂಮಿಕೆಯ ಈ ಸಿನಿಮಾ ಎಷ್ಟರ ಮಟ್ಟಿಗೆ ಗೆಲ್ಲಲಿದೆ ಅನ್ನೋದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ:'ವೀರ್' ಆಗಿ ಜೆ.ಕೆ: ಯುವ ನಿರ್ದೇಶಕನ ಜೊತೆ ಕೈ ಜೋಡಿಸಿದ ಕಾರ್ತಿಕ್ ಜಯರಾಮ್ - The Veer